ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೀತಿಪಾಠ: ಪ್ರಹ್ಲಾದ್ ಜೋಶಿ

Public TV
2 Min Read

– ಇದು ಸಂವಿಧಾನದ ಮೌಲ್ಯಕ್ಕೆ ಸಿಕ್ಕ ಜಯ

ನವದೆಹಲಿ: ಆರ್‌ಎಸ್‌ಎಸ್ (RSS) ಗುರಿಯಾಗಿಸಿಕೊಂಡು ಸಾರ್ವಜನಿಕ ಸ್ಥಳಗಳಲ್ಲಿ ಪಥ ಸಂಚಲನ, ಸಭೆ-ಸಮಾವೇಶಗಳಿಗೆ ನಿರ್ಬಂಧ ಹೇರಿದ್ದ ರಾಜ್ಯ ಕಾಂಗ್ರೆಸ್ (Congress) ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್ ಪೀಠ ತಾತ್ಕಾಲಿಕ ತಡೆ ನೀಡಿ ನೀತಿಪಾಠ ಹೇಳಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಚಾಟಿ ಬೀಸಿದ್ದಾರೆ.

ನವದೆಹಲಿಯಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಸರ್ಕಾರದ ಜಾಗ, ಆವರಣಗಳಲ್ಲಿ ಕಾರ್ಯಕ್ರಮ ನಡೆಸಲು ಖಾಸಗಿ ಸಂಸ್ಥೆಗಳು ಪೂರ್ವಾನುಮತಿ ಪಡೆಯಬೇಕೆಂದು ಹೊರಡಿಸಿದ ಆದೇಶಕ್ಕೆ ಧಾರವಾಡ ಹೈಕೋರ್ಟ್ ಪೀಠ ತಾತ್ಕಾಲಿಕ ತಡೆ ನೀಡಿದೆ. ಇದು ಸಂವಿಧಾನದ ಮೌಲ್ಯಕ್ಕೆ ಸಿಕ್ಕ ಜಯವಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಕೇಂದ್ರ ಚುನಾವಣಾ ಆಯುಕ್ತ ರಾಜಕೀಯ ಪುಢಾರಿ: ಯತೀಂದ್ರ ಸಿದ್ದರಾಮಯ್ಯ

ರಾಜ್ಯ ಕಾಂಗ್ರೆಸ್ ಸರ್ಕಾರ ಪೂರ್ವಾಗ್ರಹಪೀಡಿತವಾಗಿ ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ಗುರಿಯಾಗಿಸಿಕೊಂಡು ಸರ್ಕಾರದ ಆಸ್ತಿ ನೆಪದಲ್ಲಿ ರಸ್ತೆ, ಉದ್ಯಾನವನ ಹಾಗೂ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಸರ್ಕಾರೇತರ ಚಟುವಟಿಕೆಗಳಿಗೆ ನಿರ್ಬಂಧ ಹೇರಿರುವುದು ಸಂವಿಧಾನ ವಿರೋಧಿ ಕ್ರಮವಾಗಿದೆ ಎಂದು ಖಂಡಿಸಿದರು. ಇದನ್ನೂ ಓದಿ: ದೆಹಲಿ ವಿವಿ ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ದಾಳಿ ಕೇಸ್‌ಗೆ ಟ್ವಿಸ್ಟ್ – ಸುಳ್ಳು ಕಥೆ ಕಟ್ಟಿದ ತಂದೆ ಅರೆಸ್ಟ್

ರಾಜ್ಯ ಕಾಂಗ್ರೆಸ್ ಸರ್ಕಾರ ಸಂವಿಧಾನದ ಮೂಲ ಆಶಯಗಳ ವಿರೋಧವಾಗಿ ನಡೆಯುತ್ತಿದೆ ಎಂಬುದಕ್ಕೆ ಹೈಕೋರ್ಟ್ ಪೀಠ ನೀಡಿದ ಈ ಮಹತ್ವದ ತೀರ್ಪೇ ಸಾಕ್ಷಿ. ಸಂವಿಧಾನ ವಿರೋಧಿ ಕ್ರಮಗಳನ್ನು ಅನುಸರಿಸುವ ಸರ್ಕಾರಕ್ಕೆ ನ್ಯಾಯಾಲಯದ ಈ ತೀರ್ಪು ಎಚ್ಚರಿಕೆಯ ಗಂಟೆಯಾಗಿದೆ. ಈ ಸರ್ಕಾರ ಇನ್ನಾದರೂ ಸಂವಿಧಾನದ ಮೂಲ ಆಶಯ ಗೌರವಿಸುವ ಕಾರ್ಯವನ್ನು ಪಾಲಿಸಲಿ ಎಂದು ಸಲಹೆ ನೀಡಿದರು. ಇದನ್ನೂ ಓದಿ: ಚಿತ್ತಾಪುರ ಶಾಂತಿ ಸಭೆಯಲ್ಲಿ ಅಶಾಂತಿ, ಸಂಘಟನೆಗಳ ಮಧ್ಯೆ ಮೂಡದ ಒಮ್ಮತ: ಇಂದು ಏನಾಯ್ತು?

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಚಟುವಟಿಕೆಗಳನ್ನೇ ಗುರಿಯಾಗಿಸಿಕೊಂಡು ಹೊರಡಿಸಿದ್ದ ಈ ಆದೇಶದ ಹಿಂದಿನ ಪಿತೂರಿಗೆ ನ್ಯಾಯಾಲಯ ತಡೆವೊಡ್ಡಿದಂತಾಗಿದೆ. ಅಲ್ಲದೇ, ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬ ಪಾಠವನ್ನು ಸರ್ಕಾರಕ್ಕೆ ಮಾಡಿದೆ ಎಂದು ಸಚಿವ ಅಭಿಪ್ರಾಯಪಟ್ಟರು. ಇದನ್ನೂ ಓದಿ: ಧಾರವಾಡ ಹೈಕೋರ್ಟ್ ಆದೇಶಕ್ಕೆ ಮೇಲ್ಮನವಿ ಸಲ್ಲಿಸುತ್ತೇವೆ: ಸಿದ್ದರಾಮಯ್ಯ

Share This Article