ರಾಜ್ಯ ಆರೋಗ್ಯ ಇಲಾಖೆಯಿಂದ ಡೆಂಗ್ಯೂ ಡೆತ್ ಆಡಿಟ್

Public TV
1 Min Read

– ಖಾಸಗಿ ಆಸ್ಪತ್ರೆಗಳಲ್ಲಿ ಡೆಂಗ್ಯೂಗೆ ಬಲಿಯಾದವರ ಮಾಹಿತಿ ನೀಡಲು ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ (Dengue) ಆರ್ಭಟ ಹೆಚ್ಚಾಗುತ್ತಿದೆ. ಮತ್ತೊಂದು ಕಡೆ ಡೆಂಗ್ಯೂಗೆ ಸಾವು ಕೂಡ ಆತಂಕ ಮೂಡಿಸುತ್ತಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಡೆಂಗ್ಯೂಗೆ ಬಲಿಯಾದವರ ಮಾಹಿತಿ ನೀಡಲು ಆರೋಗ್ಯ ಸಚಿವರು (Dinesh Gundu Rao) ಸೂಚಿಸಿದ್ದಾರೆ. ಜೊತೆಗೆ ಡೆತ್ ಆಡಿಟ್ (Death Audit) ಮಾಡಲು ಮುಂದಾಗಿದ್ದಾರೆ.

ಬೆಂಗಳೂರು (Bengaluru) ಸೇರಿದಂತೆ ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಾಗುತ್ತಿದೆ. 5,374ಕ್ಕೂ ಹೆಚ್ಚು ಕೇಸ್ ದಾಖಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಒಂದೂವರೆ ಸಾವಿರ ಸನಿಹಕ್ಕೆ ತಲುಪಿದೆ. ಹೀಗಾಗಿ ಆತಂಕ ಮೂಡಿಸಿದೆ. ಕೇಸ್ ಒಂದು ಕಡೆ ಆದರೆ ಮತ್ತೊಂದು ಕಡೆ ಸಾವು ಕೂಡ ಸಂಭವಿಸುತ್ತಿದೆ. ಇದುವರೆಗೂ ರಾಜ್ಯದಲ್ಲಿ ಡೆಂಗ್ಯೂಗೆ ಏಳು ಸಾವಾಗಿದೆ. ಹೀಗಾಗಿ ಸಾವಿನ ಬಗ್ಗೆ ಡೆತ್ ಆಡಿಟ್ ಮಾಡೋದಕ್ಕೆ ಆರೋಗ್ಯ ಇಲಾಖೆ ಮುಂದಾಗಿದ್ದಾರೆ. ಇದನ್ನೂ ಓದಿ: ಟಿ20 ವಿಶ್ವಕಪ್‌ – ಭಾರತದ ಪರ ವಿಶಿಷ್ಟ ದಾಖಲೆ ಬರೆದ ಹಿಟ್‌ಮ್ಯಾನ್‌

ಖಾಸಗಿ ಆಸ್ಪತ್ರೆಗಳು ಕೂಡ ಡೆಂಗ್ಯೂ ಡೆತ್‌ಗಳನ್ನು ಮತ್ತು ಡೆಂಗ್ಯೂ ಕೇಸ್‌ಗಳನ್ನು ನೋಟಿಫೈ ಮಾಡಬೇಕಾಗುತ್ತದೆ. ಯಾವುದೇ ಖಾಸಗಿ ಆಸ್ಪತ್ರೆಗೆ ಬರುವ ಡೆಂಗ್ಯೂ ಪ್ರಕರಣದ ಬಗ್ಗೆ ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕು ಜೊತೆಗೆ ವೆಬ್‌ಸೈಟ್‌ನಲ್ಲಿ ಅಪ್ಲೋಡ್ ಮಾಡಬೇಕು. ಡೆತ್ ಮಾಹಿತಿಯನ್ನು ಹಂಚಿಕೊಳ್ಳಲು ಸಚಿವರು ಸೂಚಿಸಿದ್ದು, ಖಾಸಗಿ ಆಸ್ಪತ್ರೆಯವರು ಡೆಂಗ್ಯೂ ಮಾಹಿತಿಯನ್ನು ಮುಚ್ಚಿಡುವಂತಿಲ್ಲ. ಇದನ್ನೂ ಓದಿ: ವಿಶ್ವಕಪ್‌ ಗೆದ್ದ ಬೆನ್ನಲ್ಲೇ ಟಿ20 ಕ್ರಿಕೆಟ್‌ಗೆ ಗುಡ್‌ಬೈ ಹೇಳಿದ ಕೊಹ್ಲಿ

ಡೆಂಗ್ಯೂ ಪ್ರಕರಣ ಹೆಚ್ಚಾಗುತ್ತಿದ್ದು, ಸಾಕಷ್ಟು ನಿಯಂತ್ರಣ ಕ್ರಮಗಳನ್ನು ಆರೋಗ್ಯ ಇಲಾಖೆ ಮಾಡುತ್ತಿದೆ. ಈಗ ಆಗಿರುವ ಸಾವುಗಳ ಬಗ್ಗೆ ಡೆತ್ ಆಡಿಟ್ ಮಾಡುತ್ತೇವೆ ಎಂದು ಹೇಳುತ್ತಿದ್ದು, ಆಡಿಟ್‌ನಲ್ಲಿ ಏನು ವರದಿ ಬರಲಿದೆಯೋ ಕಾದು ನೋಡಬೇಕಿದೆ. ಇದನ್ನೂ ಓದಿ: ವಿಶ್ವಕಪ್‌ ಜೊತೆ ವಿಶ್ವದಾಖಲೆ – ಟೀಂ ಇಂಡಿಯಾದ ಸಾಧನೆ ಮುರಿಯುವುದು ಬಲು ಕಷ್ಟ

Share This Article