ಡಿಕೆಶಿ ಹುಟ್ಟುಹಬ್ಬ – ಆಫ್ರಿಕನ್ ಸಿಂಹ ದತ್ತು ಪಡೆದ ರಾಜ್ಯ ಯುವ ಕಾಂಗ್ರೆಸ್

Public TV
1 Min Read

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಅವರ ಜನ್ಮದಿನದ ಪ್ರಯುಕ್ತ ಯುವ ಕಾಂಗ್ರೆಸ್ ವತಿಯಿಂದ ಮೈಸೂರು ಮೃಗಾಲಯದಲ್ಲಿ ಆಫ್ರಿಕನ್ ಸಿಂಹವನ್ನು ದತ್ತು ಪಡೆಯಲಾಗಿದೆ.

ಮಂಜುನಾಥ್ ಗೌಡ ಅವರ ನೇತೃತ್ವದ ಪ್ರದೇಶ ಯುವ ಕಾಂಗ್ರೆಸ್ ಒಂದು ವರ್ಷಕ್ಕೆ ದತ್ತು ಪಡೆದಿದ್ದು, ಪ್ರತಿ ವರ್ಷ ದತ್ತು ನವೀಕರಣಕ್ಕೆ ನಿರ್ಧರಿಸಿದೆ. ವರ್ಷಕ್ಕೆ ದತ್ತು ಪಡೆಯಲು ಯುವ ಕಾಂಗ್ರೆಸ್ ವತಿಯಿಂದ ಮೈಸೂರು ಮೃಗಾಲಯಕ್ಕೆ 2 ಲಕ್ಷ ರೂ. ನೀಡಲಾಗಿದೆ. ಇದನ್ನೂ ಓದಿ: ರಾಜ್ಯದ ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವ ಧನ 2,000 ರೂ. ಹೆಚ್ಚಳ

ಡಿಕೆ ಶಿವಕುಮಾರ್ ಹುಟ್ಟುಹಬ್ಬ ಹಿನ್ನೆಲೆ ಇಂದು ಕೆಪಿಸಿಸಿ ಕಚೇರಿಯಲ್ಲಿ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಚೆಸ್ ಕಪ್, ರಕ್ತದಾನ ಶಿಬಿರ, ವಿವಿಧ ದೇವಸ್ಥಾನಗಳಲ್ಲಿ ಡಿಕೆಶಿ ಹೆಸರಿನಲ್ಲಿ ಪೂಜೆ- ಅರ್ಚನೆ, ಅಂಧ ಮಕ್ಕಳಿಗೆ ನೆರವು ನೀಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಇದನ್ನೂ ಓದಿ: ಮೊದಲು ಕರ್ನಲ್ ಸೋಫಿಯಾ ಬಳಿ ಹೋಗಿ ಕ್ಷಮೆ ಕೇಳಿ: ವಿಜಯ್ ಶಾಗೆ ಸುಪ್ರೀಂ ಚಾಟಿ

ತಮ್ಮ 63ನೇ ವರ್ಷದ ಹುಟ್ಟುಹಬ್ಬವನ್ನು ಡಿಕೆ ಶಿವಕುಮಾರ್ ಅಭಿಮಾನಿಗಳೊಂದಿಗೆ ಆಚರಿಸಿಕೊಳ್ಳದೇ ಕಬಿನಿಯಲ್ಲಿ ಕಾಲ ಕಳೆಯುವ ಮೂಲಕ ವಿಶೇಷವಾಗಿ ಆಚರಿಸಿಕೊಂಡಿದ್ದಾರೆ. ಇದನ್ನೂ ಓದಿ: Wayanad | ರೆಸಾರ್ಟ್‌ನಲ್ಲಿ ತಾತ್ಕಾಲಿಕ ಟೆಂಟ್ ಕುಸಿದು ಟೂರಿಸ್ಟ್ ಯುವತಿ ಸಾವು

Share This Article