ಬೆಂಗಳೂರು: ಧರ್ಮಸ್ಥಳದಲ್ಲಿ ಶವಗಳ (Dharmasthala Case) ಹೂತಿಟ್ಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು (Chinnayya) ಬೆಳ್ತಂಗಡಿಯಿಂದ ಬೆಂಗಳೂರಿಗೆ ಕರೆತರಲಾಗುತ್ತಿದೆ.
ಬೆಂಗಳೂರಿನ ಕಾಮಾಕ್ಷಿಪಾಳ್ಯದ ಮನೆಯೊಂದರಲ್ಲಿ ಸ್ಥಳ ಮಹಜರಿಗಾಗಿ ಆರೋಪಿಯನ್ನು ನಗರಕ್ಕೆ ಕರೆತರಲಾಗುತ್ತಿದೆ ಎಂದು ತಿಳಿದುಬಂದಿದೆ. ಈ ಸಂಬಂಧ ಕಾಮಾಕ್ಷಿಪಾಳ್ಯ ಪೊಲೀಸರಿಗೆ ಮಾಹಿತಿ ನೀಡಿದ್ದು, ಭದ್ರತೆಗೆ ಮನವಿ ಮಾಡಲಾಗಿದೆ. ಇದನ್ನೂ ಓದಿ: SITಯಿಂದ ತಿಮರೋಡಿ, ಚಿನ್ನಯ್ಯ ವಿಚಾರಣೆ – ಸಮೀರ್ ಆದಾಯ ಮೂಲ ಕೆದಕಿದ ಖಾಕಿ, ಇನ್ನಷ್ಟು ರಹಸ್ಯ ಬಯಲು!
ಬೆಳ್ಳಂಬೆಳಗ್ಗೆ ಚಿನ್ನಯ್ಯನನ್ನು ಮಹಜರು ಟ್ರಾವೆಲ್‌ಗೆ ಎಸ್‌ಐಟಿ ಅಧಿಕಾರಿಗಳು ಕರೆದುಕೊಂಡು ಹೋಗಿದ್ದಾರೆ. ಬಿಗಿಭದ್ರತೆಯಲ್ಲಿ ಚಿನ್ನಯ್ಯನನ್ನು ಕರೆದುಕೊಂಡು ಹೋಗಲಾಗಿದೆ.
ಚಿನ್ನಯ್ಯ ನೀಡಿರುವ ಹೇಳಿಕೆಯಲ್ಲಿ ತಿಳಿಸಿರುವ ಕೆಲವು ಸ್ಥಳಗಳ ಮಹಜರಿಗೆ ಕರೆತರಲಾಗಿದೆ. ಎರಡು ಪೊಲೀಸ್ ವಾಹನದಲ್ಲಿ ಚಿನ್ನಯ್ಯನನ್ನು ಕರೆದುಕೊಂಡು ತಮಿಳುನಾಡು, ಮಂಡ್ಯ ಕಡೆ ಕರೆದುಕೊಂಡು ಹೋಗುವ ಸಾಧ್ಯತೆ ಇದೆ ಎನ್ನಲಾಗಿತ್ತು. ಈಗ ಧರ್ಮಸ್ಥಳ ಕೇಸ್‌ಗೆ ಬೆಂಗಳೂರು ಲಿಂಗ್ ಇದೆಯಾ ಎಂಬ ಪ್ರಶ್ನೆ ಮೂಡಿದೆ. ಬೆಳ್ತಂಗಡಿಯಿಂದ ಬೆಂಗಳೂರಿನತ್ತ ಚಿನ್ನಯ್ಯನನ್ನು ಕರೆತರಲಾಗುತ್ತಿದೆ. ಇದನ್ನೂ ಓದಿ: ಹೆಣ್ಣುಮಕ್ಕಳು ಎಂತಹ ಹೋರಾಟಕ್ಕೂ ತಯಾರಿದ್ದಾರೆ, ಆದ್ರೆ ಅಗತ್ಯವಿಲ್ಲ – ಡಿ.ವೀರೇಂದ್ರ ಹೆಗ್ಗಡೆ