– ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಎಸಗಿದ 6 ಮಂದಿ ವಿರುದ್ಧ ಚಾರ್ಜ್‌ಶೀಟ್
ಬೆಂಗಳೂರು: ಬುರುಡೆ ಪ್ರಕರಣದ ಮೂಲಕ ಧರ್ಮಸ್ಥಳದ (Dharmasthala Temple) ವಿರುದ್ಧ ಷಡ್ಯಂತ್ರ ರೂಪಿಸಿದವರ ವಿರುದ್ಧ ಗುರುವಾರ ವಿಶೇಷ ತನಿಖಾ ತಂಡ (SIT) ಚಾರ್ಜ್‌ಶೀಟ್ (Chargesheet) ಸಲ್ಲಿಕೆ ಮಾಡುವ ಸಾಧ್ಯತೆಯಿದೆ.
ಬೆಳ್ತಂಗಡಿ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಮಹೇಶ್ ತಿಮರೋಡಿ, ಚಿನ್ನಯ್ಯ , ಗಿರೀಶ್ ಮಟ್ಟಣ್ಣನವರ್, ಸುಜಾತ ಭಟ್, ವಿಠಲ್ ಗೌಡ ಸೇರಿ 6 ಮಂದಿಯ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಗೆ ಸಿದ್ಧತೆ ನಡೆದಿದೆ. ಇದನ್ನೂ ಓದಿ: ಮೋದಿ ಪಾದವನ್ನು ಮುಟ್ಟಿ ನಮಸ್ಕರಿಸಿದ ಐಶ್ವರ್ಯಾ ರೈ ಬಚ್ಚನ್
ತನಿಖಾಧಿಕಾರಿ ಜೀತೇಂದ್ರ ದಯಾಮಾ ಅವರು ಬರೋಬ್ಬರಿ 4 ಸಾವಿರ ಪುಟಗಳ ಚಾರ್ಜ್‌ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಲಿದ್ದಾರೆ.
ಚಿನ್ನಯ್ಯನನ್ನು ಬಂಧನ ಮಾಡಲಾಗಿದ್ದು ಉಳಿದವರ ವಿಚಾರಣೆ ನಡೆಸಲಾಗಿದೆ. ಷಡ್ಯಂತ್ರ ರೂಪಿಸಿ , ಅಪಪ್ರಚಾರ ಮಾಡಿರುವ ದೋಷಾರೋಪ ಹೊರಿಸಿ ಚಾರ್ಜ್ ಶೀಟ್ ಸಲ್ಲಿಕೆಗೆ ತಯಾರಿ ನಡೆದಿದೆ.
ಚಾರ್ಜ್‌ಶೀಟ್ ಸಲ್ಲಿಕೆ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಕಚೇರಿಯಲ್ಲಿ ಹೈವೋಲ್ಟೇಜ್ ಸಭೆ ನಡೆದಿದೆ. ಗೃಹ ಸಚಿವ ಪರಮೇಶ್ವರ್, ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ, ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ಗುಪ್ತಚರ ಎಡಿಜಿಪಿ ರವಿ, ಎಸ್ ಐಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಸಭೆಯಲ್ಲಿ ಭಾಗಿಯಾಗಿದ್ದಾರೆ.
