ಕನಸು ಭಗ್ನಗೊಂಡ ಹೆಚ್‌ಡಿಕೆ, ಭಗ್ನಪ್ರೇಮಿಯಂತೆ ವ್ಯಾಘ್ರರಾಗಿದ್ದಾರೆ: ದಿನೇಶ್‌ ಗುಂಡೂರಾವ್‌ ತಿರುಗೇಟು

Public TV
2 Min Read

ಬೆಂಗಳೂರು: ಕಿಂಗ್‌ ಮೇಕರ್‌ ಆಗುವ ಕನಸು ಕಂಡಿದ್ದ ಹೆಚ್‌.ಡಿ. ಕುಮಾರಸ್ವಾಮಿ (H.D. Kumaraswamy) ಅವರ ಕನಸು ಭಗ್ನಗೊಂಡು, ಭಗ್ನಪ್ರೇಮಿಯಂತೆ ವ್ಯಾಘ್ರರಾಗಿದ್ದಾರೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ (Dinesh Gundu Rao) ಟಾಂಗ್‌ ಕೊಟ್ಟಿದ್ದಾರೆ.

ಸರ್ಕಾರದ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿರುವ ಹೆಚ್‌ಡಿಕೆ ವಿರುದ್ಧ ಟ್ವೀಟ್‌ ಮೂಲಕ ದಿನೇಶ್‌ ಗುಂಡೂರಾವ್‌ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಸುಳ್ಳು ಹೇಳುವ ಸ್ಪರ್ಧೆಗಿಳಿದಿದೆ: ಪ್ರಹ್ಲಾದ್ ಜೋಶಿ

ಟ್ವೀಟ್‌ನಲ್ಲಿ ಏನಿದೆ?
ಹೆಚ್‌ಡಿಕೆ ಯವರು ಚುನಾವಣೆಗೂ ಮುನ್ನ ‘ಕಿಂಗ್ ಮೇಕರ್’ ಆಗುವ ಕನಸು ಕಂಡಿದ್ದರು. ಆದರೆ ಜನರು ಚುನಾವಣೆಯಲ್ಲಿ ಹೆಚ್‌ಡಿಕೆ ‘ಕಿಂಗ್ ಮೇಕರ್’ ಕನಸನ್ನು ನುಚ್ಚುನೂರು ಮಾಡಿದರು. ಕನಸು ಭಗ್ನಗೊಂಡ ಅವರು, ಭಗ್ನಪ್ರೇಮಿಯಂತೆ ವ್ಯಾಘ್ರರಾಗಿದ್ದಾರೆ. ಹಾಗಾಗಿ ಬಾಯಿಗೆ ಬಂದಂತೆ ನಮ್ಮ ಸರ್ಕಾರದ ವಿರುದ್ಧ ಇಲ್ಲ ಸಲ್ಲದ ಸುಳ್ಳು ಆರೋಪ ಮಾಡುತ್ತಾ ತಿರುಗಾಡುತ್ತಿದ್ದಾರೆ.

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಕ್ಷಣದಿಂದಲೂ ಹೆಚ್‌ಡಿಕೆ ಯವರ ನಿದ್ರೆ-ನೆಮ್ಮದಿ ಹಾರಿ ಹೋಗಿದೆ‌. ಹತಾಶೆಯ ಕೂಪದಲ್ಲಿ ಬಿದ್ದು ವಿಲ ವಿಲ ಒದ್ದಾಡುತ್ತಿರುವ ಅವರು ನಮ್ಮ ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡುವುದನ್ನೇ ಪೂರ್ಣಕಾಲಿಕ ಉದ್ಯೋಗ ಮಾಡಿಕೊಂಡಿದ್ದಾರೆ. ಆರೋಪ ಮಾಡಿದರೆ ಅದನ್ನು ಸಾಬೀತುಪಡಿಸಲಿ. ಸುಮ್ಮನೆ ಗಾಳಿಯಲ್ಲಿ ಗುಂಡು ಹಾರಿಸುವುದ್ಯಾಕೆ? ಇದನ್ನೂ ಓದಿ: ಬಿಜೆಪಿ ಅವಧಿಯಲ್ಲಿನ ಕಾಮಗಾರಿಗಳ ಬಗ್ಗೆ ಮಾಹಿತಿ ಕೊಡಿ: BBMPಗೆ ಡಿಕೆಶಿ ಪತ್ರ

ಕುಮಾರಸ್ವಾಮಿ ಅವರು ನಮ್ಮ ಸರ್ಕಾರದ ವಿರುದ್ಧ ಆರೋಪ ಮಾಡಲು ಒಮ್ಮೆ ಪೆನ್‌ಡ್ರೈವ್ ತೋರಿಸುತ್ತಾರೆ ಮತ್ತೊಮ್ಮೆ ಸಿಡಿ ತೋರಿಸುತ್ತಾರೆ. ನಿಜವಾಗಿಯೂ ಅವರ ಬಳಿ ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ. ಕುಮಾರಸ್ವಾಮಿಯವರ ಕೈಯನ್ನು ನಾವ್ಯಾರು ಕಟ್ಟಿ ಹಾಕಿಲ್ಲ. ಅವರು ಪದೇ ಪದೇ ತೋಳ ಬಂತು ತೋಳದ ಕಥೆಯ ಕಥಾನಾಯಕನ ರೀತಿ ವರ್ತಿಸಿದರೆ ಹೆದರುವರು ಯಾರು ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್