ಕೆಜೆ ಹಳ್ಳಿ, ಡಿಜಿ ಹಳ್ಳಿ ಪ್ರಕರಣದಲ್ಲೂ ಅಫ್ಸರ್ ಪಾಷಾ ಪಾತ್ರ – ಶೋಭಾ ಕರಂದ್ಲಾಜೆ ಆರೋಪ

Public TV
1 Min Read

ಬೆಂಗಳೂರು: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್‌ನ ಮಾಸ್ಟರ್ ಮೈಂಡ್ ಅಫ್ಸರ್ ಪಾಷಾ ಕೆಜೆ ಹಳ್ಳಿ (KJ Halli) ಹಾಗೂ ಡಿಜಿ (DG Halli) ಹಳ್ಳಿ ಗಲಭೆ ಪ್ರಕರಣದಲ್ಲೂ ಭಾಗಿಯಾಗಿದ್ದಾನೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಆರೋಪಿಸಿದ್ದಾರೆ.

ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರು ಸ್ಫೋಟದ ಬಗ್ಗೆ ಕಾಂಗ್ರೆಸ್ ನಾಯಕರು ಭಯೋತ್ಪಾದನಾ ಕೃತ್ಯವಲ್ಲ ಎಂದು ವಾದಿಸಿದ್ದರು. ಆದರೆ ಈಗ ಸತ್ಯಗಳು ಹೊರಗೆ ಬರುತ್ತಿವೆ. ಆದರೆ ಕಾಂಗ್ರೆಸ್ ಓಲೈಕೆ ರಾಜಕಾರಣ ಮಾಡುತ್ತಿದೆ ಎಂದಿದ್ದಾರೆ. ಇದನ್ನೂ ಓದಿ: ಉಗ್ರ ಅಫ್ಸರ್ ಪಾಷಾ ಮಂಗಳೂರು ಸ್ಫೋಟದ ಮಾಸ್ಟರ್ ಮೈಂಡ್ – ಶಾರೀಕ್‌ಗೆ ಜೈಲಿನಲ್ಲೇ ತರಬೇತಿ

ಬೆಳಗಾವಿಯ ಜೈಲಿನಲ್ಲಿದ್ದ ಅಫ್ಸರ್ ಪಾಷಾ ಪ್ರಕರಣದ ಮಾಸ್ಟರ್ ಮೈಂಡ್ ಎಂದು ತಿಳಿದು ಬಂದಿದೆ. ಅಲ್ಲದೇ ಮಹಾರಾಷ್ಟ್ರ ಎಟಿಎಸ್ ಇಬ್ಬರು ಶಂಕಿತ ಉಗ್ರರನ್ನು ಬಂಧಿಸಿದೆ. ಇವರಿಂದಲೇ ಕೇಂದ್ರ ಸಚಿವರಿಗೆ ಬೆದರಿಕೆ ಸಹ ಬಂದಿತ್ತು. ಈ ಪ್ರಕರಣದ ಆರೋಪಿ ಜಯೇಶ್ ಪೂಜಾರಿ ಶಾಹೀರ್ ಆಗಿ ಮತಾಂತರವಾಗಿದ್ದಾನೆ ಎಂದು ಅವರು ಆರೋಪಿಸಿದ್ದಾರೆ.

ಅಫ್ಸರ್ ಪಾಷಾ ಜಮಾತ್‍ನಿಂದ ಬಂದ ಹಣವನ್ನು ಭಯೋತ್ಪಾದನಾ ಚಟುವಟಿಕೆಗೆ ಬಳಸುತ್ತಿದ್ದ. ಜೈಲಿನಲ್ಲಿ ಕರ್ನಾಟಕದ ಯುವಕರ ಮೈಂಡ್ ವಾಷ್ ಮಾಡುತ್ತಿರುವುದು ಸಹ ಬಯಲಾಗಿದೆ. ಜೈಲಿನಲ್ಲಿದ್ದುಕೊಂಡೇ ಭಯೋತ್ಪಾದಕ ಕೃತ್ಯಗಳು ನಡೆಸಲಾಗುತ್ತಿದೆ. ಕರ್ನಾಟಕ ಉಗ್ರರ ಅಡಗು ತಾಣವಾಗುತ್ತಿದೆ. ಈ ಮೂಲಕ ಮತ್ತೊಂದು ಕೇರಳವಾಗಿ ಮಾರ್ಪಾಡಾಗುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಕರ್ನಾಟಕದಲ್ಲಿ ನಾವು ಯಾರು ಸುರಕ್ಷಿತವಾಗಿಲ್ಲ. ಕಾಂಗ್ರೆಸ್ ನಾಯಕರು ಭಯೋತ್ಪಾದಕರನ್ನು ರಕ್ಷಣೆ ಮಾಡುತ್ತಿದ್ದಾರೆ. ಕೆಜೆ ಹಳ್ಳಿ ಹಾಗೂ ಡಿಜಿ ಹಳ್ಳಿ ಪ್ರಕರಣವನ್ನು ಎನ್‍ಐಎ ತನಿಖೆಗೆ ವಹಿಸುವಂತೆ ಅವರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಆಗಸ್ಟ್ 1ರಿಂದ ಎಕ್ಸ್‌ಪ್ರೆಸ್ ಹೈವೇಯಲ್ಲಿ ದ್ವಿಚಕ್ರ, ತ್ರಿಚಕ್ರ ವಾಹನಗಳ ನಿಷೇಧ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್