ವೀಕೆಂಡ್‌ನಲ್ಲಿ ಹಾಸನಾಂಬೆ ದರ್ಶನಕ್ಕೆ ಭಕ್ತಸಾಗರ

Public TV
0 Min Read

– ದೇವಿ ದರ್ಶನ ಪಡೆಯಲಿದ್ದಾರೆ ಕೇಂದ್ರ ಸಚಿವ ಕುಮಾರಸ್ವಾಮಿ

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬಾ ದೇವಿಯ ದರ್ಶನ ಪಡೆಯಲು ಅಪಾರ ಸಂಖ್ಯೆಯಲ್ಲಿ ಭಕ್ತರು ಬರುತ್ತಿದ್ದಾರೆ.

ಭಾನುವಾರ ವೀಕೆಂಡ್ ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ತಡರಾತ್ರಿಯಿಂದಲೇ ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತರು ಬೆಳಗ್ಗೆ ದೇವಿ ದರ್ಶನ ಪಡೆದು ಪುನೀತರಾದರು. 1,000 ರೂ., 300 ರೂ. ಶುಲ್ಕವಿರುವ ವಿಶೇಷ ದರ್ಶನದ ಸಾಲುಗಳು ಕೂಡ ಭರ್ತಿಯಾಗಿವೆ.

ರಾಜ್ಯ, ದೇಶ-ವಿದೇಶಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ದೇವಿ ದರ್ಶನ ಪಡೆಯುತ್ತಿದ್ದಾರೆ. ಇಂದು ಬೆಳಗ್ಗೆ 10 ಗಂಟೆಗೆ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರು ಹಾಸನಾಂಬೆ ದೇವಿ ದರ್ಶನ ಪಡೆಯಲಿದ್ದಾರೆ.

Share This Article