ಅಣ್ಣನ ಮಗನಿಗೆ ಡಾನ್ಸ್ ಹೇಳಿಕೊಟ್ಟ ಧ್ರುವ ಸರ್ಜಾ

Public TV
2 Min Read

ಟ ಧ್ರುವ ಸರ್ಜಾ (Dhruva Sarja) ಸಮಯ ಸಿಕ್ಕಾಗೆಲ್ಲ ಸಹೋದರ ಚಿರಂಜೀವಿ ಸರ್ಜಾ (Chiranjeevi Sarja) ಅವರ ಪುತ್ರ ರಾಯನ್ ಜೊತೆ ಕಾಲ ಕಳೆಯುತ್ತಾರೆ. ರಾಯನ್ (Rayan) ಕೂಡ ಚಿಕ್ಕಪ್ಪನ ಕಂಡರೆ ಎಲ್ಲಿಲ್ಲದ ಪ್ರೀತಿ. ಈ ಬಾರಿ ಚಿಕ್ಕಪ್ಪನ ಹುಟ್ಟು ಹಬಕ್ಕೆ ವಿಶೇಷ ವಿಡಿಯೋವೊಂದನ್ನು ತಾಯಿ ಮೇಘನಾ ಮೂಲಕ ಶೇರ್ ಮಾಡಿದ್ದಾನೆ ಪುಟಾಣಿ. ಈ ವಿಡಿಯೋದಲ್ಲಿ ರಾಯನ್ ಗೆ ಧ್ರುವ ಸರ್ಜಾ ಡಾನ್ಸ್ ಕಲಿಸುತ್ತಿದ್ದಾರೆ. ಅಲ್ಲದೇ ಎತ್ತಿ ಮಗುವನ್ನು ಧ್ರುವ ಮುದ್ದಾಡುತ್ತಾರೆ. ಈ ವಿಡಿಯೋವನ್ನು ಮೇಘನಾ ರಾಜ್ (Meghana Raj) ತಮ್ಮ ಇನ್ಸ್ಟಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ತಮ್ಮದೇ ಸಿನಿಮಾದ ಹಾಡಿನ ಹುಕ್ ಸ್ಟೇಪ್ ಅನ್ನು ರಾಯನ್ ಗೆ ಹೇಳಿಕೊಟ್ಟಿದ್ದಾರೆ ಧ್ರುವ ಸರ್ಜಾ. ಥೇಟ್ ಮಗುವಿನಂತೆಯೇ ಅವರು ಕುಣಿಸಿದ್ದಾರೆ. ಈ ವಿಡಿಯೋದಲ್ಲಿ ರಾಯನ್ ತಾತ, ನಟ ಸುಂದರ್ ರಾಜ್ ಕೂಡ ಇದ್ದಾರೆ. ಮೊಮ್ಮಗ ಡಾನ್ಸ್ ಕಂಡು ಅವರೂ ಸಂಭ್ರಮಿಸಿದ್ದಾರೆ. ಈ ವಿಡಿಯೋವನ್ನು ಧ್ರುವ ಅವರ ಹುಟ್ಟು ಹಬ್ಬಕ್ಕಾಗಿ ಹಂಚಿಕೊಂಡಿದ್ದಾರೆ ಮೇಘನಾ. ಈ ಮೂಲಕ ಚಿಕ್ಕಪ್ಪನಿಗೆ ಶುಭಾಶಯ ಹೇಳಿದ್ದಾನೆ ರಾಯನ್.

ಅಗಲಿದ ನಟ ಚಿರಂಜೀವಿ ಸರ್ಜಾ ಅವರ ಕೊನೆಯ ಸಿನಿಮಾ ರಾಜಮಾರ್ತಾಂಡ ನಿನ್ನೆಯಷ್ಟೇ ಬಿಡುಗಡೆ ಆಗಿದೆ. ಇದು ಚಿರು ಅವರ ಕೊನೆಯ ಸಿನಿಮಾವಾಗಿದ್ದರಿಂದ ದೊಡ್ಡ ಮಟ್ಟದಲ್ಲಿಯೇ ಸಿನಿಮಾ ಬಿಡುಗಡೆ ಮಾಡಲಾಗಿದೆ. ರಿಲೀಸ್ ಹಿನ್ನೆಲೆಯಲ್ಲಿ ಚಿತ್ರತಂಡವು ವಿಶೇಷ ಪೂಜೆಯನ್ನೂ ಸಲ್ಲಿಸಿದೆ. ಈ ಸಂದರ್ಭದಲ್ಲಿ ಚಿತ್ರದ ನಿರ್ದೇಶಕ ರಾಮ್ ನಾರಾಯಣ್, ವಿಶೇಷ ಸುದ್ದಿಯೊಂದನ್ನು ನೀಡಿದ್ದರು. ಚಿರು ಅವರ ಕೊನೆಯ ಸಿನಿಮಾದಲ್ಲಿ ಚಿರು ಪುತ್ರ ರಾಯನ್ ರಾಜ್ ಕೂಡ ಕಾಣಿಸಿಕೊಂಡಿದ್ದಾರೆ. ಸಿನಿಮಾ ರೆಡಿಯಾಗಿ ಒಂದು ವರ್ಷವೇ ಆಗಿದೆ. ರಾಯನ್ ರಾಜ್ ಹುಟ್ಟುವ ಮೊದಲೇ ಈ ಚಿತ್ರದ ಬಹುತೇಕ ಕೆಲಸಗಳು ಮುಗಿದಿದ್ದವು. ಹಾಗಾಗಿ ರಾಯನ್ ಯಾವ ರೀತಿಯಲ್ಲಿ ಎಂಟ್ರಿ ಕೊಡಲಿದ್ದಾರೆ ಎನ್ನುವುದು ಕುತೂಹಲ ಸಂಗತಿಯಾಗಿತ್ತು. ಅದಕ್ಕೀಗ ಸಿನಿಮಾದಲ್ಲಿ ಉತ್ತರ ಸಿಕ್ಕಿದೆ.

 

ಚಿರಂಜೀವಿ ಸರ್ಜಾ ಅವರ ಪುತ್ರ ರಾಯನ್ ರಾಜ್ ಅವರ ಅನೇಕ ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಪ್ರತಿ ಫೋಟೋ ಬಂದಾಗಲೂ ಚಿರು ಅಭಿಮಾನಿಗಳು ಮತ್ತು ಮೇಘನಾ ರಾಜ್ ಅಭಿಮಾನಿಗಳು ಪ್ರೀತಿಯಿಂದ ಅವುಗಳನ್ನು ಬರಮಾಡಿಕೊಳ್ಳುತ್ತಾರೆ. ಈ ಬಾರಿ ಬಿಗ್ ಸ್ಕ್ರೀನ್ ನಲ್ಲೇ ರಾಯನ್ ರಾಜ್ ಅವರನ್ನು ಅಭಿಮಾನಿಗಳು ಕಣ್ತುಂಬಿಕೊಂಡಿದ್ದಾರೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್