ಒಂದೇ ಫ್ಲೈಟ್‌ನಲ್ಲಿ ಕಾಣಿಸಿಕೊಂಡ ಡಿಕೆಶಿ, ಸೋಮಶೇಖರ್‌

Public TV
1 Min Read

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹಾಗೂ ಬಿಜೆಪಿ ಶಾಸಕ ಎಸ್‌.ಟಿ.ಸೋಮಶೇಖರ್‌ ಇಬ್ಬರೂ ಒಂದೇ ಫೈಟ್‌ನಲ್ಲಿ ಕಾಣಿಸಿಕೊಂಡಿದ್ದಾರೆ.

ಕರ್ನಾಟಕ ಬ್ಯಾಂಕ್ ಕಾರ್ಯಕ್ರಮಕ್ಕೆ ಇಬ್ಬರೂ ನಾಯಕರು ಒಂದೇ ವಿಮಾನದಲ್ಲಿ ತೆರಳಿದ್ದರು. ಇದನ್ನೂ ಓದಿ: ಗ್ಯಾರಂಟಿ ಘೋಷಿಸಿದಾಗ ನಮ್ಮ ವಿರೋಧಿಗಳು ರಾಜ್ಯ ದಿವಾಳಿ ಆಗುತ್ತೆ ಅಂದಿದ್ರು, ಈಗ ರಾಜ್ಯ ಸುಭದ್ರವಾಗಿದೆ: ಸಿಎಂ

ಎಸ್‌.ಟಿ.ಸೋಮಶೇಖರ್‌ ಅವರು ಬಿಜೆಪಿ ಸೇರಿದ ಮೇಲೆ ಡಿ.ಕೆ.ಶಿವಕುಮಾರ್‌ ಜೊತೆ ಕಾಣಿಸಿಕೊಳ್ಳುತ್ತಿರುವುದು ಇದೇ ಮೊದಲೇನಲ್ಲ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಸೋಮಶೇಖರ್‌ ಹಲವು ಕಾರ್ಯಕ್ರಮಗಳಲ್ಲಿ ಡಿಕೆಶಿ ಜೊತೆ ಕಾಣಿಸಿಕೊಂಡಿದ್ದಾರೆ.

ಸಹಕಾರಿ ಕ್ಷೇತ್ರದಲ್ಲಿ ನಾನು ಬೆಳೆಯಲು ನನ್ನ ಗುರುಗಳಾದ ಡಿ.ಕೆ.ಶಿವಕುಮಾರ್‌ ಕಾರಣ ಎಂದು ಈ ಹಿಂದೆ ಹೇಳಿಕೊಂಡಿದ್ದರು. ಅದಾದ ಬಳಿಕ ಬಿಜೆಪಿ ಪಕ್ಷದ ಹಲವಾರು ಕಾರ್ಯಕ್ರಮ, ಸಭೆಗಳಲ್ಲಿ ಸೋಮಶೇಖರ್‌ ಗೈರಾಗಿದ್ದರು. ಇದನ್ನೂ ಓದಿ: ಸುಪ್ರೀಂ ಕೋರ್ಟ್ ಹೇಳಿದ ಜಾಗದಲ್ಲಿ ರಾಮಮಂದಿರ ಕಟ್ಟಿಲ್ಲ: ಸಂತೋಷ ಲಾಡ್ ಆರೋಪ

ಕಾಂಗ್ರೆಸ್‌ ಸರ್ಕಾರದ ಬಜೆಟ್‌ ಬಗ್ಗೆ ವಿಪಕ್ಷಗಳು ಟೀಕೆ ವ್ಯಕ್ತಪಡಿಸಿದ್ದವು. ಆದರೆ ಸೋಮಶೇಖರ್‌ ಅವರು ಬಜೆಟ್‌ ಜನಪರ, ಅಭಿವೃದ್ಧಿ ಪರವಾಗಿದೆ ಎಂದು ಬಣ್ಣಿಸಿದ್ದರು. ಅವರ ರಾಜಕೀಯ ನಡೆ ಕುತೂಹಲ ಮೂಡಿಸಿದೆ.

Share This Article