SVR @ 50 – ಕನ್ನಡ ಚಿತ್ರರಂಗದ ಗಣ್ಯರು ಭಾಗಿ

Public TV
1 Min Read

ರಾಜೇಂದ್ರ ಸಿಂಗ್ ಬಾಬು (Rajendra Singh Babu) ಅವರು ಕನ್ನಡ ಇಂಡಸ್ಟ್ರಿಯಲ್ಲಿ 50 ವರ್ಷ ಪೂರೈಸಿದ ಹಿನ್ನೆಲೆ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿಯ ನೇತೃತ್ವದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. 5 ದಿನಗಳ ಕಾಲ ಚಾಮರಾಜ ಪೇಟೆಯ ಕಲಾವಿದರ ಭವನದಲ್ಲಿ ಸಾಧನೆ..ಸಂಭ್ರಮ..ಚಿತ್ರೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅಕ್ಟೋಬರ್ 23 ರಿಂದ 27ರ ವರೆಗೆ ರಾಜೇಂದ್ರಸಿಂಗ್ ಬಾಬು ಅವರ ಸಿನಿಮಾಗಳ ಪ್ರದರ್ಶನ, ಸಂವಾದ ಸಂಕೀರ್ಣ ಕಾರ್ಯಕ್ರಮಕ್ಕೆ ಇಂದು (ಅ.27) ತೆರೆ ಎಳೆಯಲಾಗಿದೆ.

ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಸ್ಯಾಂಡಲ್ ವುಡ್ ನ ನಟ, ನಟಿಯರು, ನಿರ್ದೇಶಕರು, ನಿರ್ಮಾಪಕರು, ರಾಜೇಂದ್ರ ಸಿಙಗ್ ಬಾಬು ಅವರ ಆಪ್ತರು, ಕುಟುಂಬಸ್ಥರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದ್ದಾರೆ.

ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ನಾದಬ್ರಹ್ಮ ಹಂಸಲೇಖ, ನಟಿ ಸುಹಾಸಿನಿ, ನಿರ್ದೇಶಕ ನಾಗತ್ತಿಹಳ್ಳಿ ಚಂದ್ರಶೇಖರ್, ನಟ ಡಾ.ವಿ.ರವಿಚಂದ್ರನ್, ನಿರ್ದೇಶಕ ಟಿಎನ್ ಸೀತಾರಾಮ್, ಅರ್ಜುನ್ ಸರ್ಜಾ, ಧ್ರುವ ಸರ್ಜಾ ಸೇರಿ ಇಡೀ ಚಿತ್ರರಂಗದ ಗಣ್ಯರು ಸಾಕ್ಷಿಯಾದರು. ಈ ವೇಳೆ ರಾಜೇಂದ್ರ ಸಿಂಗ್ ಬಾಬು ಅವರಿಗೆ ಸನ್ಮಾನಿಸಿ ಗೌರವ ನೀಡಿದ್ದಾರೆ ಗಣ್ಯರು.

Share This Article