ಗೋವಾದಲ್ಲೂ ಆಪರೇಷನ್ ಕಮಲ ಸದ್ದು – ಇಬ್ಬರು ಕಾಂಗ್ರೆಸ್ ಶಾಸಕರ ಅನರ್ಹತೆ ಕೋರಿ ಸ್ಪೀಕರ್‌ಗೆ ಮನವಿ

Public TV
2 Min Read

ಪಣಜಿ: ಮಹಾರಾಷ್ಟ್ರದ ಬಳಿಕ ಇದೀಗ ಗೋವಾದಲ್ಲಿ ರಾಜಕೀಯ ಬಿಕ್ಕಟ್ಟು ಉಲ್ಬಣಗೊಳ್ಳುತ್ತಿದೆ. ಆಪರೇಷನ್ ಕಮಲದ ಭೀತಿಯ ಹಿನ್ನೆಲೆಯಲ್ಲಿ ಉಪ ಸಭಾಪತಿ ಹುದ್ದೆ ಚುನಾವಣೆಯ ಅಧಿಸೂಚನೆಯನ್ನೂ ರದ್ದುಗೊಳಿಸಲಾಗಿದೆ.

40 ಸದಸ್ಯರ ಸದನದಲ್ಲಿ ಕಾಂಗ್ರೆಸ್‌ನ 11, ಬಿಜೆಪಿ 20, ಎಂಜಿಪಿ 2 ಹಾಗೂ ಮೂವರು ಪಕ್ಷೇತರ ಶಾಸಕರು ಇದ್ದಾರೆ. ಕಾಂಗ್ರೆಸ್‌ನ ಹಲವು ಶಾಸಕರನ್ನು ಬಿಜೆಪಿ ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಮುಂದಾಗಿದ್ದು, ಇದು ಮುಂದಿನ ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸುಗಮ ದಾರಿ ಮಾಡಿಕೊಡುತ್ತದೆ ಎಂಬುದು ಬಿಜೆಪಿಯ ಗೇಮ್‌ಪ್ಲಾನ್ ಎಂದು ಹೇಳಲಾಗಿದೆ. ಇದನ್ನೂ ಓದಿ: ಕೆಆರ್‌ಎಸ್‌ನಿಂದ 50 ಸಾವಿರ ಕ್ಯೂಸೆಕ್‌ ನೀರು ಹೊರಕ್ಕೆ – ರಂಗನತಿಟ್ಟು ಪಕ್ಷಿಧಾಮದ ನಡುಗಡ್ಡೆಗಳು ಮುಳಗಡೆ

ಇದೀಗ 11 ಶಾಸಕರ ಬಲ ಹೊಂದಿರುವ ಕಾಂಗ್ರೆಸ್ ಪಕ್ಷದಿಂದ ದಿಂಗಬರ್ ಕಾಮತ್ ಹಾಗೂ ಮೈಕೆಲ್ ಲೋಬೋ ಅವರನ್ನು ಪಕ್ಷಾಂತರ ವಿರೋಧಿ ಕಾಯ್ದೆ ಅಡಿಯಲ್ಲಿ ಅನರ್ಹಗೊಳಿಸಬೇಕು ಅಂದುಕೊಂಡಿದೆ. ವಿಧಾನಸಭೆಯ ಸಭಾಪತಿಗೂ ಮನವಿ ಸಲ್ಲಿಸಿದೆ.

ಕಾಂಗ್ರೆಸ್‌ನ ರಾಜ್ಯ ಉಸ್ತುವಾರಿ ದಿನೇಶ್ ಗುಂಡೂರಾವ್ ಹಾಗೂ ಲೋಬೋ ಅವರು ಆಡಳಿತಾರೂಢ ಬಿಜೆಪಿಯೊಂದಿಗೆ ಹೊಂದಾಣಿಕೆಯಿಂದ ಇದ್ದು, ಪಕ್ಷವನ್ನು ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಪೊಲೀಸರೆಷ್ಟು ದಿನ ಕೆಲಸ ಮಾಡ್ತಾರೆ, ನೀವೇ ಅಂಗಡಿಗಳಲ್ಲಿ ಪಿಸ್ತೂಲ್ ಇಟ್ಟುಕೊಳ್ಳಿ – ವಿಕ್ರಮ್ ಸೈನಿ ವಿವಾದತ್ಮಕ ಹೇಳಿಕೆ

ಕಾಂಗ್ರೆಸ್ ಈ ಹಿಂದೆ ಮೈಕೆಲ್ ಲೋಬೋ ಅವರನ್ನು ವಿರೋಧ ಪಕ್ಷದ ನಾಯಕ ಸ್ಥಾನದಿಂದ ತೆಗೆದುಹಾಕಿತು. ಅದರು ನಿನ್ನೆಯಷ್ಟೇ ತಾನು ಬಿಜೆಪಿಗೆ ಸೇರ್ಪಡೆಯಾಗುವುದಿಲ್ಲ. ಈ ರಾಜಕೀಯ ಬಿಕ್ಕಟ್ಟಿಗೂ ತನಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟನೆ ನೀಡಿದ್ದರು. ಆದಾಗ್ಯೂ ಸ್ಪಷ್ಟನೆ ಕಡೆಗಣಿಸಿದ ಕಾಂಗ್ರೆಸ್ ಉಸ್ತುವಾರಿ ರಾವ್, ಇಬ್ಬರೂ ಪಕ್ಷಾಂತರಕ್ಕೆ ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ಇಬ್ಬರ ವಿರುದ್ಧ ಅನೇಕ ಪ್ರಕರಣಗಳು ಇರುವುದರಿಂದ ತಮ್ಮನ್ನು ರಕ್ಷಿಸಿಕೊಳ್ಳಲು ಪಕ್ಷಾಂತರ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಈಗಾಗಲೇ ಶಾಸಕ ದಿಗಂಬರ್ ಕಾಮತ್ ಅವರ ನೇತೃತ್ವದಲ್ಲಿ ಗೋವಾದ ಕಾಂಗ್ರೆಸ್ ಶಾಸಕರು ಬಂಡಾಯ ಏಳುವ ಅಂಚಿನಲ್ಲಿದ್ದು, ಕನಿಷ್ಠ 6 ರಿಂದ 10 ಮಂದಿ ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *