ಮೋದಿಯವರು ಕರ್ನಾಟಕವನ್ನ ಪಾಕಿಸ್ತಾನದಲ್ಲಿದೆ ಎಂದು ತಿಳಿದಿದ್ದಾರಾ: ಕಾಂಗ್ರೆಸ್‌ ಪ್ರಶ್ನೆ

Public TV
2 Min Read

ಬೆಂಗಳೂರು: ಕರ್ನಾಟಕಕ್ಕೆ ಅನುದಾನ, ಅಕ್ಕಿ ನೀಡದಿರುವ ಕೇಂದ್ರ ಸರ್ಕಾರ ಪರದೇಶಗಳಿಗೆ ಸಹಾಯ ಹಸ್ತ ಚಾಚಿದೆ ಎಂದು ಪ್ರಧಾನಿ ಮೋದಿ (Narendra Modi) ನೇತೃತ್ವದ ಸರ್ಕಾರದ ವಿರುದ್ಧ ಕರ್ನಾಟಕ ಕಾಂಗ್ರೆಸ್‌ (Karnataka Congress) ಕಿಡಿಕಾರಿದೆ.

ಈ ಕುರಿತು ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿರುವ ಕಾಂಗ್ರೆಸ್‌, ಕರ್ನಾಟಕಕ್ಕೆ ಅನುದಾನ ಕೊಡದ ಮೋದಿ ತಾಲಿಬಾನಿಗೆ ಬಜೆಟ್ಟಿನಲ್ಲಿ 200 ಕೋಟಿ ದಯಪಾಲಿಸಿದ್ದಾರೆ. ಕರ್ನಾಟಕಕ್ಕೆ ಅಕ್ಕಿ ಮಾರಾಟ ಮಾಡಲು ನಿರ್ಬಂಧಿಸಿದ ಕೇಂದ್ರ ಸರ್ಕಾರ ಸಿಂಗಾಪುರಕ್ಕೆ ಅಕ್ಕಿ ಕಳಿಸಿಕೊಡಲು ತುದಿಗಾಲಲ್ಲಿ ನಿಂತಿದೆ. ಮೋದಿಯವರು ಕರ್ನಾಟಕ ಪಾಕಿಸ್ತಾನದಲ್ಲಿದೆ ಎಂದು ತಿಳಿದಿದ್ದಾರಾ? ಮೋದಿ ಈ ದೇಶದ ಪ್ರಧಾನಿಯೋ, ಪರದೇಶದ ಪ್ರಧಾನಿಯೋ ಎಂದು ಕಾಂಗ್ರೆಸ್‌ ಖಾರವಾಗಿ ಪ್ರಶ್ನಿಸಿದೆ. ಇದನ್ನೂ ಓದಿ: Karnataka Bandh: ಎಲ್ಲ ರಾಜ್ಯದ ರೈತರೂ ಒಂದೇ, ಸರಕಾರಗಳು ಕೂತು ಮಾತನಾಡಲಿ : ನಟ ಶಿವಣ್ಣ

ಅನ್ನಭಾಗ್ಯ ಯೋಜನೆಯಡಿ ಕರ್ನಾಟಕದ ಜನತೆಗೆ ಪಡಿತರ ಅಕ್ಕಿ ವಿತರಿಸಲು ಕಾಂಗ್ರೆಸ್‌ ಸರ್ಕಾರಕ್ಕೆ ಹೆಚ್ಚಿನ ಪ್ರಮಾಣದ ಅಕ್ಕಿ ಬೇಕಾಗಿತ್ತು. ಅಕ್ಕಿ ಖರೀದಿಗೆ ಕೇಂದ್ರ ಸರ್ಕಾರದ ಬಳಿ ಪ್ರಸ್ತಾಪ ಮುಂದಿಟ್ಟಿತು. ಆದರೆ ಕರ್ನಾಟಕ ಸರ್ಕಾರದ ಪ್ರಸ್ತಾಪವನ್ನು ಕೇಂದ್ರ ನಿರಾಕರಿಸಿತು. ಅಕ್ಕಿ ಮಾರಾಟ ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿತ್ತು.

ಅಷ್ಟೇ ಅಲ್ಲದೇ, ತಮಿಳುನಾಡಿಗೆ ಕರ್ನಾಟಕ ಸರ್ಕಾರ ನೀರು ಬಿಡುತ್ತಿರುವುದನ್ನು ಖಂಡಿಸಿ ವಿವಿಧ ಸಂಘಟನೆಗಳು ಇಂದು (ಶುಕ್ರವಾರ) ಕರ್ನಾಟಕ ಬಂದ್‌ ನಡೆಸಿವೆ. ಈ ವಿಚಾರವಾಗಿಯೂ ರಾಜ್ಯ ಸರ್ಕಾರ, ಬಿಜೆಪಿ ಸಂಸದರ ವಿರುದ್ಧ ಟ್ವೀಟ್‌ ಮಾಡಿ ಕಿಡಿಕಾರಿದೆ. ಇದನ್ನೂ ಓದಿ: ಕಾವೇರಿ ಕರ್ನಾಟಕ ಬಂದ್‌ಗೆ ಬೀದರ್‌ನಲ್ಲಿ ನೀರಸ ಪ್ರತಿಕ್ರಿಯೆ

ಕರ್ನಾಟಕಕ್ಕೆ ನಿರಂತರ ಅನ್ಯಾಯವಾಗುತ್ತಿದ್ದರೂ ಬಿಜೆಪಿಯ 25 ಸಂಸದರ ಬಾಯಿ ‘ಪರ್ಮನೆಂಟ್‌ ಬಂದ್‌’ ಆಗಿರುತ್ತದೆ ಎಂದು ಕಾಂಗ್ರೆಸ್‌ ವಾಗ್ದಾಳಿ ನಡೆಸಿದೆ.

ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಎಸಗಿದ ಅನ್ಯಾಯ ಒಂದೆರಡಲ್ಲ. ನೆರೆ ಪರಿಹಾರದಲ್ಲೂ ಅನ್ಯಾಯ, ಬರ ಪರಿಹಾರದಲ್ಲೂ ಅನ್ಯಾಯ, ಜಿಎಸ್‌ಟಿ ಹಂಚಿಕೆಯಲ್ಲೂ ಅನ್ಯಾಯ, ಕೇಂದ್ರದ ಯೋಜನೆಗಳ ಅನುದಾನದಲ್ಲೂ ಅನ್ಯಾಯ, ಈಗ ಕಾವೇರಿ ವಿಚಾರದಲ್ಲೂ ಅನ್ಯಾಯ. ಈ ಎಲ್ಲಾ ಅನ್ಯಾಯಕ್ಕೂ ಕರ್ನಾಟಕದ ಬಿಜೆಪಿ ಸಂಸದರದ್ದು ‘ಮೌನ’ ಮಾತ್ರ. ಕರ್ನಾಟಕ ಇರುವುದು ಚುನಾವಣಾ ರೋಡ್‌ ಶೋ ಮಾಡಲು ಮಾತ್ರ ಎಂದು ತಿಳಿದಿದ್ದಾರಾ ಮೋದಿಯವರು ಎಂದು ಕಾಂಗ್ರೆಸ್‌ ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿ ಪ್ರಶ್ನಿಸಿದೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್