ರಾಯಚೂರು: ಕಲಿಯುಗ ಕಾಮಧೇನು ಮಂತ್ರಾಲಯದ (Mantralaya) ಶ್ರೀ ರಾಘವೇಂದ್ರ ಸ್ವಾಮಿ ಮಠದ (Shri Raghavendra Swamy Mutt) ಏಪ್ರಿಲ್ ತಿಂಗಳಿನ 22 ದಿನದ ಕಾಣಿಕೆ ಹುಂಡಿ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, 3.25 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ.

ಬಿರು ಬೇಸಿಗೆಯಲ್ಲೂ ಶಾಲಾ, ಕಾಲೇಜು ರಜಾ ಹಿನ್ನೆಲೆ ಭಕ್ತರು ದಂಡು ರಾಯರ ಮಠಕ್ಕೆ ಹರಿದು ಬಂದಿದೆ. ಏಪ್ರಿಲ್ ತಿಂಗಳ ಮೊದಲ 22 ದಿನಗಳಲ್ಲೇ ಗುರುರಾಘವೇಂದ್ರ ಸ್ವಾಮಿ ಮಠಕ್ಕೆ ಕೋಟ್ಯಾಂತರ ರೂಪಾಯಿ ಕಾಣಿಕೆ ಹರಿದು ಬಂದಿದ್ದು, ಸಂಗ್ರಹವಾದ ಕಾಣಿಕೆಯಲ್ಲಿ 3,15,62,354 ರೂ. ಕರೆನ್ಸಿ ನೋಟುಗಳು ಹಾಗೂ 10,34,500 ರೂ. ನಾಣ್ಯಗಳು ಸಂಗ್ರಹವಾಗಿವೆ. 47 ಗ್ರಾಂ ಚಿನ್ನ, 592 ಗ್ರಾಂ ಬೆಳ್ಳಿಯನ್ನ ಕಾಣಿಕೆ ರೂಪದಲ್ಲಿ ಭಕ್ತರು ನೀಡಿದ್ದಾರೆ.ಇದನ್ನೂ ಓದಿ:ಇಸ್ರೇಲ್-ಲೆಬನಾನ್ ಕದನ ವಿರಾಮ 3 ವಾರಗಳವರೆಗೆ ವಿಸ್ತರಣೆ: ಟ್ರಂಪ್ ಸಂಧಾನ ಯಶಸ್ವಿ

ಮಂತ್ರಾಲಯ ರಾಯರ ಮಠದಲ್ಲಿ ನಡೆಸಲಾದ ಹುಂಡಿ ಎಣಿಕೆ (Hundi Counting) ಕಾರ್ಯ ಮುಕ್ತಾಯವಾಗಿದ್ದು, ಎಣಿಕೆ ಕಾರ್ಯದಲ್ಲಿ ಮಠದ ನೂರಾರು ಸಿಬ್ಬಂದಿ, ಭಜನಾ ಮಂಡಳಿ, ಕರ ಸೇವಕರು ಭಾಗವಹಿಸಿದ್ದರು.



