5.71 ಲಕ್ಷ ನೀಡಿ ಮಾಳಿಂಗರಾಯ ಗದ್ದುಗೆಯ ತೆಂಗಿನಕಾಯಿ ಪಡೆದ ಭಕ್ತ

Public TV
1 Min Read

ಬಾಗಲಕೋಟೆ: ಜಿಲ್ಲೆಯ ಜಮಖಂಡಿ (Jamkhandi)  ತಾಲೂಕಿನ ಚಿಕ್ಕಲಕಿ ಗ್ರಾಮದ ನಡೆದ ಮಾಳಿಂಗರಾಯ ಜಾತ್ರೆಯಲ್ಲಿ ದಾಖಲೆ ಮೊತ್ತಕ್ಕೆ ಮಾಳಿಂಗರಾಯ ಗದ್ದುಗೆಯ (Malingaraya-Gadduge)  ತೆಂಗಿನಕಾಯಿ ಹರಾಜು ಆಗಿದೆ.

ವಿಜಯಪುರ ಜಿಲ್ಲೆಯ ತಿಕೋಟಾ ಗ್ರಾಮದ ಭಕ್ತನಾದ (Devotee) ಮಾಹಾವೀರ ಹರಕೆಯವರು ಹರಾಜಿನಲ್ಲಿ ದೇವರ ಮುಂದಿನ ಈ ತೆಂಗಿನಕಾಯಿಯನ್ನು 5,71,001 ರೂ.ಗೆ ಪಡೆದುಕೊಂಡಿದ್ದಾರೆ. ಈ ತೆಂಗಿನಕಾಯಿಯನ್ನು ಪಡೆಯಲು ಚಿಕ್ಕಲಕಿ ಗ್ರಾಮದ ಮುದುಕಪ್ಪ ಮಾಳಪ್ಪ ಪಟೇದ್ದಾರ ಮತ್ತು ಗೋಠೆ ಗ್ರಾಮದ ಸದಾಶಿವ ಮೈಗೂರರವರ ಮಧ್ಯೆ ಸ್ಪರ್ಧೆ ಏರ್ಪಟ್ಟಿತ್ತು. ಇದನ್ನೂ ಓದಿ: ಬುರುಡೆ ಕೇಸ್ ಎಸ್‌ಐಟಿಯಿಂದ ಸತತ 12 ಗಂಟೆ ತಿಮರೋಡಿ ಮನೆ ಶೋಧ

 

ತೆಂಗಿನಕಾಯಿಯ ವಿಶೇಷ ಏನು?
ಮಹಿಮಾಂತ ಮಾಳಿಂಗರಾಯ ದೇವರ ಗದ್ದುಗೆ ಮೇಲೆ ಈ ತೆಂಗಿನಕಾಯಿಯನ್ನು ಶ್ರಾವಣ ಮಾಸದ ಒಂದು ತಿಂಗಳ ಕಾಲ ಪೂಜಿಸಲಾಗಿರುತ್ತದೆ. ಇದೇ ತೆಂಗಿನ ಕಾಯಿಯನ್ನು ಹಿಂದೊಮ್ಮೆ ಮಾಹಾವೀರ ಹರಕೆಯವರು ಹರಾಜಿನಲ್ಲಿ 6,50,001 ರೂ.ಗೆ ಪಡೆದುಕೊಂಡಿದ್ದರು. ಈಗ ಮತ್ತೆ ದಾಖಲೆಯ ಮೊತ್ತಕ್ಕೆ ಮಹಾಳಿಂಗರಾಯನ ತೆಂಗಿನಕಾಯಿ ತಮ್ಮದಾಗಿಸಿಕೊಂಡು ವಿಶೇಷ ಭಕ್ತಿ ಪ್ರದರ್ಶಿಸಿದ್ದಾರೆ.

ಈ ಸಂದರ್ಭದಲ್ಲಿ ಮಾಳಿಂಗರಾಯ ಪಟ್ಟದ ದೇವರು ಗುರು ಮುತ್ಯಾ ಬಬಲಾದಿ, ಮಾಳಿಂಗರಾಯ ದೇವರ ಅರ್ಚಕರಾದ ಸಿದ್ದಣ ಪೂಜಾರಿ, ಹಿರಿಯರಾದ ದುಂಡಪ್ಪ ಬಬಲಾದಿ, ಕಲ್ಲಪ್ಪ ಗಿಡಗಿಂಚಿ, ಗ್ರಾಮಪಂಚಾಯತ್ ಸದಸ್ಯರರಾದ ಬಸವರಾಜ ಆಲಗೂರ, ಸಂತೋಷ ಮಮದಾಪೂರ, ಜಾತ್ರೆಯಲ್ಲಿ ನೇರೆದಿದ್ದ ಭಕ್ತ ಸಮೂಹ ಉಪಸ್ಥಿತರಿದ್ದರು.

Share This Article