ಮಾಜಿ ಶಾಸಕ ವಾಸುರನ್ನ ಕಾಂಗ್ರೆಸ್‌ ಪಕ್ಷದಿಂದ ವಜಾಗೊಳಿಸಿ – ಸಿಎಂ ಬೆಂಬಲಿಗರಿಂದ ಬಹಿರಂಗ ಪತ್ರ

Public TV
2 Min Read

ಮೈಸೂರು: ಚಾಮರಾಜ ಕ್ಷೇತ್ರದ ಮಾಜಿ ಶಾಸಕ ವಾಸು (Vasu) ಅವರನ್ನ ಕಾಂಗ್ರೆಸ್‌ ಪಕ್ಷದಿಂದ ವಜಾಗೊಳಿಸುವಂತೆ ಸಿಎಂ ಸಿದ್ದರಾಮಯ್ಯ (Siddaramaiah) ಅವರ ಬೆಂಬಲಿಗರಿಂದ ಆಗ್ರಹ ಕೇಳಿಬಂದಿದೆ.

ಡಿ.ಕೆ ಶಿವಕುಮಾರ್ (DK Shivakumar) ಸಿಎಂ ಆಗಲಿ ಎಂದು ಬಹಿರಂಗ ಹೇಳಿಕೆ ಕೊಟ್ಟಿದ್ದ ಮಾಜಿ ಶಾಸಕ ವಾಸುಗೆ ಚಾಮರಾಜ ಕ್ಷೇತ್ರದ ಟಿಕೆಟ್ ಕೈ ತಪ್ಪಿಸಿ ತಮ್ಮ ಬೆಂಬಲಿಗನಿಗೆ ಕೊಡಿಸುವಲ್ಲಿ ಸಿದ್ದರಾಮಯ್ಯ ಯಶಸ್ವಿಯಾಗಿದ್ದರು. ಇದೀಗ ವಾಸು ಅವರನ್ನ ಪಕ್ಷದಿಂದ ವಜಾ ಮಾಡುವಂತೆ ಸಿದ್ದರಾಮಯ್ಯ ಬೆಂಬಲಿಗ ಮೈಸೂರು ನಗರ ಕಾಂಗ್ರೆಸ್ (Congress) ಅಧ್ಯಕ್ಷ ಆರ್. ಮೂರ್ತಿಗೆ ಪತ್ರ ಬರೆದಿದ್ದಾರೆ. ನಗರ ಪಾಲಿಕೆ ಮಾಜಿ ಸದಸ್ಯ ಆರ್. ಸುನಂದಕುಮಾರ್ ಪತ್ರ ಬರೆದಿದ್ದು ವಾಸು ಅವರನ್ನ ಪಕ್ಷದಿಂದ ವಜಾ ಮಾಡುವಂತೆ ಒತ್ತಾಯಿಸಿದ್ದಾರೆ.

ಪತ್ರದಲ್ಲಿ ಏನಿದೆ?
ವಿಧಾನಸಭಾ ಚುನಾವಣೆಯಲ್ಲಿ (Karnataka Assembly Election) ವಾಸು ಪಕ್ಷ ವಿರೋಧಿ ಕೆಲಸ ಮಾಡಿದ್ದಾರೆ. ಕಾಂಗ್ರೆಸ್‌ನಲ್ಲಿ ಇದ್ದುಕೊಂಡೇ ಬಿಜೆಪಿ ಪರವಾಗಿ ಮತಯಾಚನೆ ಮಾಡಿದ್ದಾರೆ. ಕುರುಬರು ಹಾಗೂ ದಲಿತರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ತಮ್ಮ ಬೆಂಬಲಿಗರಿಗೆ ಹಣ ಕೊಟ್ಟು ಬಿಜೆಪಿ ಪರ ಕೆಲಸ ಮಾಡಿಸಿದ್ದಾರೆ. ಬಿಜೆಪಿಯಲ್ಲಿ (BJP) ತಮ್ಮ ಮಗ ಸ್ಪರ್ಧಿಸಿದ್ದ ಕಾರಣ ಅವರ ಪರ ಕೆಲಸ ಮಾಡಿದ್ದಾರೆ. ಚಾಮರಾಜ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಕೆಲಸ ಮಾಡಿದ್ದು ಸಿದ್ದರಾಮಯ್ಯ ವಿರುದ್ಧವೂ ವಾಸು ಕೆಲಸ ಮಾಡಿದ್ದಾರೆ. ಹೀಗಾಗಿ ಅವರನ್ನ ಪಕ್ಷದಿಂದ ವಜಾ ಮಾಡುವಂತೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಮೋದಿ ಕಟ್ಟಿಹಾಕಲು ಮಹಾಘಟಬಂಧನ್ – ಇಂದು ಬೆಂಗ್ಳೂರಲ್ಲಿ ವಿಪಕ್ಷಗಳ ಶಕ್ತಿಪ್ರದರ್ಶನ!

ಸಿದ್ದು ವಿರುದ್ಧ ಕಿಡಿ ಕಾರಿದ್ದ ವಾಸು:
ಈ ಬಾರಿ ಕರ್ನಾಟಕ ವಿಧಾನಸಭಾ ಚುನಾವಣೆ ವೇಳೆ ಟಿಕೆಟ್‌ ಕೈತಪ್ಪಿದ ನಂತರ ಸುದ್ದುಗೋಷ್ಠಿ ನಡೆಸಿದ್ದ ಮಾಜಿ ಶಾಸಕ ವಾಸು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದನ್ನೂ ಓದಿ: 2018ರಲ್ಲಿ ಕಾಂಗ್ರೆಸ್ ಸೋಲು ಕಾಣಲು ಜಾತಿ ರಾಜಕಾರಣವೇ ಕಾರಣ: ಸಿದ್ದು ವಿರುದ್ಧ ವಾಸು ಕಿಡಿ

ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಹುಲಿ ಬಾಯಿಗೆ ಸಿಕ್ಕ ಮಗುವಿನಂತಾಗಿದೆ. ಐದು ವರ್ಷಗಳ ಆಡಳಿತದ ನಂತರ 2018ರಲ್ಲಿ ಕಾಂಗ್ರೆಸ್ ಸೋಲು ಕಾಣಲು ಸಿದ್ದರಾಮಯ್ಯ ಅವರ ಜಾತಿ ರಾಜಕಾರಣವೇ ಕಾರಣ. ನಾನು ಸಿದ್ದರಾಮಯ್ಯ ಅವರ ಜಾತಿ ರಾಜಕಾರಣ ವಿರೋಧಿಸಿದ್ದೆ. 2018ರ ಚುನಾವಣೆಯಲ್ಲಿ ನನ್ನನ್ನು ಸೋಲಿಸಿದ್ದು ಸಿದ್ದರಾಮಯ್ಯನವರೇ. ಸಿದ್ದರಾಮಯ್ಯ ಕಡೆಯವರು ನನ್ನ ವಿರುದ್ಧ ಕೆಲಸ ಮಾಡಿದ್ದರು. ಆಗ ಕ್ಷೇತ್ರದಲ್ಲಿ ಸತ್ಯ ಮಾತಾಡಿದ್ದ ಶಾಹಿದ್‍ನನ್ನು ತೆಗೆದು ಹಾಕಿದ್ದರು. ಅಲ್ಲದೇ ಸಿದ್ದರಾಮಯ್ಯ ಅವರ ಹಗೆತನಕ್ಕೆ ಅನೇಕರು ಬಲಿಯಾಗಿದ್ದಾರೆ ಎಂದೂ ದೂರಿದ್ದರು.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್