5,8,9,11ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಗ್ರೀನ್ ಸಿಗ್ನಲ್

Public TV
1 Min Read

ಬೆಂಗಳೂರು: ಏಕಸದಸ್ಯ ಪೀಠದ ಆದೇಶವನ್ನು ಹೈಕೋರ್ಟ್‌ನ (High Court) ದ್ವಿಸದ್ಯ ಪೀಠ ರದ್ದುಗೊಳಿಸಿದ್ದು 5,8,9, 11ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಗ್ರೀನ್ ಸಿಗ್ನಲ್ ನೀಡಿದೆ.

ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ (Karnataka Government) ಮೇಲ್ಮನವಿ ಸಲ್ಲಿಸಿತ್ತು. ಸುದೀರ್ಘ ವಿಚಾರಣೆ ನಡೆಸಿ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್ ವಿಭಾಗೀಯ ಪೀಠ ಅಸ್ತು ಎಂದಿದೆ.

ಉಳಿದ ವಿಷಯಗಳ ಪರೀಕ್ಷೆ ನಡೆಸಲು ತುರ್ತು ಹಾಗೂ ಸೂಕ್ತ ಕ್ರಮ ತೆಗೆದುಕೊಳ್ಳಲು ಸರ್ಕಾರಕ್ಕೆ ನ್ಯಾ.ಸೋಮಶೇಖರ್ ಹಾಗೂ ನ್ಯಾ.ರಾಜೇಶ್ ರೈ ಅವರಿದ್ದ ಪೀಠ ಸೂಚನೆ  ನೀಡಿದೆ.

ಮಾರ್ಚ್ 11ರಿಂದ ಮಾರ್ಚ್ 18ರವರೆಗೆ ಪರೀಕ್ಷೆ ನಿಗದಿಯಾಗಿತ್ತು. ಮಾರ್ಚ್ 11 ಮತ್ತು 12 ಎರಡು ದಿನ ಎರಡು ವಿಷಯಗಳ ಪರೀಕ್ಷೆ ನಡೆದ ಬಳಿಕ ಪರೀಕ್ಷೆಗೆ ತಡೆ ನೀಡಲಾಗಿದೆ. 5ನೇ ತರಗತಿಗೆ ಎರಡು ವಿಷಯಗಳ ಪರೀಕ್ಷೆ ಮಾತ್ರ ಬಾಕಿ ಉಳಿದಿದೆ. 8 ಮತ್ತು 9ನೇ ತರಗತಿಗಳಿಗೆ ಇನ್ನೂ 4 ವಿಷಯಗಳ ಪರೀಕ್ಷೆ ಬಾಕಿ ಇದೆ.

Share This Article