ಮಂಗಳೂರು: ಹಣದ ಆಸೆಗಾಗಿ ಷಡ್ಯಂತ್ರಕ್ಕೆ ಒಳಗಾದೆ ಎಂದು ಚಿನ್ನಯ್ಯ (Chinnaiah) ಎಸ್‌ಐಟಿ (SIT) ಕಚೇರಿಯಲ್ಲೇ ನನ್ನ ಕಾಲಿಗೆ ಬಿದ್ದಿದ್ದ ಎಂದು ನೇತ್ರಾವತಿ ಸ್ನಾನಘಟ್ಟದ ಮಾಹಿತಿ ಕೇಂದ್ರದಲ್ಲಿ ಮೇಲ್ವಿಚಾರಕರಾಗಿದ್ದ ಸುಂದರ ಗೌಡ (Sundar Gowda) ಬಜಿಲ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಈ ಕುರಿತು ‘ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಅವರು, ನಾನು 1996ರಿಂದ 2000ದ ತನಕ ನೇತ್ರಾವತಿ ಸ್ನಾನ ಘಟ್ಟದ ಮಾಹಿತಿ ಕೇಂದ್ರದಲ್ಲಿ ಮೇಲ್ವಿಚಾರಕನಾಗಿದ್ದೆ. ಆ ಸಂದರ್ಭದಲ್ಲಿ ಚಿನ್ನಯ್ಯ, ಅಕ್ಕ, ಅಣ್ಣ, ಬಾವ, ಅತ್ತಿಗೆ ಎಲ್ಲರೂ ಶುಚಿತ್ವದ ಕೆಲಸ ಮಾಡುತ್ತಿದ್ದರು. ಶುಚಿತ್ವ ಕೆಲಸಕ್ಕೆಂದೇ ಆತನನ್ನು ನೇಮಕ ಮಾಡಿದ್ದು, ಅದನ್ನೇ ಮಾಡುತ್ತಿದ್ದ. ಚಿನ್ನಯ್ಯ ಹೇಳಿದ್ದು ಎಲ್ಲವೂ ಸತ್ಯಕ್ಕೆ ದೂರವಾದ ವಿಚಾರ. ಕ್ಷೇತ್ರದ ಹೆಸರು ಹಾಳು ಮಾಡಬೇಕು, ಷಡ್ಯಂತ್ರ ಮಾಡಬೇಕು ಎಂಬುದೇ ಆತನ ಉದ್ದೇಶವಾಗಿತ್ತು ಎಂದು ಕಿಡಿಕಾರಿದರು. ಇದನ್ನೂ ಓದಿ: ಎಸ್‌ಐಟಿ ತನಿಖೆಗೆ ವೀರೇಂದ್ರ ಹೆಗಡೆ ಸ್ವಾಗತ: ನಾವು ಯಾವಾಗಲೂ ಒಳ್ಳೆಯದನ್ನೇ ಮಾಡೋದು ಎಂದ ಸಿಎಂ
ನೇತ್ರಾವತಿ ನದಿಯಲ್ಲಿ ಶವ ತೇಲುತ್ತಾ ಬಂದರೆ ನಾವು ಅದನ್ನ ಹೂತು ಹಾಕುವ ಕೆಲಸ ಮಾಡೋದಿಲ್ಲ. ಏನಿದ್ರೂ ಪೊಲೀಸರಿಗೆ ತಿಳಿಸಿ ಆಸ್ಪತ್ರೆಗೆ ಸಾಗಿಸುತ್ತಿದ್ದೆವು. ಆತ ಮೃತದೇಹವನ್ನ ಕಾರಿಗೆ ಶಿಫ್ಟ್ ಮಾಡುವ, ಪೊಲೀಸರ ಜೊತೆ ಆಸ್ಪತ್ರೆಗೆ ಹೋಗುವ ಕೆಲಸ ಮಾಡುತ್ತಿದ್ದ. ಒಂದೇ ಒಂದು ಶವ ಹೂತಾಕುವ ಕೆಲಸ ಆತ ಮಾಡಿಲ್ಲ. ಎಸ್‌ಐಟಿ ಅಧಿಕಾರಿಗಳು ನನ್ನನ್ನು ಕರೆದಿದ್ದರು. ನಿಮ್ಮ ಮೇಲೆ ಆರೋಪಿ ಚಿನ್ನಯ್ಯ ಅಪವಾದ ಹಾಕಿದ್ದಾನೆ ಎಂದಿದ್ದರು. ಆತ ಶವ ಹೂತಿಟ್ಟ ವಿಚಾರದಲ್ಲಿ ನನ್ನ ಮೇಲೆ ಅಪವಾದ ಹಾಕಿದ್ದ. ಎರಡನೇ ಬಾರಿ ವಿಚಾರಣೆಗೆ ಚಿನ್ನಯ್ಯ ಹಾಗೂ ನನ್ನನ್ನು ಒಟ್ಟಿಗೆ ವಿಚಾರಣೆ ಮಾಡಿದ್ದರು. ವಿಚಾರಣೆ ವೇಳೆ ನಾನು ಷಡ್ಯಂತ್ರಕ್ಕೆ ಬಲಿಯಾಗಿದ್ದೇನೆ, ನಾನು ದುಡ್ಡಿನ ಆಸೆಗೆ ಇದೆಲ್ಲವನ್ನೂ ಮಾಡಿದ್ದು, ನನ್ನದು ತಪ್ಪಾಯ್ತು, ನನ್ನನ್ನು ಬಚಾವ್ ಮಾಡಿ ಎಂದು ಕಾಲಿಗೆ ಬಿದ್ದಿದ್ದ ಎಂದರು. ಇದನ್ನೂ ಓದಿ: ದೀಪಾವಳಿ ಸಮಯದಲ್ಲಿ ಮಾಲಿನ್ಯ ಭೀತಿ – ದೆಹಲಿಯಲ್ಲಿ ಪಟಾಕಿ ಮಾರಾಟ ನಿಷೇಧ
ಎಲ್ಲ ಕೆಲಸ ಚೆನ್ನಾಗಿ ಮಾಡುತ್ತಿದ್ದ, ಆತನಿಗೆ ಎಲ್ಲವೂ ಕ್ಷೇತ್ರದಿಂದ ಕೊಡಲಾಗಿತ್ತು. ಊಟ, ವಸತಿ, ಸಂಬಳ ಎಲ್ಲವೂ ಆತನಿಗೆ ನೀಡಲಾಗುತ್ತಿತ್ತು. ಊರಿಗೆ ಹೋಗುವ ಖರ್ಚನ್ನು ಕೂಡ ಕ್ಷೇತ್ರ ನೀಡುತ್ತಿತ್ತು. ಕ್ಷೇತ್ರವನ್ನು ಮಲಿನ ಮಾಡಬೇಕು, ಪೂಜ್ಯರಿಗೆ ಕಳಂಕ ತರುವ ಉದ್ದೇಶದಿಂದ ಗ್ಯಾಂಗ್ ಮಾಡಿದ ಷಡ್ಯಂತ್ರಕ್ಕೆ ಆತ ಬಲಿಯಾಗಿದ್ದಾನೆ. ಈಗ ಸತ್ಯ ದರ್ಶನ ಹೊರಗೆ ಬರುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: Andhra Pradesh | ಕುದಿಯುತ್ತಿದ್ದ ಹಾಲಿನ ಪಾತ್ರೆಗೆ ಬಿದ್ದು ಒಂದೂವರೆ ವರ್ಷದ ಮಗು ಸಾವು