– ಅನಗತ್ಯ ಇರುವುದನ್ನು ಗಣತಿಯಿಂದ ತಗೆದು ಹಾಕುತ್ತೇವೆ ಎಂದ ಸಿಎಂ
ಗದಗ: ಹಿಂದೂ (Hindu) ಧರ್ಮದ ಜೊತೆ ಕ್ರಿಶ್ಚಿಯನ್ ಸೇರ್ಪಡೆ ಬಗ್ಗೆ ಸಚಿವ ಸಂಪುಟದಲ್ಲಿ (Cabinet Meet) ಚರ್ಚೆ ಆಗಿದೆ. ಅನಗತ್ಯ ಇರುವುದನ್ನು ಗಣತಿಯಿಂದ (Caste Census) ತಗೆದು ಹಾಕುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಗದಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗಣತಿಗೆ 1,45,000 ಶಿಕ್ಷಕರನ್ನು ನೇಮಿಸಲಾಗಿದೆ. 15 ದಿನಗಳ ಕಾಲ ಮನೆ ಮನೆಗೂ ಹೋಗಿ ಸಮೀಕ್ಷೆ ಮಾಡುತ್ತಾರೆ. ಇದು ಜಾತಿ ಗಣತಿ, ಸಮೀಕ್ಷೆ ಅಲ್ಲ. ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮಿಕ್ಷೆ ಮಾಡುತ್ತಾರೆ. ಅವಕಾಶದಿಂದ ವಂಚಿತರಾದವರಿಗೆ ಮೊದಲ ಆದ್ಯತೆಗೆ ಸಮೀಕ್ಷೆ ಮಾಡಲಾಗುತ್ತಿದೆ ಎಂದರು. ಸಮೀಕ್ಷೆ ಮೂಲಕ ಸಮಾಜ ಒಡೆಯುವ ಷಡ್ಯಂತರ ನಡೆಯುತ್ತಿದೆ ಎಂಬ ವಚನಾನಂದ ಶ್ರೀ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಮುಂದೆ ಕೇಂದ್ರ ಸರ್ಕಾರ ಜಾತಿಗಣತಿ ಮಾಡುತ್ತಿದೆ, ಅಲ್ಲಿ ಷಡ್ಯಂತ್ರ ಇದೆಯಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ತರಾತುರಿ ಜಾತಿಗಣತಿ, ಜಾತಿಗಳ ಜೊತೆ ಕ್ರಿಶ್ಚಿಯನ್ ಧರ್ಮ ಸೇರಿಸುವುದು ಬೇಡ: ನಿರ್ಮಲಾನಂದ ಶ್ರೀಗಳ ಎಚ್ಚರಿಕೆ
ಸಮೀಕ್ಷೆಗೆ ಕೆಲವು ಸಚಿವರು, ಶಾಸಕರು ವಿರೋಧ ಕುರಿತು ಮಾತನಾಡಿ, ಸಮಿಕ್ಷೆಗೆ ಸಚಿವರು, ಶಾಸಕರು ಯಾರೂ ವಿರೋಧ ಮಾಡಿಲ್ಲ. ಸಮಾಜದಲ್ಲಿ ಸಮಾನತೆ ತರಬೇಕಿದ್ದರೆ ಅವಕಾಶದಿಂದ ವಂಚಿತರಾದವರಿಗೆ ಅವಕಾಶ ಕೊಡಬೇಕು. ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಪರಿಸ್ಥಿತಿ ತಿಳಿಯಲು ಸಮಿಕ್ಷೆ ಮಾಡಲಾಗುತ್ತಿದೆ. ಹಿಂದುಳಿದ ಆಯೋಗ ಸಮಿಕ್ಷೆ ಮಾಡುತ್ತಿದೆ. ಅದರಲ್ಲಿ ನಾವು ಮಧ್ಯೆ ಪ್ರವೇಶಿಸಲ್ಲ ಎಂದರು. ಇದನ್ನೂ ಓದಿ: ಸಿಎಂ ಆಗೋಕೆ ಹೆಲಿಕಾಪ್ಟರ್ ಖರೀದಿಸಿದ್ದಾರೆ ಅನ್ನೋದು ತಪ್ಪು ಕಲ್ಪನೆ – ಸತೀಶ್ ಜಾರಕಿಹೊಳಿ ಪರ ಬೋಸರಾಜು ಬ್ಯಾಟಿಂಗ್
ಹಿಂದೂ ಜೊತೆ ಕ್ರಿಶ್ಚಿಯನ್ ಪದ ಬಳಕೆ ಬಗ್ಗೆ ಮರು ಪರಿಶೀಲನೆ ಮಾಡಿ ಎಂದು ರಾಜ್ಯಪಾಲರು ಸಿಎಂಗೆ ಪತ್ರ ಬರೆದಿರುವ ಕುರಿತು ಮಾತನಾಡಿ, ಬಿಜೆಪಿಯವರು ಕಳುಹಿಸಿದ ಲೆಟರ್ ರಾಜ್ಯಪಾಲರು ನನಗೆ ಕಳುಹಿಸಿದ್ದಾರೆ. ಬಿಜೆಪಿ ಅವರ ಲೆಟರ್ ಫಾರ್ವಡ್ ಮಾಡಿದ್ದಾರೆ ಅಷ್ಟೇ. ಬಿಜೆಪಿಯವರು ರಾಜಕಿಯಕ್ಕಾಗಿ ಮಾಡುತ್ತಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಪ್ರಧಾನಿಗೆ ತಾನು ಬಿಡಿಸಿದ ಚಿತ್ರ ಕೊಟ್ಟು ಭಾವುಕನಾದ ಬಾಲಕ – ವೇದಿಕೆಯಿಂದಲೇ ಸಮಾಧಾನ ಮಾಡಿದ ಮೋದಿ
ಇನ್ನು ಕುರುಬರನ್ನು ಎಸ್ಟಿಗೆ ಸೇರಿಸುವ ವಿಚಾರದ ಕುರಿತು ಮಾತನಾಡಿ, ಬಿಜೆಪಿಯವರಿದ್ದಾಗ ಕುರುಬರನ್ನು ಎಸ್ಟಿಗೆ ಸೇರಿಸಬೇಕೆಂದು ಮಾಡಿದ್ದರು. ಈಶ್ವರಪ್ಪ, ಕಾಗಿನೇಲೆ ಸ್ವಾಮಿಜಿಗಳು ಈ ಬಗ್ಗೆ ಶಿಫಾರಸು ಕೇಂದ್ರಕ್ಕೆ ಕಳುಹಿಸಿದ್ದರು. ಈ ಬಗ್ಗೆ ಅವರೇ ಉತ್ತರಿಸಬೇಕು. ಇನ್ನು ಎಸ್.ಸಿ, ಎಸ್‌ಟಿ ಪಟ್ಟಿಗೆ ಸೇರಿಸುವುದು ಕೇಂದ್ರದ ಕೆಲಸವಾಗಿದೆ. ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿ ಸತ್ಯ ಹೇಳಿದ್ದಾರೆ. 6 ಸಾವಿರ ಮತಗಳನ್ನು ಕೈಬಿಡಲಾಗಿದೆ. ಆಳಂದ ಮತಗಳ್ಳತನ ಬಗ್ಗೆ ಎಸ್‌ಐಟಿ ತನಿಖೆ ನಡೆಯುತ್ತಿದೆ ಎಂದರು. ಬೆಳೆ ಹಾನಿ ಬಗ್ಗೆ ಸರ್ವೆ ನಡೆಸಿ ಪರಿಹಾರ ಕೊಡುತ್ತೇವೆ. ಮಳೆ ಈ ಬಾರಿ ಜಾಸ್ತಿ ಆಗಿದೆ ಎಂದು ತಿಳಿಸಿದರು. ಇದನ್ನೂ ಓದಿ: 60 ದಿನ ಜಾತಿಗಣತಿ ಮುಂದೂಡಿ, 15 ದಿನ ಕಾಲಮಿತಿ ಹೆಚ್ಚಿಸಿ – ಒಕ್ಕಲಿಗ ಸಭೆಯಲ್ಲಿ ನಿರ್ಣಯ
ಇನ್ನು ಬೆಂಗಳೂರು ರಸ್ತೆ ಗುಂಡಿಗಳ ಬಗ್ಗೆ ಮಾತನಾಡಿ, ಕಳೆದ ವರ್ಷ ಹಾಗೂ ಈ ವರ್ಷ ಸಾಕಷ್ಟು ಮಳೆ ಆಗಿರುವುದರಿಂದ ರಸ್ತೆಗಳು ಕೆಟ್ಟು ಹೋಗಿದೆ. ಈ ಬಗ್ಗೆ ಮೀಟಿಂಗ್ ಮಾಡಿ, ರಸ್ತೆ ದುರಸ್ಥಿ ಮಾಡುತ್ತೇವೆ. ಬಿಜೆಪಿಯವರಿರುವಾಗ ಒಂದು ದಿನ ಗುಂಡಿ ಮುಚ್ಚಲಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ತಿಮರೋಡಿ ಬಳಿಗೆ ನಮ್ಮನ್ನ ಕರೆದುಕೊಂಡು ಹೋಗಿದ್ದೇ ಸೌಜನ್ಯ ಮಾವ: ಚಿನ್ನಯ್ಯನ 2ನೇ ಪತ್ನಿ ಬಾಂಬ್