ಆಪರೇಷನ್ ಕಮಲ ಬಿಜೆಪಿಯವರ ಅನಿಷ್ಟ ಕೂಸು: ದಿನೇಶ್ ಗುಂಡೂರಾವ್

Public TV
3 Min Read

ಬೆಂಗಳೂರು: ಆಪರೇಷನ್ ಕಮಲ ಬಿಜೆಪಿಯವರ ಅನಿಷ್ಟ ಕೂಸು, ಮಹಾರಾಷ್ಟ್ರದಲ್ಲಿ ಬಿಜೆಪಿ ಹೀನ ರಾಜಕಾರಣ ಮಾಡುತ್ತಿದೆ ಎಂದು ಕಾಂಗ್ರೆಸ್ ದಿನೇಶ್ ಗುಂಡೂರಾವ್ ಆಕ್ರೋಶ ಹೊರಹಾಕಿದ್ದಾರೆ.

ಮಹಾರಾಷ್ಟ್ರದ ರಾಜಕೀಯ ಬೆಳವಣಿಗೆ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಮಹಾರಾಷ್ಟ್ರದಲ್ಲಿ ಮತ್ತೆ ಕೊಳಕು ರಾಜಕೀಯ ಶುರು ಮಾಡಿರುವ ಬಿಜೆಪಿ ಆಪರೇಶನ್ ಕಮಲದ ಮೂಲಕ ಅಧಿಕಾರಕ್ಕೆ ಬರುವ ಯತ್ನ ಮಾಡುತ್ತಿದೆ. ಆಪರೇಷನ್ ಕಮಲ ಬಿಜೆಪಿಯವರ ಅನಿಷ್ಟ ಕೂಸು. ಮಧ್ಯಪ್ರದೇಶ, ಕರ್ನಾಟಕದಲ್ಲಿ ಈಗಾಗಲೇ ಆಪರೇಷನ್ ಕಮಲದ ಮೂಲಕ ಅಧಿಕಾರ ಹಿಡಿದಿರುವ ಬಿಜೆಪಿ ಈಗ ಮಹಾರಾಷ್ಟ್ರದಲ್ಲೂ ಹೀನ ರಾಜಕಾರಣ ಮಾಡುತ್ತಿದೆ. ಬಿಜೆಪಿಯ ವರ್ತನೆ ಸಂವಿಧಾನ ಬಾಹಿರ ಎಂದು ಕಿಡಿಕಾರಿದ್ದಾರೆ.

ನಾ ಖಾವೂಂಗಾ, ನಾ ಖಾನೇ ದೂಂಗಾ ಎಂದು ಬೊಗಳೆ ಭಾಷಣ ಬಿಗಿಯುವ ಮೋದಿಯವರು, ಆಪರೇಷನ್ ಕಮಲಕ್ಕೆ ಸುರಿಯುವ ಸಾವಿರಾರು ಕೋಟಿ ಹಣ ಯಾರು ತಿಂದು ವಿಸರ್ಜಿಸಿದ್ದು ಎಂದು ಹೇಳುತ್ತಾರೆಯೇ? ಮೋದಿಯವರು ಪ್ರಾಮಾಣಿಕರಾಗಿದ್ದರೆ ಮಹಾರಾಷ್ಟ್ರದಲ್ಲಿ ಈಗ ನಡೆಯುತ್ತಿರುವ ಆಪರೇಷನ್ ಕಮಲದಲ್ಲಿ ಕೈ ಬದಲಾಗುವ ಹಣದ ಮೂಲದ ಬಗ್ಗೆ ಇಡಿ ತನಿಖೆಗೆ ಆದೇಶಿಸಲು ಸಾಧ್ಯವೆ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಅರ್ಚಕನ ಜೊತೆ ಪರಾರಿಯಾಗಿದ್ದ ವಿವಾಹಿತೆ ಕಾಡಂಚಿನಲ್ಲಿ ಪ್ರತ್ಯಕ್ಷ – ಮದ್ವೆಯಾಗೋದಾಗಿ ನಂಬಿಸಿ ಮೋಸ

ಅಧಿಕಾರಕ್ಕಾಗಿ ಬಿಜೆಪಿ ಎಷ್ಟು ಕೀಳು ಮಟ್ಟಕ್ಕಾದರೂ ಇಳಿಯುತ್ತದೆ ಎಂಬುದಕ್ಕೆ ಮಹಾರಾಷ್ಟ್ರದ ಇಂದಿನ ರಾಜಕೀಯ ಸನ್ನಿವೇಶ ಮಗದೊಂದು ಉದಾಹರಣೆ. ಸಂವಿಧಾನಕ್ಕೆ ಸದಾ ಅಪಚಾರ ಎಸಗುತ್ತಾ, ಪ್ರಜಾಪ್ರಭುತ್ವ ಮೌಲ್ಯಗಳನ್ನು ಕತ್ತು ಹಿಸುಕುತ್ತಾ ಬಂದಿರುವ ಬಿಜೆಪಿ ಈಗ ಮಹಾರಾಷ್ಟ್ರದಲ್ಲೂ ಅನೈತಿಕ ರಾಜಕಾರಣದ ಮೂಲಕ ಅಧಿಕಾರಕ್ಕೆ ಬರಲು ಹವಣಿಸುತ್ತಿದೆ ಎಂದು ಹರಿಹಾಯ್ದಿದ್ದಾರೆ.

ಸಂವಿಧಾನಬದ್ಧವಾಗಿ ಅಸ್ತಿತ್ವದಲ್ಲಿರುವ ಸರ್ಕಾರವನ್ನು ಅಸಂವಿಧಾನಿಕವಾಗಿ ಉರುಳಿಸುವ ಕೆಟ್ಟ ಸಂಪ್ರದಾಯ ಶುರುವಾಗಿದ್ದೇ ಕರ್ನಾಟಕದಲ್ಲಿ. ಆಪರೇಷನ್ ಕಮಲದ ಜನಕ ಯಡಿಯೂರಪ್ಪನವರು. ಬಿಎಸ್‍ವೈ ಸೃಷ್ಟಿಸಿದ ಪಿಡುಗನ್ನು ಇಂದು ದೇಶಾದ್ಯಂತ ಬಿಜೆಪಿಯವರು ಹಬ್ಬಿಸಿ ರಾಜಕೀಯ ವ್ಯವಸ್ಥೆಯನ್ನೇ ಬುಡಮೇಲು ಮಾಡುತ್ತಿದ್ದಾರೆ. ಇಂತಹ ಪಿಡುಗಿಗೆ ಜನರೇ ಕಡಿವಾಣ ಹಾಕಬೇಕು ಎಂದು ಕೆಂಡಕಾರಿದ್ದಾರೆ. ಇದನ್ನೂ ಓದಿ: ಯಾರು ಸ್ತ್ರೀಯರಿಗೆ ಅಪಮಾನ ಮಾಡುತ್ತಾರೋ ಅವರ ಪತನ ನಿಶ್ಚಿತ – ಕಂಗನಾ ಹಳೇ ವೀಡಿಯೋ ವೈರಲ್

Live Tv

Share This Article
Leave a Comment

Leave a Reply

Your email address will not be published. Required fields are marked *