ತಮಿಳಿನ ನಟ ಕಾರ್ತಿ ಜೊತೆ ಶ್ರೀಲೀಲಾ ಡ್ಯುಯೇಟ್

Public TV
1 Min Read

ನ್ನಡತಿ ಶ್ರೀಲೀಲಾ (Sreeleela) ‘ಗುಂಟೂರು ಖಾರಂ’ ಸಿನಿಮಾದ ನಂತರ ಸೈಲೆಂಟ್ ಆಗಿದ್ದಾರೆ. ಸಾಲು ಸಾಲು ತೆಲುಗಿನ ಎರಡ್ಮೂರು ಸಿನಿಮಾಗಳು ಮಕಾಡೆ ಮಲಗಿದ ಬೆನ್ನಲ್ಲೇ ನಟಿ ಕಾಲಿವುಡ್‌ನತ್ತ ಮುಖ ಮಾಡಿದ್ದಾರೆ. ತಮಿಳು ನಟ ಕಾರ್ತಿ ಮುಂದಿನ ಚಿತ್ರಕ್ಕೆ ಶ್ರೀಲೀಲಾ ಜೋಡಿಯಾಗಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಇದನ್ನೂ ಓದಿ:ಅಭಿಮಾನಿಗಳಿಗೆ ಹೊಸ ಸಿನಿಮಾದ ಗುಡ್ ನ್ಯೂಸ್ ಕೊಟ್ಟ ಶಾರುಖ್

ಸೂರ್ಯ ಸಹೋದರ ಕಾರ್ತಿ (Actor Karthi) ಕೂಡ ಕಾಲಿವುಡ್ ವಿಭಿನ್ನ ಸಿನಿಮಾಗಳನ್ನು ಆಯ್ಕೆ ಮಾಡಿಕೊಳ್ಳುವ ಮೂಲಕ ಅಭಿಮಾನಿಗಳ ಮನಗೆದ್ದಿದ್ದಾರೆ. ಇದೀಗ ಅವರ ಮುಂಬರುವ ಸಿನಿಮಾಗಾಗಿ ಶ್ರೀಲೀಲಾರನ್ನು ಚಿತ್ರತಂಡ ಸಂಪರ್ಕಿಸಿದೆ ಎನ್ನಲಾಗಿದೆ. ನಾಯಕಿಯಾಗಲು ಶ್ರೀಲೀಲಾ ಸೂಕ್ತ ಎಂದು ಚಿತ್ರತಂಡ ನಿರ್ಧರಿಸಿದೆ. ನಟಿ ಕಥೆ ಕೇಳಿ ಗ್ರೀನ್ ಸಿಗ್ನಲ್ ಕೊಟ್ರಾ ಎಂಬುದು ಇನ್ನೂ ಖಾತ್ರಿ ಆಗಿಲ್ಲ. ಇಬ್ಬರ ಕಾಂಬಿನೇಷನ್‌ನಲ್ಲಿ ರೊಮ್ಯಾಂಟಿಕ್‌ ಸಿನಿಮಾ ಮಾಡಲು ಚಿತ್ರತಂಡ ಪ್ಲ್ಯಾನ್‌ ಮಾಡಿದೆ.

ತಮಿಳಿನ ನಟ ಅಜಿತ್ ಕುಮಾರ್ (Ajith Kumar) ನಟನೆಯ ‘ಗುಡ್ ಬ್ಯಾಡ್ ಅಗ್ಲಿ’, ದಳಪತಿ ವಿಜಯ್ ನಟನೆಯ ‘ಗೋಟ್’ ಚಿತ್ರದಲ್ಲಿ ಶ್ರೀಲೀಲಾ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು. ಈ ಪ್ರಾಜೆಕ್ಟ್‌ಗಳ ಬಗ್ಗೆ ಇನ್ನೂ ಅಧಿಕೃತ ಘೋಷಣೆ ಆಗಿಲ್ಲ.

ಬೆಂಗಳೂರಿನ ಬೆಡಗಿ ಶ್ರೀಲೀಲಾ ಕಿಸ್, ಭರಾಟೆ ಸಿನಿಮಾಗಳ ನಂತರ ಟಾಲಿವುಡ್‌ಗೆ ಎಂಟ್ರಿ ಕೊಟ್ಟರು. ಪೆಳ್ಳಿ ಸಂದಡಿ, ಧಮಾಕ, ಭಗವಂತ ಕೇಸರಿ, ಸ್ಕಂದ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದರು. ಈಗ ಶ್ರೀಲೀಲಾ ತಮಿಳಿನಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.

Share This Article