ಮೊಂಡುವಾದ ಬಿಟ್ಟು ರಾಜ್ಯಕ್ಕೆ ಅನ್ಯಾಯವಾಗುತ್ತಿರೋದನ್ನ ಹರೀಶ್ ಪೂಂಜಾ ಒಪ್ಪಿಕೊಳ್ಳಬೇಕು: ದಿನೇಶ್ ಗುಂಡೂರಾವ್

Public TV
2 Min Read

– ಹಿಂದೂಗಳ ತೆರಿಗೆ, ಹಿಂದೂಗಳ ಹಕ್ಕು ಅಭಿಯಾನಕ್ಕೆ ಕರೆ ವಿಚಾರಕ್ಕೆ ಸಚಿವರ ಆಕ್ರೋಶ

ಮಂಗಳೂರು: ನಾವು ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ ಎನ್ನುತ್ತಿದ್ದೇವೆ ಆದರೆ ಹರೀಶ್ ಪೂಂಜಾ (Harish Poonja) ಉದ್ದೇಶವೇ ಬೇರೆ ಇದೆ. ರಾಜ್ಯಕ್ಕೆ ಅನ್ಯಾಯ ಆಗುತ್ತಿರುವ ಸತ್ಯಾಂಶವನ್ನ ಅವರು ಒಪ್ಪಿಕೊಳ್ಳಬೇಕು. ಅದನ್ನು ಒಪ್ಪಿಕೊಳ್ಳದೇ ಮೊಂಡುವಾದ ಪ್ರದರ್ಶನ ಮಾಡಿದ್ರೆ ಏನ್ ಹೇಳೋದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ವಾಗ್ದಾಳಿ ನಡೆಸಿದ್ದಾರೆ.

ಮಂಗಳೂರಿನಲ್ಲಿ (Mangaluru) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಶಾಸಕ ಹರೀಶ್ ಪೂಂಜಾ `ಹಿಂದೂಗಳ ತೆರಿಗೆ, ಹಿಂದೂಗಳ ಹಕ್ಕು’ ಅಭಿಯಾನಕ್ಕೆ ಕರೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯಕ್ಕೆ ಬರುವ ತೆರಿಗೆ ಪ್ರಮಾಣದಲ್ಲಿ ಯಾವುದೇ ವೃದ್ಧಿಯಾಗಿಲ್ಲ. ಈ ವಿಚಾರ ಪೂಂಜಾ ಮಾತನಾಡಬೇಕು. ಇದರಲ್ಲೂ ಅವರು ಜನರನ್ನು ಒಡೆಯಲು ಹೊರಟಿರುವುದು ದುರ್ದೈವದ ವಿಚಾರ. ಇವರದ್ದೆಲ್ಲಾ ಇದೇ ಕುತಂತ್ರ, ಧರ್ಮದ ಹೆಸರಿನಲ್ಲಿ ಅನ್ಯಾಯದ ಕೆಲಸ ಮಾಡುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಏಪ್ರಿಲ್ 10ರ ಒಳಗಡೆ ವನ್ಯಜೀವಿ ಅಂಗಾಂಗಗಳ ವಾಪಸ್ ನೀಡಿ – ಸರ್ಕಾರದ ಡೆಡ್‌ಲೈನ್

ಸ್ವಯತ್ತ ಸಂಸ್ಥೆಯ ಅಧಿಕಾರಿಗಳು ಕೂಡ ಇವರು ಹೇಳಿದಂತೆ ಕೇಳುತ್ತಿದ್ದಾರೆ. ಸಿಎಂನ್ನು ಅರೆಸ್ಟ್ ಮಾಡೋದು, ವಿರೋಧ ಪಕ್ಷಕ್ಕೆ ತೊಂದರೆ ಕೊಡೋದು, ಪತ್ರಕರ್ತರನ್ನು ಜೈಲಿಗೆ ಹಾಕಿಸೋ ಕೆಲಸ ಆಗುತ್ತಿದೆ. ಇದು ಸರ್ವಾಧಿಕಾರ ಮತ್ತು ಪ್ರಜಾಪ್ರಭುತ್ವ ವಿರೋಧಿ ಧೋರಣೆ ಎಂದು ಅವರು ಕೇಂದ್ರದ ವಿರುದ್ಧ ಆರೋಪ ಮಾಡಿದ್ದಾರೆ.

ಕೆಂಪಣ್ಣ ಸಿಎಂ ಬಳಿ ಬಂದು ಹೇಳಲಿ: ಕಾಂಗ್ರೆಸ್ ಸರ್ಕಾರದ ವಿರುದ್ದ ಕೆಂಪಣ್ಣ 40% ಕಮಿಷನ್ ಆರೋಪ ವಿಚಾರವಾಗಿ, ನಮ್ಮ ಸರ್ಕಾರ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದೆ. ಕೆಂಪಣ್ಣರ ವಿಷಯ ನಿಜವಾಗಿದ್ರೆ ಬಂದು ಸಿಎಂಗೆ ಹೇಳಬಹುದು. ಅವರು ಯಾವ ವಿಚಾರ ಎಲ್ಲಿ, ಏನಾಗ್ತಿದೆ ಎಂದು ಸ್ಪಷ್ಟವಾಗಿ ಹೇಳಲಿ. ನನ್ನ ಇಲಾಖೆಯಲ್ಲಿ ನಡೆಯುತ್ತಿದ್ದರೆ ನಾನು ತನಿಖೆ ಮಾಡಿಸುತ್ತೇನೆ. ಕಳೆದ ಬಾರಿ ಅವರು ಅನೇಕ ವಿಷಯ ಪ್ರಸ್ತಾಪ ಮಾಡಿದ್ದರು. ಅದರಿಂದ ನಾವು ಅವರ ಆರೋಪಕ್ಕೆ ತನಿಖೆ ನಡೆಸುತ್ತಿದ್ದೇವೆ. ಅದೇ ರೀತಿ ಇವತ್ತು ಇದ್ದರೂ ಕ್ರಮ ತೆಗೆದುಕೊಳ್ಳೊಣ. ಭ್ರಷ್ಟಾಚಾರದ ವಿರುದ್ಧ ಯಾವುದೇ ಸಹನೆ ಇರಬಾರದು ಎಂದಿದ್ದಾರೆ.

ಜೂಜು ಹೆಚ್ಚಾದ್ರೆ ಕ್ರಮ: ಜಿಲ್ಲೆಯ ಸಾಂಪ್ರದಾಯಿಕ ಕೋಳಿ ಅಂಕ ನಿರ್ಬಂಧ ವಿಚಾರವಾಗಿ, ಕೋಳಿ ಅಂಕದ ವಿಚಾರ ನನಗೆ ಯಾವುದೇ ದೂರು ಬಂದಿಲ್ಲ. ನನ್ನ ಗಮನಕ್ಕೆ ಯಾರೂ ತಂದಿಲ್ಲ, ಯಾರಾದರೂ ಗಮನಕ್ಕೆ ತಂದರೆ ಚರ್ಚೆ ಮಾಡುತ್ತೇನೆ. ಆಟಕ್ಕೋಸ್ಕರ ಮತ್ತು ಜೂಜಿಗಾಗಿ ಕೋಳಿ ಅಂಕ ಮಾಡಲಾಗುತ್ತದೆ. ಆಟ ನಮ್ಮ ಕಲೆ ಮತ್ತು ಸಂಪ್ರದಾಯ, ಕ್ರೀಡೆ ಎಂದು ಒಪ್ಪಿಕೊಳ್ಳಬೇಕು. ಕಂಬಳ, ಜಲ್ಲಿಕಟ್ಟು ಮಾಡ್ತಾರೆ, ಆದರೆ ಜೂಜು ಹೆಚ್ಚಾದಾಗ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್‌ಐಆರ್‌ ದಾಖಲು

Share This Article