7 ತಿಂಗಳ ಬಳಿಕ ಮೊದಲ ಬಾರಿಗೆ ಮಗಳ ಮುಖ ರಿವೀಲ್ ಮಾಡಿದ ಧ್ರುವ ಸರ್ಜಾ

Public TV
1 Min Read

ಸ್ಯಾಂಡಲ್‌ವುಡ್ ಸ್ಟಾರ್ ಧ್ರುವ ಸರ್ಜಾ (Dhruva Sarja) ಅವರು ತಮ್ಮ ಮಗಳ ಮುಖ ರಿವೀಲ್ ಮಾಡುವ ಮೂಲಕ ಫ್ಯಾನ್ಸ್‌ಗೆ ಗುಡ್ ನ್ಯೂಸ್ ನೀಡಿದ್ದಾರೆ. ಮಗಳು ಹುಟ್ಟಿದ 7 ತಿಂಗಳ ಬಳಿಕ ಮೊದಲ ಬಾರಿಗೆ ಮಗಳ (Daughter) ಮುಖವನ್ನ ರಿವೀಲ್ ಮಾಡಿದ್ದಾರೆ. ಈ ಕುರಿತ ಫೋಟೋವನ್ನ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ.

ಬಾಲ್ಯದ ಗೆಳತಿ ಪ್ರೇರಣಾರನ್ನ ಪ್ರೀತಿಸಿ 2019ರಲ್ಲಿ ಮದುವೆಯಾದರು. ಕಳೆದ ವರ್ಷ ಧ್ರುವ ದಂಪತಿ ಚೊಚ್ಚಲ ಮಗುವನ್ನ ಬರಮಾಡಿಕೊಂಡರು. ಕಳೆದ 7 ತಿಂಗಳಿಂದ ಮುದ್ದಾದ ಮಗಳ ಮುಖವನ್ನು ನಟ ರಿವೀಲ್ ಮಾಡಿರಲಿಲ್ಲ. ಇದೀಗ ಭರ್ಜರಿ ಫೋಟೋಶೂಟ್ ಮೂಲಕ ಧ್ರುವ ಪೋಸ್ಟ್ ಶೇರ್ ಮಾಡಿದ್ದಾರೆ. ಇದನ್ನೂ ಓದಿ:ಸಮಂತಾರಂತೆ ಐಟಂ ಡ್ಯಾನ್ಸ್ ಒಪ್ಪಲ್ಲ- ನಾಗಚೈತನ್ಯ ಮಾಜಿಪತ್ನಿಗೆ ಕೃತಿ ಶೆಟ್ಟಿ ಟಕ್ಕರ್

ಧ್ರುವ ಸರ್ಜಾ ಮಗಳಿಗೀಗ 7 ತಿಂಗಳು. 7 ತಿಂಗಳ ಬಳಿಕ ಮೊದಲ ಫೋಟೋ ಶೇರ್ ಮಾಡಿದ್ದಾರೆ. ಅಂದಹಾಗೆ ಇದು 7 ತಿಂಗಳ ಮಗಳ ಫೋಟೋವಲ್ಲ. ಒಂದು ತಿಂಗಳಿದ್ದಾಗ ಕ್ಲಿಕ್ ಮಾಡಿದ ಫೋಟೋ ಇದಾಗಿದೆ ಎಂದು ಧ್ರುವ ಸರ್ಜಾ ಹೇಳಿದ್ದಾರೆ. ಹಲೋ ಸ್ನೇಹಿತರೆ ಹಾಗೂ ಕುಟುಂಬದವರೆ, ನಿಮ್ಮೆಲ್ಲರಿಗೂ ನನ್ನ ಪ್ರೀತಿ. ನನಗೆ ಇನ್ನೂ ಹೆಸರಿಟ್ಟಿಲ್ಲ. ನನಗೆ ಈಗ 7 ತಿಂಗಳು. ನನ್ನ ಪಯಣವನ್ನು ಹಂಚಿಕೊಳ್ಳಲು ಖುಷಿ ಆಗುತ್ತದೆ. ಮಗಳು ಒಂದು ತಿಂಗಳ ಮಗುವಾಗಿದ್ದಾಗ ಕ್ಲಿಕ್ ಮಾಡಿದ ಕೆಲವು ಫೋಟೋಗಳನ್ನು ಹಂಚಿಕೊಳ್ಳಲು ಉತ್ಸುಕನಾಗಿದ್ದೇನೆ ಎಂದು ಬರೆದಿದ್ದಾರೆ.

 

View this post on Instagram

 

A post shared by Dhruva Sarja (@dhruva_sarjaa)

ನಾನು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಫೋಟೋಗಳು ಮತ್ತು ಅಪ್‌ಡೇಟ್ ಹಂಚಿಕೊಳ್ಳುತ್ತೇನೆ. ನಿಮ್ಮ ಆಶೀರ್ವಾದ ಇರಲಿ. ಜೈ ಹನುಮಾನ್ ಎಂದು ಹೇಳಿದ್ದಾರೆ.

Share This Article