ಸಿಎಂ ಕಾರ್ಯಕ್ರಮದಲ್ಲಿ ಅಪಮಾನ – ಸ್ವಯಂ ನಿವೃತ್ತಿಗೆ ಮುಂದಾದ ಎಎಸ್‌ಪಿ ಬರಮಣ್ಣಿ

Public TV
1 Min Read

– ವೇದಿಕೆಯಲ್ಲೇ ಅಧಿಕಾರಿ ಮೇಲೆ ಕಪಾಳಮೋಕ್ಷಕ್ಕೆ ಮುಂದಾಗಿದ್ದ ಸಿಎಂ

ಧಾರವಾಡ: ಧಾರವಾಡ ಎಎಸ್‌ಪಿ (Dharwad ASP) ನಾರಾಯಣ ಬರಮಣ್ಣಿ ಅವರು ಸ್ವಯಂ ನಿವೃತ್ತಿಗೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ವೇದಿಕೆ ಮೇಲೆಯೇ ಸಿಎಂ ಸಿದ್ದರಾಮಯ್ಯ (Siddaramaiah) ಅವರಿಂದ ಅಧಿಕಾರಿ ಅಪಮಾನಕ್ಕೆ ಒಳಗಾಗಿದ್ದರು. ಬೆಳಗಾವಿ ಸಮಾರಂಭದಲ್ಲಿ ಅಧಿಕಾರಿ ಮೇಲೆ ಸಿಎಂ ಕಪಾಳಮೋಕ್ಷಕ್ಕೆ ಮುಂದಾಗಿದ್ದರು. ಈ ಸನ್ನಿವೇಶದಿಂದ ಅಧಿಕಾರಿ ನೊಂದುಕೊಂಡಿದ್ದರು. ಅದೇ ಕಾರಣಕ್ಕೆ ಈ ನಿರ್ಧಾರ ಕೈಗೊಂಡಿದ್ದಾರೆಯೇ ಎಂಬ ಪ್ರಶ್ನೆ ಮೂಡಿದೆ. ಇದನ್ನೂ ಓದಿ: ವೇದಿಕೆಯಲ್ಲೇ ಎಎಸ್‌ಪಿ ಮೇಲೆ ಕೈಎತ್ತಿದ ಸಿಎಂ – ಬೆಳಗಾವಿ ʻಕೈʼ ಸಮಾವೇಶದ ವೇಳೆ ಹೈಡ್ರಾಮಾ

ಸ್ವಯಂಪ್ರೇರಿತ ನಿವೃತ್ತಿಗೆ ನಾರಾಯಣ ಅವರು ಅರ್ಜಿ ಸಲ್ಲಿಸಿದ್ದಾರೆ. ಹಿರಿಯ ಅಧಿಕಾರಿಗಳು ಸಿಎಂ ಸಮ್ಮುಖದಲ್ಲಿ ಅಧಿಕಾರಿಯ ಮನವೊಲಿಸಲು ಪ್ರಯತ್ನಿಸಿದ್ದಾರೆ. ಮನವೊಲಿಕೆಯಿಂದ ಅಧಿಕಾರಿ ಬರಮಣ್ಣಿ ಅವರು ಸ್ವಲ್ಪಮಟ್ಟಿಗೆ ಶಾಂತವಾಗಿದ್ದಾರೆ.

ತಮಗಾದ ಅವಮಾನಕ್ಕೆ ಬರಮಣ್ಣಿ ಅವರು ನೊಂದುಕೊಂಡಿದ್ದರು. ಹೀಗಾಗಿ, ಕೆಲಸದಿಂದಲೇ ಸ್ವಯಂ ನಿವೃತ್ತಿಗೆ ಮುಂದಾಗಿದ್ದರು. ಅಧಿಕಾರಿಯ ನಡೆಯಿಂದ ಸರ್ಕಾರಕ್ಕೆ ಮುಜುಗರ ಆಗಿದೆ. ಇದನ್ನೂ ಓದಿ: ಮೆಟ್ರೋ ದರ ಏರಿಕೆಯಿಂದ BMTCಗೆ ಬಂಪರ್ – ಆದಾಯ 7.25 ಕೋಟಿಗೆ ಏರಿಕೆ

Share This Article