ರಾಯಚೂರು: ದೇವದುರ್ಗ ಶಾಸಕಿ ಕರೆಮ್ಮ ಜಿ ನಾಯಕ್ (Karemma Nayak) ಕಾರು ಅಪಘಾತವಾಗಿರುವ ಘಟನೆ ಲಿಂಗಸುಗೂರು ತಾಲೂಕಿನ ಗುರಗುಂಟಾ ಪಟ್ಟಣದಲ್ಲಿ ನಡೆದಿದೆ.
ದೇವದುರ್ಗದಿಂದ ಹುಬ್ಬಳ್ಳಿಗೆ ಹೊರಟಿದ್ದ ವೇಳೆ ಅಪಘಾತವಾಗಿದೆ. ಶಾಸಕಿಗೆ ಸಣ್ಣಪುಟ್ಟ ಒಳಪೆಟ್ಟು ಬಿದ್ದಿದ್ದು, ಲಿಂಗಸುಗೂರು ತಾಲೂಕು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಇದನ್ನೂ ಓದಿ: ಶಾಸಕರಿಗೆ ತಾಳ್ಮೆ ಇಲ್ಲ, ಕಾರ್ಯಕ್ರಮ ಹಾಳು ಮಾಡಲು ಬಂದಿದ್ದಾರೆ: ಮುನಿರತ್ನ ವಿರುದ್ಧ ಡಿಕೆಶಿ ಕಿಡಿ
ತಮ್ಮದೇ ಕಾರುಗಳ ನಡುವೆ ಅಪಘಾತ ಸಂಭವಿಸಿದೆ. ಹುಬ್ಬಳ್ಳಿಗೆ ಮೂರು ಕಾರುಗಳು ಹೊರಟಿದ್ದವು. ಮೂರು ಕಾರುಗಳ ಪೈಕಿ ನಡುವಿನ ಕಾರಿನಲ್ಲಿ ಶಾಸಕಿ ಇದ್ದರು. ತಮ್ಮದೇ ಕಾರ್ಯಕರ್ತರೊಂದಿಗೆ ಹುಬ್ಬಳ್ಳಿಗೆ ತೆರಳುತ್ತಿದ್ದ ವೇಳೆ ಅವಘಡ ನಡೆದಿದೆ.