ಸೆನ್ಸಾರ್ ಪಾಸ್: ಧರ್ಮ ಕೈಯಲ್ಲಿ ತಲ್ವಾರ್, ರೌಡಿ ಕಲ್ಕಿಯಾದ ಜೆಕೆ

Public TV
2 Min Read

ರ್ಮ ಕೀರ್ತಿರಾಜ್ (Dharma Keerthiraj) ಹಾಗೂ ಅದಿತಿ ಅಭಿನಯದ ‘ತಲ್ವಾರ್’ (Talwar) ಚಿತ್ರ ವೀಕ್ಷಿಸಿದ ಸೆನ್ಸಾರ್ (Censor) ಮಂಡಳಿಯು ಯಾವುದೇ ಕಟ್ಸ್ ಮತ್ತು ಮ್ಯೂಟ್ಸ್ ಇಲ್ಲದೆ ಚಿತ್ರಕ್ಕೆ ಯು/ಎ ಪ್ರಮಾಣ ಪತ್ರ ನೀಡಿದೆ. ಇದೊಂದು ವಿಭಿನ್ನ ರೌಡಿಸಂ ಕಥಾಹಂದರ ಹೊಂದಿರುವ ಸಿನಿಮಾಗಿದ್ದು,  ಈ ಚಿತ್ರದಲ್ಲಿ  ಕ್ಯಾಟ್ ಬರೀಸ್ ಎಂದೇ ಕರೆಸಿಕೊಳ್ಳುವ   ಧರ್ಮ ಕೀರ್ತಿರಾಜ್ ಖಳನಟನ  ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಧರ್ಮ ಕೀರ್ತಿರಾಜ್ ಅವರಿಗೂ ಈ ಸಿನಿಮಾ ಹೊಸ ಇಮೇಜ್ ಸಿಗುತ್ತದೆ ಎಂಬ ಭರವಸೆ ಇದೆ.

ಕಥೆ, ಚಿತ್ರಕಥೆ  ಸಂಭಾಷಣೆ ಬರೆದು ರಾಘವ ಮುರಳಿ (Raghava Murali) ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಹಿಂದೆ ಮುಮ್ತಾಜ್ ಚಿತ್ರ ನಿರ್ದೇಶಿಸಿದ್ದ ರಾಘವ ಮುರಳಿ ಮತ್ತು ಧರ್ಮ ಕೀರ್ತಿರಾಜ್ ಕಾಂಬಿನೆಷನ್ ನ ಎರಡನೇ ಸಿನಿಮಾ ಇದು. ಈ ಚಿತ್ರದಲ್ಲಿ ಮಜಾಭಾರತ ಖ್ಯಾತಿಯ ಮಿನಿ ದರ್ಶನ್ ಎಂದೇ ಕರೆಸಿಕೊಳ್ಳುವ ಅವಿನಾಶ್ ಕೂಡ ಕಾಣಿಸಿಕೊಂಡಿದ್ದಾರೆ. ಈ ಚಿತ್ರದ ಮೂಲಕ ಕನ್ನಡ ಚಿತ್ರರಂಗ ಪ್ರವೇಶ ಪಡೆಯುತ್ತಿರುವ ಅವಿನಾಶ್, ಮುಖ್ಯ ಪಾತ್ರ ನಿರ್ವಹಿಸಿದ್ದಾರೆ.

ಈ ಚಿತ್ರದ ಮತ್ತೊಂದು ವಿಶೇಷತೆ ಏನೆಂದರೆ ವಿಶೇಷ ಪಾತ್ರದಲ್ಲಿ ಜಯರಾಮ್ ಕಾರ್ತಿಕ್ (Jayaram Karthik) (JK) ಕಲ್ಕಿಯಾಗಿ ಕಾಣಿಸಿಕೊಂಡಿದ್ದಾರೆ. ಇವರು ಮಂಗಳೂರಿನ ರೌಡಿ ಕಲ್ಕಿ ಎಂಬ ಪಾತ್ರ ನಿರ್ವಹಿಸುತ್ತಿರುವುದು ವಿಶೇಷತೆಗಳಲ್ಲೊಂದು.

ಈ ಚಿತ್ರ ಟಚ್ ಸ್ಟೋನ್ ಪಿಕ್ಚರ್ ಬ್ಯಾನರ್ ನಲ್ಲಿ ನಿರ್ಮಾಣವಾಗಿದ್ದು, ಸುರ್ನಳ್ಳಿ ಜಯರಾಮ್ ಅರ್ಪಿಸಿದ್ದಾರೆ. ಈ ಚಿತ್ರಕ್ಕೆ ಸುರೇಶ್ ಬೈರಸಂದ್ರ ಬಂಡವಾಳ ಹಾಕಿದ್ದಾರೆ, ಶ್ರೀನಗರ ಕಿಟ್ಟಿ ಅಭಿನಯದ ಬಹುಪರಾಕ್ ಚಿತ್ರಕ್ಕೆ  ಸಹ ನಿರ್ಮಾಪಕರಗಿದ್ದ ಇವರು ಈ ಚಿತ್ರವನ್ನು ತಮ್ಮ ಸ್ವಂತ ಬ್ಯಾನರ್ ನಲ್ಲಿ ನಿರ್ಮಾಣ ಮಾಡಿದ್ದಾರೆ. ಇವರು ಅನುಭವ ಇರುವ ಛಾಯಾಗ್ರಾಹಕರು ಆಗಿರುವುದರಿಂದ ಈ ಚಿತ್ರಕ್ಕೆ ತಾವೇ ಕ್ಯಾಮರಮಾನ್ ಆಗಿ ತಮ್ಮ ಕೈ ಚಳಕ ತೋರಿಸಿರುವುದು ಮತ್ತೊಂದು ವಿಶೇಷ.

ಕೆ.ಬಿ. ಪ್ರವೀಣ್ ಈ ಚಿತ್ರಕ್ಕೆ ಸಂಗೀತ ನೀಡಿದ್ದು, ಚಿತ್ರದಲ್ಲಿ ನಾಲ್ಕು ಹಾಡುಗಳಿವೆ. ಈ ಚಿತ್ರದ ಹಾಡುಗಳ ಹಕ್ಕುಗಳನ್ನು ಈಗಾಗಲೇ ಸರಿಗಮ ಆಡಿಯೋ ಕಂಪನಿ ದೊಡ್ಡ ಮೊತ್ತಕ್ಕೆ ಖರೀದಿಸಿದೆ. ಈ ಚಿತ್ರದಲ್ಲಿ 5 ಭರ್ಜರಿ ಸಾಹಸ ದೃಶ್ಯಗಳಿವೆ.  ವಿನೋದ್, ಡ್ಯಾನಿ ಮತ್ತು ಕುಂಫು ಚಂದ್ರು ಅವರುಗಳು ಸಾಹಸ ನಿರ್ದೇಶನ ಮಾಡಿದ್ದಾರೆ.

ಈ ಚಿತ್ರದ ಇನ್ನೊಂದು ವಿಶೇಷತೆ ಏನೆಂದರೆ, ‘ರೋಜ್ ಹಿಡಿದು ಲವ್ ಮಾಡಿದ್ರೆ ಪ್ರೀತಿಸಿದ ಇಬ್ಬರು ನೋವು ಪಡ್ತಾರೆ, ಆದರೆ ಲಾಂಗ್ ಇಡ್ಕೊಂಡು ಜೀವನ ಮಾಡಿದ್ರೆ ಆ ಲಾಂಗ್ ನಿಂದ ಅದೆಷ್ಟು ಫ್ಯಾಮಿಲಿ ಹಾಳಾಗ್ತವೆ ಎಂಬ ಸಂದೇಶವನ್ನು ಈ ಚಿತ್ರ ದಲ್ಲಿ ಹೇಳಲಾಗಿದೆ. ಇದು ರಕ್ತ ಹರಿಸುವ ರೌಡಿಸಂ ಚಿತ್ರವಾಗಿದ್ದರೂ, ಅಲ್ಲಲ್ಲಿ, ಎಮೋಷನ್ ಟಚ್ ಇದೆ ಎಂಬುದು ಚಿತ್ರ ತಂಡದ ಮಾತು.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್