ಮೈಸೂರು| ಕಾಂಗ್ರೆಸ್‌ ಶಾಸಕನಿಂದ ಧರ್ಮಸ್ಥಳ ಯಾತ್ರೆ

By
1 Min Read

– ಧರ್ಮಸ್ಥಳ ವಿರುದ್ಧ ಅಪಪ್ರಚಾರ ಖಂಡಿಸಿ ‘ಕೈ’ ಶಾಸಕ ಹರೀಶ್‌ಗೌಡ ನೇತೃತ್ವದಲ್ಲಿ ಯಾತ್ರೆ

ಮೈಸೂರು: ಶ್ರೀ ಕ್ಷೇತ್ರ ಧರ್ಮಸ್ಥಳದ (Dharmasthala Case) ವಿರುದ್ಧ ಅಪಪ್ರಚಾರ ಖಂಡಿಸಿ ಕಾಂಗ್ರೆಸ್‌ ಶಾಸಕರೊಬ್ಬರು ಧರ್ಮಸ್ಥಳ ಚಲೋ ಯಾತ್ರೆ ಕೈಗೊಂಡಿದ್ದಾರೆ.

ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯ, ಚಾಮರಾಜ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ಹರೀಶ್‌ಗೌಡ (Harish Gowda) ನೇತೃತ್ವದಲ್ಲಿ ಯಾತ್ರೆ ಕೈಗೊಳ್ಳಲಾಗಿದೆ. ಮೈಸೂರಿನ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗಿಂದ ಯಾತ್ರೆ ಆರಂಭಿಸಲಾಗಿದೆ. ಇದನ್ನೂ ಓದಿ: ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುವವರಿಗೆ ಕಠಿಣ ಶಿಕ್ಷೆ ಅವಶ್ಯಕ, ಕೇಂದ್ರದ ತನಿಖೆ ಆಗಲಿ: ಡಾ.ಮಂಜುನಾಥ್

ಬುಧವಾರ ಬೆಳಗ್ಗೆ ಆಂಜನೇಯ ದೇವರಿಗೆ ಪೂಜೆ ಸಲ್ಲಿಸಿ ಧರ್ಮಸ್ಥಳ ಯಾತ್ರೆಗೆ ಚಾಲನೆ ನೀಡಲಾಗಿದೆ. ಶಾಸಕ ಹರೀಶ್‌ಗೌಡ ಅವರು ಪ್ರತಿ ವಾರ್ಡ್‌ನಿಂದ ಬಸ್ ವ್ಯವಸ್ಥೆ ಮಾಡಿದ್ದಾರೆ. ಯಾತ್ರೆಗಾಗಿ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗ ಬಸ್‌ನಲ್ಲಿ ಜನರು ಜಮಾವಣೆಗೊಂಡಿದ್ದಾರೆ.

ಧರ್ಮಸ್ಥಳ ವಿರುದ್ಧ ಅಪಪ್ರಚಾರ ಮಾಡುತ್ತಿರುವುದನ್ನು ಕಾಂಗ್ರೆಸ್‌ ಕೂಡ ಖಂಡಿಸುತ್ತದೆ. ಕಾಂಗ್ರೆಸ್‌ನವರು ಕೂಡ ಹಿಂದೂ ಧರ್ಮದ ಬಗ್ಗೆ ಅಪಾರ ಒಲವು ಇರುವವರು. ಆದರೆ, ಕಾಂಗ್ರೆಸ್‌ ವಿರುದ್ಧ ಬಿಜೆಪಿ ಇಲ್ಲಸಲ್ಲದ ಆರೋಪ ಮಾಡಿ ರಾಜಕೀಯ ಮಾಡುತ್ತಿದೆ ಎಂದು ಯಾತ್ರೆಯಲ್ಲಿ ಪಾಲ್ಗೊಂಡ ಕಾಂಗ್ರೆಸ್‌ ಕಾರ್ಯಕರ್ತರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳದ ವಿರುದ್ಧ ಪಿತೂರಿಗೆ ವಿದೇಶಿ ಫಂಡಿಂಗ್‌ – ತನಿಖೆಗೆ ಇಡಿ ಎಂಟ್ರಿ

Share This Article
Leave a Comment

Leave a Reply

Your email address will not be published. Required fields are marked *