ಧರ್ಮಸ್ಥಳ ಬುರುಡೆ ಕೇಸ್‌| ಶೀಘ್ರವೇ ತನಿಖೆ ನಡೆಸಿ ಪೂರ್ಣ ವರದಿ ಸಲ್ಲಿಸಿ: ಎಸ್‌ಐಟಿಗೆ ಕೋರ್ಟ್‌ ಆದೇಶ

1 Min Read

ಮಂಗಳೂರು: ನೂರಾರು ಶವ ಹೂತಿಟ್ಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ಪೂರ್ಣ ವರದಿಯನ್ನು ಸಲ್ಲಿಸುವಂತೆ ವಿಶೇಷ ತನಿಖಾ ತಂಡಕ್ಕೆ (SIT) ಬೆಳ್ತಂಗಡಿ ನ್ಯಾಯಾಲಯ (Belthangady Court) ಆದೇಶಿಸಿದೆ.

ಧರ್ಮಸ್ಥಳ (Dharmasthala) ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ ತನಿಖೆ ನಡೆಸಿದ ಎಸ್‌ಐಟಿ ನ.20 ರಂದು ಬೆಳ್ತಂಗಡಿಯ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ತನಿಖಾ ಪ್ರಾಥಮಿಕ ವರದಿ ಸಲ್ಲಿಸಿತ್ತು.

ಇಂದು ನಡೆದ ವಿಚಾರಣೆ ವೇಳೆ ಆದಷ್ಟು ಶೀಘ್ರವಾಗಿ ತನಿಖೆ ನಡೆಸಿ ಅಂತಿಮ ವರದಿಯನ್ನು ಸಲ್ಲಿಸಬೇಕೆಂದು ಬೆಳ್ತಂಗಡಿ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶರಾದ ವಿಜಯೇಂದ್ರ ಹೆಚ್‌ಟಿ ಆದೇಶಿಸಿ ಜ. 23ಕ್ಕೆ ಮುಂದಿನ ವಿಚಾರಣೆಯನ್ನು ಮುಂದೂಡಿದರು.  ಇದನ್ನೂ ಓದಿ: ಬುರುಡೆ ನೋಡಿ ಕೆಟ್ಟ ಕನಸು, ಭಯಗೊಂಡು ಕಿರುಚಾಡಿದ್ದೆ – ದೆಹಲಿಯಿಂದ ತರಲ್ಲ ಎಂದಿದ್ದೆ: ಜಯಂತ್‌ ಟಿ

 

ಇಂದಿನ ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಎಸ್ಐಟಿ ಎಸ್‌ಪಿ ಸಿ.ಎ.ಸೈಮನ್, ಡಿವೈಎಸ್‌ಪಿ ಲೋಕೇಶ್ ಹಾಗೂ ಇತರ ಅಧಿಕಾರಿಗಳು ಹಾಜರಿದ್ದರು.  ಇದನ್ನೂ ಓದಿ: ಬುರುಡೆ ಕೇಸ್‌| ಶ್ರೀ ಕ್ಷೇತ್ರ ಧರ್ಮಸ್ಥಳದ ಪರವಾಗಿ ನ್ಯಾಯಾಲಯಕ್ಕೆ ವಕಾಲತ್ತು ಸಲ್ಲಿಕೆ

ಎಸ್‌ಐಟಿಯ ತನಿಖಾ ವರದಿಯಲ್ಲಿ 6 ಮಂದಿ ಯಾವ ರೀತಿ ನ್ಯಾಯಾಲಯದ ದಾರಿ ತಪ್ಪಿಸಿದ್ದಾರೆ ಎಂಬುದನ್ನು ಎಳೆ ಎಳೆಯಾಗಿ ಉಲ್ಲೇಖಿಸಲಾಗಿದೆ. 

ಯಾರೆಲ್ಲಾ ಆರೋಪಿಗಳು?
ಎ1 – ಚಿನ್ನಯ್ಯ, ಎ2 – ಮಹೇಶ್‌ ಶೆಟ್ಟಿ ತಿಮರೋಡಿ, ಎ3 – ಗಿರೀಶ್‌ ಮಟ್ಟಣ್ಣನವರ್‌, ಎ4 – ವಿಠಲ ಗೌಡ, ಎ5 – ಜಯಂತ್‌ ಟಿ, ಎ6 – ಸುಜಾತ ಭಟ್‌

Share This Article