ತರುಣ್, ಸೋನಲ್ ಮದುವೆ ಆಮಂತ್ರಣ ಪತ್ರಿಕೆ ಹೇಗಿದೆ ಗೊತ್ತಾ?

Public TV
1 Min Read

ಚಂದನವನದಲ್ಲಿ ಮದುವೆ ಸಂಭ್ರಮ ಮನೆ ಮಾಡಿದೆ. ತರುಣ್ ಸುಧೀರ್ (Tharun Sudhir) ಮತ್ತು ಸೋನಲ್ (Sonal) ಹಸೆಮಣೆ ಏರೋದಕ್ಕೆ ಸಜ್ಜಾಗಿದ್ದಾರೆ. ಕಲರ್‌ಫುಲ್ ಫೋಟೋಶೂಟ್ ಮೂಲಕ ಮದುವೆ ಡೇಟ್ ಅನೌನ್ಸ್ ಮಾಡಿದ ಬೆನ್ನಲ್ಲೇ ಈಗ ಆಮಂತ್ರಣ ಪತ್ರಿಕೆ ಕೂಡ ಸದ್ದು ಮಾಡುತ್ತಿದೆ. ಇದನ್ನೂ ಓದಿ:ನಟನೆ ಚೆನ್ನಾಗಿದೆ ಅಂತಾರೆ ಆದರೆ ಸಿನಿಮಾ ಆಫರ್ ಕೊಡಲ್ಲ: ನೇಹಾ ಧೂಪಿಯಾ ಬೇಸರ

ತರುಣ್ ಮತ್ತು ಸೋನಲ್ ಮಂಥೆರೋ ಮದುವೆ ಕಾರ್ಡ್ ಆಕರ್ಷಕವಾಗಿದೆ. ಮದುವೆ ಪತ್ರಿಕೆ ಮೇಲೆ ಇಬ್ಬರ ರೊಮ್ಯಾಂಟಿಕ್ ಫೋಟೋ ಹಾಕಿಸಿದ್ದು, ಒಳಗೆ ಮದುವೆ ಮುಹೂರ್ತ ಸಮಾರಂಭ ಕುರಿತು ಬರೆಯಲಾಗಿದೆ.

ತರುಣ್ ಸುಧೀರ್ ಮತ್ತು ಸೋನಲ್ ಜೋಡಿ ಇದೇ ಆಗಸ್ಟ್ 10, 11ರಂದು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಆಗಸ್ಟ್ 10ರಂದು ಸಂಜೆ 6:30 ನಂತರ ಆರತಕ್ಷತೆ ಕಾರ್ಯಕ್ರಮ, ಆ.11ರಂದು ಬೆಳಗ್ಗೆ 10:50 ರಿಂದ 11:35ರ ಶುಭ ಮುಹೂರ್ತದಲ್ಲಿ ಮದುವೆ ನಡೆಯಲಿದೆ. ಹಿಂದೂ ಸಂಪ್ರದಾಯದಂತೆ ಮದುವೆ ಜರುಗಲಿದೆ.

ಈ ಎರಡು ದಿನದ ಸಮಾರಂಭವು ಬೆಂಗಳೂರಿನ ಮೈಸೂರು ರಸ್ತೆಯಲ್ಲಿರುವ ಆರ್.ವಿ ಕಾಲೇಜ್ ಬಳಿ ಇರುವ ಪೂರ್ಣಿಮಾ ಪ್ಯಾಲೇಸ್‌ನಲ್ಲಿ ನಡೆಯಲಿದೆ. ಸದ್ಯ ಸ್ಯಾಂಡಲ್‌ವುಡ್ ನಟ, ನಟಿಯರಿಗೆ ಮದುವೆ ಕಾರ್ಡ್ ಕೊಡುವುದರಲ್ಲಿ ತರುಣ್ ಮತ್ತು ಸೋನಲ್ ಬ್ಯುಸಿಯಾಗಿದ್ದಾರೆ.


ಇನ್ನೂ ದರ್ಶನ್ ನಟನೆಯ ರಾಬರ್ಟ್ ಸಿನಿಮಾಗೆ ತರುಣ್ ಸುಧೀರ್ ನಿರ್ದೇಶನ ಮಾಡಿದ್ದರು. ಈ ಸಿನಿಮಾದಲ್ಲಿ ವಿನೋದ್ ಪ್ರಭಾಕರ್‌ಗೆ ಜೋಡಿಯಾಗಿ ಸೋನಲ್ ನಟಿಸಿದ್ದರು. ಈ ಪರಿಚಯವೇ ಈಗ ಮದುವೆಗೆ ಮುನ್ನುಡಿ ಬರೆದಿದೆ.

Share This Article