ನವದೆಹಲಿ: ಹಬ್ಬದ ಋತುವಿನಲ್ಲಿ ಪ್ರಯಾಣಿಕರ ಒತ್ತಡವನ್ನು ನಿರ್ವಹಿಸಲು ವಿಮಾನಯಾನ ಸಂಸ್ಥೆಗಳು ಹೆಚ್ಚಿನ ವಿಮಾನಗಳ ವ್ಯವಸ್ಥೆ ಮಾಡಲು ಮತ್ತು ಟಿಕೆಟ್ ದರಗಳನ್ನು ಸೀಮಿತಗೊಳಿಸಲು ಭಾರತೀಯ ನಾಗರಿಕ ವಿಮಾನಯಾನ ನಿರ್ದೇಶನಾಲಯ (DGCA) ಸೂಚಿಸಿದೆ.
ದೀಪಾವಳಿ, ಛತ್ ಮತ್ತು ಇತರ ಹಬ್ಬಗಳ ಸಮಯದಲ್ಲಿ ವಿಮಾನಯಾನದ ಬೇಡಿಕೆಯ ಏರಿಕೆಯನ್ನು ಗಮನದಲ್ಲಿಟ್ಟುಕೊಂಡು, ಪ್ರಯಾಣಿಕರಿಗೆ ಕೈಗೆಟುಕುವ ದರದಲ್ಲಿ ಟಿಕೆಟ್‌ಗಳು ಲಭ್ಯವಾಗುವಂತೆ ಮತ್ತು ಪ್ರಯಾಣದ ಅವಕಾಶಗಳು ಹೆಚ್ಚಾಗುವಂತೆ ಈ ಕ್ರಮ ಕೈಗೊಳ್ಳಲಾಗಿದೆ. ಡಿಜಿಸಿಎ ತನ್ನ ಆದೇಶದಲ್ಲಿ, ವಿಮಾನಯಾನ ಸಂಸ್ಥೆಗಳು (MoCA) ತಮ್ಮ ಟಿಕೆಟ್ ದರಗಳನ್ನು ಸಮಂಜಸವಾಗಿಡಲು ಮತ್ತು ದರಗಳ ಏರಿಕೆಯನ್ನು ತಡೆಯಲು ಕ್ರಮ ಕೈಗೊಳ್ಳಬೇಕು ಎಂದು ಸ್ಪಷ್ಟಪಡಿಸಿದೆ. ಅಲ್ಲದೆ ಹೆಚ್ಚಿನ ಬೇಡಿಕೆಯಿರುವ ಮಾರ್ಗಗಳಲ್ಲಿ ವಿಮಾನಗಳ ಸಂಖ್ಯೆಯನ್ನು ಹೆಚ್ಚಿಸಲು ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಕ್ರಿಮಿನಾಶಕ ಸಿಂಪಡಿಸಿದ್ದ ಆಹಾರ ಸೇವನೆ ಶಂಕೆ – 60ಕ್ಕೂ ಹೆಚ್ಚು ಕುರಿಗಳು ಸಾವು
ಇದರಿಂದಾಗಿ ಪ್ರಯಾಣಿಕರಿಗೆ ಹೆಚ್ಚಿನ ಆಯ್ಕೆಗಳು ದೊರೆತು, ಟಿಕೆಟ್ ದರಗಳ ಮೇಲಿನ ಒತ್ತಡ ಕಡಿಮೆಯಾಗುವ ನಿರೀಕ್ಷೆಯಿದೆ. ಈ ಕ್ರಮವು ಪ್ರಯಾಣಿಕರಿಗೆ ಹಬ್ಬದ ಸಮಯದಲ್ಲಿ ತಮ್ಮ ಕುಟುಂಬದೊಂದಿಗೆ ಸೇರಿಕೊಳ್ಳಲು ತವರಿಗೆ ತೆರಳುವವರಿಗೆ ಸಹಾಯಕವಾಗಲಿದೆ. ಡಿಜಿಸಿಎ ಈ ಆದೇಶದ ಅನುಷ್ಠಾನವನ್ನು ಕಟ್ಟುನಿಟ್ಟಾಗಿ ಪರಿಶೀಲಿಸಲಿದ್ದು, ವಿಮಾನಯಾನ ಸಂಸ್ಥೆಗಳು ಈ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸೂಚಿಸಿದೆ . ಇದನ್ನೂ ಓದಿ: ಒಂದು ತಿಂಗಳ ಒಳಗೆ ಫ್ರೆಂಚ್ ಪ್ರಧಾನಿ ಪಟ್ಟದಿಂದ ಇಳಿದ ಲೆಕೋರ್ನು – 3 ವರ್ಷದಲ್ಲಿ 7 ಮಂದಿ ರಾಜೀನಾಮೆ