ಮುಸ್ಲಿಂ ಮಹಿಳೆಯರು ‘ಬೇಬಿ ಫ್ಯಾಕ್ಟರಿ’ ಎಂದು ಪೋಸ್ಟ್ ಹಾಕಿದ RSS ಕಾರ್ಯಕರ್ತ ಅರೆಸ್ಟ್

Public TV
1 Min Read

ರಾಯಚೂರು: ಲಿಂಗಸುಗೂರಿನಲ್ಲಿ ವ್ಯಕ್ತಿಯೋರ್ವ ಮುಸ್ಲಿಂ ಮಹಿಳೆಯರ (Muslim Women) ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಹಿನ್ನೆಲೆ ಉದ್ರಿಕ್ತಗೊಂಡ ಗುಂಪು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದೆ.

‘ಬೇಬಿ ಫ್ಯಾಕ್ಟರಿ’ (Baby Factory) ಪೋಸ್ಟ್ ಹಾಕಿದ ವ್ಯಕ್ತಿಯ ಬಂಧನಕ್ಕೆ ಒತ್ತಾಯಿಸಿ ಲಿಂಗಸುಗೂರು ಪೊಲೀಸ್ ಠಾಣೆಗೆ ರಾತ್ರಿವೇಳೆ ಮುತ್ತಿಗೆ ಹಾಕಲು ಯತ್ನಿಸಿದರು. ಆರ್ ಎಸ್ ಎಸ್ ಕಾರ್ಯಕರ್ತ ರಾಜು ತಂಬಾಕೆ (RSS Activist Raju Tambake) ತನ್ನ ಮೊಬೈಲ್ ನಲ್ಲಿ ಸ್ಟೇಟಸ್ ಹಾಕಿದ್ದು ಆಕ್ರೋಶಕ್ಕೆ ಕಾರಣವಾಗಿದೆ.

ಪರಿಸ್ಥಿತಿ ಗಂಭೀರಗೊಳ್ಳುತ್ತಿದ್ದಂತೆ ಪ್ರಕರಣ ದಾಖಲಿಸಿಕೊಂಡ ಪೆÇಲೀಸರು ಆರೋಪಿಯನ್ನ ಬಂಧಿಸಿದ್ದಾರೆ. ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ರಾಜು ತಂಬಾಕೆಯನ್ನ ನ್ಯಾಯಾಂಗ ಬಂಧನಕ್ಕೆ ಪೊಲೀಸರು ಒಪ್ಪಿಸಿದ್ದಾರೆ. ಆರೋಪಿ ಬಂಧನ ಹಿನ್ನೆಲೆ ಲಿಂಗಸುಗೂರು ಪಟ್ಟಣದ ಪರಸ್ಥಿತಿ ನಿಯಂತ್ರಣಕ್ಕೆ ಬಂದಿದೆ.

Share This Article