– ಎಫ್ಎಸ್ಎಲ್ನಲ್ಲಿ ಬುರುಡೆ ರಹಸ್ಯ ಬಯಲು
ಬೆಂಗಳೂರು: ಚೆನ್ನಯ್ಯ ತಂದುಕೊಟ್ಟ ಬುರುಡೆ ಎಲ್ಲಿಯದ್ದು ಎನ್ನುವುದೇ ಈಗ ದೊಡ್ಡ ಪ್ರಶ್ನೆ.
ಹೌದು. ಧರ್ಮಸ್ಥಳದಲ್ಲಿ (Dharmasthala) ಸಾವಿರಾರು ಮೃತದೇಹಗಳನ್ನು ನಾನು ಹೂತಿದ್ದೇನೆ ಎಂದು ಬುರುಡೆ (Skeleton) ಬಿಟ್ಟಿದ್ದ ಚೆನ್ನಯ್ಯ ತನ್ನ ಎಲ್ಲಾ ಆರೋಪಗಳಿಗೆ ಸಾಕ್ಷ್ಯ ಒದಗಿಸಿದ್ದು ಯಾವುದು ಎಂದರೆ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದ ಬುರುಡೆ.
ಈ ಬುರುಡೆಯನ್ನು ಇಟ್ಟುಕೊಂಡು ನ್ಯಾಯಾಲಯದಿಂದ ಸಾಕ್ಷಿ ಸಂರಕ್ಷಣಾ ಕಾಯ್ದೆಯಡಿ ಭದ್ರತೆ ಪಡೆದುಕೊಂಡಿದ್ದ. ಹೀಗಾಗಿ ಎಸ್ಐಟಿ (SIT) ಸಹ ಆತ ಹೇಳಿದಂತೆ ಕೇಳುತ್ತಿತ್ತು. ಇದನ್ನೂ ಓದಿ: ಸೌಜನ್ಯ ತಾಯಿ ಷಡ್ಯಂತ್ರಕ್ಕೆ ಬಲಿಯಾಗಿರುವ ಸಾಧ್ಯತೆಯಿದೆ, ಅವರನ್ನು ವಿಚಾರಣೆ ಒಳಪಡಿಸಬೇಕು: ಸೂಲಿಬೆಲೆ
ಆತ ಹೇಳಿದ್ದ 17 ಜಾಗಗಳಲ್ಲಿ ಗುಂಡಿ ತೋಡಿದ ಬಳಿಕ ಮೂಲ ಬುರುಡೆಯ ಬಗ್ಗೆ ಎಸ್ಐಟಿ ಅಧಿಕಾರಿಗಳು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಆತ ಒಂದೊಂದು ಜಾಗದ ಹೆಸರನ್ನು ಹೇಳಿದ್ದಾನೆ. ಒಮ್ಮೆ ಬೋಳಿಯಾರ್ ಮತ್ತೊಮ್ಮೆ ಕಲ್ಲೇರಿ ಇನ್ನೊಮ್ಮೆ ಇನ್ಯಾವುದೋ ಜಾಗವನ್ನು ಹೇಳಿದ್ದಾನೆ.
ಈ ಮಧ್ಯೆ ಬುರುಡೆಯಲ್ಲಿದ್ದ ಮಣ್ಣು ಧರ್ಮಸ್ಥಳ ಪರಿಸರದ್ದೇ ಅಲ್ಲ ಎನ್ನುವುದು ವಿಧಿವಿಜ್ಞಾನ ಪ್ರಾಯೋಗಾಲಯದಲ್ಲಿ ದೃಢಪಟ್ಟಿತ್ತು. ಇದು ಪಕ್ಕಾ ಆಗುತ್ತಿದ್ದಂತೆ ಪೊಲೀಸರು ತಮ್ಮ ಶೈಲಿಯಲ್ಲಿ ವಿಚಾರಣೆ ನಡೆಸಿದಾಗ ಆತ ಬೇರೆ ಜಾಗದಿಂದ ಈ ಬುರುಡೆ ತಂದಿದ್ದೇನೆ. ಬೇರೆಯವರು ಹೇಳಿದಂತೆ ನಾನು ಈ ಪ್ರಕರಣಕ್ಕೆ ಬಂದಿದ್ದೇನೆ ಎಂದು ಬಾಯಿಬಿಟ್ಟಿದ್ದ.
ಚೆನ್ನಯ್ಯ ಈ ಮಾತನ್ನು ಹೇಳುವುದು ಸುಳ್ಳು ಎನ್ನುವುದು ತಿಳಿಯುತ್ತಿದ್ದಂತೆ ಪೊಲೀಸರು ಬಂಧಿಸಿದ್ದಾರೆ.