ಲೇಡಿ ಸೂಪರ್ ಸ್ಟಾರ್ ನಯನತಾರಾ ಚಿತ್ರದ ಮೂಲಕ ಖ್ಯಾತ ಕ್ರಿಕೆಟಿಗ ಧೋನಿ ಸಿನಿ ರಂಗಕ್ಕೆ ಎಂಟ್ರಿ

Public TV
1 Min Read

ಕ್ರಿಕೆಟ್ ಜೊತೆ ಈಗಾಗಲೇ ಹಲವು ಉದ್ಯಮಗಳಲ್ಲಿ ತೊಡಗಿಕೊಂಡಿರುವ ಖ್ಯಾತ ಕ್ರಿಕೆಟಿಗೆ ಮಹೇಂದ್ರ ಸಿಂಗ್ ಧೋನಿ ಇದೀಗ ಸಿನಿಮಾ ರಂಗಕ್ಕೂ ಪದಾರ್ಪಣೆ ಮಾಡುತ್ತಿದ್ದಾರೆ. ಸದ್ಯದಲ್ಲೆ ಅವರ ನಿರ್ಮಾಣದ ಸಿನಿಮಾವೊಂದು ಸೆಟ್ಟೇರಲಿದೆ. ಧೋನಿಗೂ ಮತ್ತು ಬಾಲಿವುಡ್ ಗೂ ಸಖತ್ ನಂಟಿದ್ದರೂ, ಅವರು ತಮಿಳು ಸಿನಿಮಾ ರಂಗದ ಮೂಲಕ ಸಿನಿಮಾ ರಂಗಕ್ಕೆ ಪ್ರವೇಶಿಸುತ್ತಿರುವುದು ವಿಶೇಷ. ಇದನ್ನೂ ಓದಿ : ಕಂಗನಾಗೆ ಹುಡುಗರನ್ನು ಕಂಡರೆ ಆಗಲ್ಲವಂತೆ: ಅದಕ್ಕೆ ಮದುವೆ ಆಗಿಲ್ಲವಂತೆ

ಈಗಾಗಲೇ ಧೋನಿ ಅವರ ಬಯೋಪಿಕ್ ಹಿಂದಿ ಮತ್ತು ತಮಿಳಿನಲ್ಲಿ ರಿಲೀಸ್ ಆಗಿತ್ತು. ಹಿಂದಿಗಿಂತಲೂ ತಮಿಳಿನಲ್ಲೇ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಅಲ್ಲದೇ, ತಮಿಳಿನಲ್ಲಿ ಧೋನಿ ಅವರನ್ನು ಅಪಾರವಾಗಿ ಪ್ರೀತಿಸುವ ಅಭಿಮಾನಿಗಳು ಇದ್ದಾರಂತೆ. ಹಾಗಾಗಿ ತಮಿಳು ಸಿನಿಮಾವನ್ನು ನಿರ್ಮಾಣ ಮಾಡುವ ಮೂಲಕ ನಿರ್ಮಾಪಕರಾಗಿ ಬಣ್ಣದ ಲೋಕಕ್ಕೆ ಕಾಲಿಡುತ್ತಿದ್ದಾರೆ ಧೋನಿ. ಇದನ್ನೂ ಓದಿ : ವಿಜಯ್ ದೇವರಕೊಂಡ ಹೊಸ ಗರ್ಲ್ ಫ್ರೆಂಡ್ ಅನನ್ಯ ಪಾಂಡೆ? : ಮುನಿಸಿಕೊಂಡ್ರಾ ರಶ್ಮಿಕಾ ಮಂದಣ್ಣ

ತಮ್ಮ ಚೊಚ್ಚಲು ಸಿನಿಮಾವನ್ನು ಮಹಿಳಾ ಪ್ರಧಾನ ಚಿತ್ರಕ್ಕಾಗಿ ಮೀಸಲಿಟ್ಟಿದ್ದಾರೆ ಎನ್ನುವ ಮಾಹಿತಿ ಇದೆ. ಹಾಗಾಗಿ ಈ ಸಿನಿಮಾಗೆ ನಾಯಕಿಯಾಗಿ ಲೇಡಿ ಸೂಪರ್ ಸ್ಟಾರ್ ನಯನತಾರಾ ಆಯ್ಕೆಯಾಗುವ ಸಾಧ್ಯತೆ ಇದೆ. ಈಗಾಗಲೇ ಧೋನಿ ಮತ್ತು ನಯನತಾರಾ ಭೇಟಿಯಾಗಿದ್ದು, ಒಂದು ಹಂತದ ಮಾತುಕತೆ ಕೂಡ ಮುಗಿದಿದೆ. ಧೋನಿ ನಿರ್ಮಾಣದಲ್ಲಿ ಸಿನಿಮಾದಲ್ಲಿ ನಟಿಸಲು ನಯನತಾರಾ ಒಪ್ಪಿಕೊಂಡಿರುವ ವಿಷಯವು ಕಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ಇದನ್ನೂ ಓದಿ : ಕಾಂಗ್ರೆಸ್‍ನಿಂದಲೇ ಟ್ರೋಲ್‍ಗೆ ಕರೆ – ನನ್ನನ್ನು ನಾನೇ ಟ್ರೋಲ್ ಮಾಡ್ಕೋತಿನಿ ಎಂದ ರಮ್ಯಾ

ಈ ಸಿನಿಮಾದ ಬಗ್ಗೆ ಹೆಚ್ಚಿನ ಮಾಹಿತಿಯು ಲಭ್ಯವಾಗದೇ ಇದ್ದರೂ, ಅತೀ ಶೀಘ್ರದಲ್ಲೇ ಧೋನಿ ಅವರ ಎಲ್ಲ ಮಾಹಿತಿಯನ್ನು ಹಂಚಿಕೊಳ್ಳಲಿದ್ದಾರೆ ಎನ್ನುತ್ತದೆ ಅವರ ಆಪ್ತವಲಯ. ಈಗಾಗಲೇ ಸಿನಿಮಾದ ಕಥೆಯು ಆಯ್ಕೆಯಾಗಿದ್ದು, ನಿರ್ದೇಶಕರನ್ನೂ ಕೂಡ ಧೋನಿ ಗೊತ್ತು ಮಾಡಿದ್ದಾರಂತೆ. ಹೆಸರಾಂತ ನಿರ್ದೇಶಕರೇ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ ಎನ್ನುವ ಮಾಹಿತಿ ಇದೆ.

Share This Article
Leave a Comment

Leave a Reply

Your email address will not be published. Required fields are marked *