ಮಲ್ಲಿಕಾ ಸಿಂಗ್ ಪಾತ್ರ ಪರಿಚಯಿಸಿದ ನಿರ್ದೇಶಕ ಸಿಂಪಲ್ ಸುನಿ

Public TV
2 Min Read

ಸಿಂಪಲ್ ಸುನಿ (Simple Suni) ನಿರ್ದೇಶನದಲ್ಲಿ ವಿನಯ್ ರಾಜ್ ಕುಮಾರ್ (Vinay Rajkumar) ನಟಿಸುತ್ತಿರುವ ರೊಮ್ಯಾಂಟಿಕ್ ಕಾಮಿಡಿ ಸಿನಿಮಾ ‘ಒಂದು ಸರಳ ಪ್ರೇಮಕಥೆ’. ಚಿತ್ರದಲ್ಲಿ ನಾಯಕಿಯರಾಗಿ ಸ್ವಾತಿಷ್ಠ ಕೃಷ್ಣನ್ (Swathistha Krishnan) ಹಾಗೂ ‘ರಾಧಾ ಕೃಷ್ಣ’ ಧಾರಾವಾಹಿ ಖ್ಯಾತಿಯ ಮಲ್ಲಿಕಾ ಸಿಂಗ್ ನಟಿಸುತ್ತಿದ್ದಾರೆ. ಮಲ್ಲಿಕಾ ಸಿಂಗ್ (Mallika Singh) ಅವರ ಪಾತ್ರ ಮತ್ತು ಪಾತ್ರದ ಹಿನ್ನೆಲೆಯನ್ನು ಪರಿಚಯಿಸುವಂತಹ ವಿಡಿಯೋ ಮತ್ತು ಫಸ್ಟ್ ಲುಕ್ ಅನ್ನು ಮಲ್ಲಿಕಾ ಅವರ ಹುಟ್ಟು ಹಬ್ಬಕ್ಕಾಗಿ ನಿರ್ದೇಶಕರು ರಿಲೀಸ್ ಮಾಡಿದ್ದಾರೆ. ಈ ಸಿನಿಮಾದಲ್ಲಿ ಮಲ್ಲಿಕಾ ಅವರು ಮಧುರಾ ಹೆಸರಿನ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಇದು ಗಾಯಕಿಯ ಪಾತ್ರವಾಗಿದೆ

ಸಿನಿಮಾ ಕುರಿತು ಮಾತನಾಡಿದ ನಟ ವಿನಯ್ ರಾಜ್ ಕುಮಾರ್, ‘ಮೊದಲ ಶೆಡ್ಯೂಲ್ ಚಿತ್ರೀಕರಣ ಮುಗಿದಿದೆ. ನನಗೆ ಮೊದಲಿನಿಂದಲೂ ರೊಮ್ಯಾಂಟಿಕ್ ಕಾಮಿಡಿ ಸಿನಿಮಾ ತುಂಬಾ ಇಷ್ಟ ಜೊತೆಗೆ ಸುನಿ ಅವರ ನಿರ್ದೇಶನದ ಶೈಲಿ ಕೂಡ ತುಂಬಾ ಇಷ್ಟ. ಸುನಿ ಅವರು ಈ ಸಿನಿಮಾ ಕಥೆ ಹೇಳಲು ಬಂದಾಗ ಅವರ ನಿರ್ದೇಶನದಲ್ಲಿ ಸಿನಿಮಾ ಮಾಡ್ತಿದ್ದೀನಿ ಅನ್ನೋದೇ ತುಂಬಾ ಖುಷಿ ಕೊಟ್ಟಿತ್ತು’ ಎಂದಿದ್ದಾರೆ.

ಈ ಚಿತ್ರದಲ್ಲಿ ವಿನಯ್ ಅವರದ್ದು ಅತಿಶಯ್ ಪಾತ್ರ. ಅದೊಂದು ಸಂಗೀತ ನಿರ್ದೇಶಕನ ಪಾತ್ರ. ದೊಡ್ಡ ಮ್ಯೂಸಿಕ್ ಡೈರೆಕ್ಟರ್ ಆಗಬೇಕು ಅನ್ನೋದು ಅವನ ಕನಸು. ಆತನ ಮನಸ್ಸಲ್ಲಿ ಒಂದು ಹುಡುಗಿಯ ಹುಡುಕಾಟ ಯಾವಾಗಲೂ ಇರುತ್ತೆ. ಇದು ಸಿನಿಮಾದ ಒಂದು ಎಳೆಯಾಗಿದೆ. ಇದನ್ನೂ ಓದಿ:‘ರವಿಕೆ’ ಹೆಸರಿನಲ್ಲೊಂದು ಸಾಂಗ್ : ಇದು ರವಿಕೆ ಪ್ರಸಂಗ

ನಿರ್ದೇಶಕ ಸಿಂಪಲ್ ಸುನಿ ಮಾತನಾಡಿ ‘ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ’ ಗೆ ಇಟ್ಟ ಮೊದಲ ಟೈಟಲ್ ‘ಒಂದು ಸರಳ ಪ್ರೇಮಕಥೆ’. ಯಾವುದಾದರೂ ಸಿನಿಮಾಗೆ ಈ ಟೈಟಲ್ ಇಡೋಣ ಎಂದು ಹತ್ತು ವರ್ಷದಿಂದ ಟೈಟಲ್ ರಿನಿವಲ್ ಮಾಡಿಕೊಂಡು ಬಂದಿದ್ದೆ. ಈ ಚಿತ್ರದ ಕಥೆ ಕೇಳಿ ವಿನಯ್ ರಾಜ್ ಕುಮಾರ್ ಓಕೆ ಮಾಡಿದ್ರು, ಚಿತ್ರಕ್ಕೆ  ಎಂ.ಎಲ್. ಪ್ರಸನ್ನ ಅವರು ಕಥೆ ಬರೆದಿದ್ದಾರೆ. ಜನವರಿ 23ರಂದು ಸಿನಿಮಾ ಮುಹೂರ್ತ ಆಗಿತ್ತು, ಬೆಂಗಳೂರು, ಚಿಕ್ಕಪೇಟೆಯಲ್ಲಿ ಮೊದಲ ಹಂತದ ಚಿತ್ರೀಕರಣ, ಮೈಸೂರಿನಲ್ಲಿ ಎರಡನೇ ಹಂತದ ಶೂಟಿಂಗ್ ಮುಗಿದಿದೆ. ಈಗಾಗಲೇ ಶೇಕಡಾ 50ರಷ್ಟು ಚಿತ್ರೀಕರಣ ಮುಗಿದಿದೆ ಎಂದು ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡ್ರು.

 

ಒಂದೊಳ್ಳೆ ತಂಡದ ಜೊತೆ ಕೆಲಸ ಮಾಡುತ್ತಿರುವುದು ತುಂಬಾ ಖುಷಿ ಕೊಟ್ಟಿದೆ. ಕನ್ನಡ ಸಿನಿಮಾದಲ್ಲಿ ನಟಿಸಲು ಅವಕಾಶ ನೀಡಿದ್ದಕ್ಕಾಗಿ ತುಂಬಾ ಧನ್ಯವಾದಗಳು ಎಂದು ಮಲ್ಲಿಕಾ ಸಿಂಗ್ ಮೊದಲ ಕನ್ನಡ ಸಿನಿಮಾ ಬಗ್ಗೆ ಸಂತಸ ಹಂಚಿಕೊಂಡ್ರು.  ಸಾಧುಕೋಕಿಲ, ರಾಜೇಶ್ ನಟರಂಗ, ಅರುಣ ಬಾಲರಾಜ್ ಒಳಗೊಂಡ ಕಲಾವಿದರು ಒಂದು ಸರಳ ಪ್ರೇಮಕಥೆ ಚಿತ್ರದಲ್ಲಿದ್ದು, ಕಾರ್ತಿಕ್ ಛಾಯಾಗ್ರಹಣ, ಆದಿ ಸಂಕಲನ, ವೀರ್ ಸಮರ್ಥ್ ಸಂಗೀತ ನಿರ್ದೇಶನ ಚಿತ್ರಕ್ಕಿದೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್