ಡಿಕೆ ಬ್ರದರ್ಸ್ ಹೆಸ್ರಲ್ಲಿ ವಂಚನೆ ಕೇಸ್; ಸಿನಿಮಾ ನಿರ್ಮಾಣಕ್ಕೆ ಪ್ಲ್ಯಾನ್ ಮಾಡಿದ್ದ `ಬಂಗಾರಿ’ ಗೌಡ!

Public TV
1 Min Read

ಬೆಂಗಳೂರು: ಡಿಕೆ ಬ್ರದರ್ಸ್ ಹೆಸರಿನಲ್ಲಿ ಕೋಟಿ ಕೋಟಿ ರೂ. ವಂಚನೆ ಮಾಡಿದ ಐಶ್ವರ್ಯ ಗೌಡ (Aishwarya Gowda) ಪ್ರಕರಣ ಸಂಬಂಧ ಮತ್ತೊಂದು ಸ್ಫೋಟಕ ಮಾಹಿತಿ ಹೊರಬಿದ್ದಿದೆ.

ಡಿ.ಕೆ.ಸುರೇಶ್ (D K Suresh) ಹಾಗೂ ಡಿ.ಕೆ.ಶಿವಕುಮಾರ್ (D K Shivakumar) ಅವರು ನನ್ನ ಅಣ್ಣಂದಿರು, ನಾನು ಅವರ ತಂಗಿ ಅಂತಾ ಹೇಳಿಕೊಂಡು ವಂಚನೆ ಮಾಡಿರುವ ಐಶ್ವರ್ಯ ಗೌಡ ಪ್ರಕರಣ ಫಿಲ್ಮ್ ಚೇಂಬರ್ ಮೆಟ್ಟಿಲೇರಿದೆ. ತನಿಖೆ ವೇಳೆ ಬಂಗಾರಿ ಗೌಡ ಸಿನಿಮಾ ನಿರ್ಮಾಣ ಮಾಡೋದಕ್ಕೆ ತಯಾರಿ ನಡೆಸಿದ್ದಳು ಅನ್ನೋ ಮಾಹಿತಿ ಹೊರಬಿದ್ದಿದೆ. ಇದನ್ನೂ ಓದಿ: ಕಳ್ಳ ಸಂಬಂಧ ಆರೋಪ – ಯುವಕನನ್ನ ಥಳಿಸಿ ಚಿಕ್ಕಮ್ಮನೊಂದಿಗೆ ಮದುವೆ ಮಾಡಿಸಿದ ಗ್ಯಾಂಗ್‌

ಐಶ್ವರ್ಯ ಗೌಡ, ಎಸ್‌ಎಲ್‌ವಿ ಪ್ರೊಡಕ್ಷನ್ಸ್ ಅನ್ನೋ ಸಂಸ್ಥೆಯನ್ನ ನೊಂದಾಯಿಸಿ ಆ ಮೂಲಕ ಸಿನಿಮಾ ನಿರ್ಮಾಣ ಮಾಡಲು ಪ್ಲ್ಯಾನ್ ಮಾಡಿದ್ದಳು ಎಂಬ ವಿಚಾರ ಬಯಲಾಗಿದೆ. ಈ ಬಗ್ಗೆ ಸ್ಪಷ್ಟನೆ ನೀಡಲು ಫಿಲ್ಮ್ ಚೇಂಬರ್‌ಗೆ (Film Chamber) ಸಿಐಡಿ ಡಿವೈಎಸ್‌ಪಿ ಅಂಜುಮಾಲ ನಾಯಕ ಪತ್ರ ಬರೆದಿದ್ದಾರೆ. ಇದನ್ನೂ ಓದಿ: ರೇಣುಕಾಸ್ವಾಮಿ ಮಾದರಿಯಲ್ಲಿ ಭಯಾನಕ ಹಲ್ಲೆ ಪ್ರಕರಣಕ್ಕೆ ಟ್ವಿಸ್ಟ್‌ – ಪ್ರಮುಖ ಆರೋಪಿ ಅರೆಸ್ಟ್‌

ಇನ್ನು ಈ ವಿಚಾರವಾಗಿ ವಾಣಿಜ್ಯ ಮಂಡಳಿಯಿಂದಲೂ ಪ್ರತಿಕ್ರಿಯೆ ಸಿಕ್ಕಿದ್ದು, ಈ ಹೆಸರಿನಲ್ಲಿ ಯಾವ ಪ್ರೊಡಕ್ಷನ್ ರಿಜಿಸ್ಟರ್ ಆಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

Share This Article