ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಪ್ರಕರಣ – ಮಕ್ಕಳ ಸಾವು ನೆನೆದು ಕಣ್ಣೀರಿಟ್ಟ ಡಿಕೆಶಿ

Public TV
3 Min Read

– ನನ್ನ ಹೊಟ್ಟೆ ಉರಿಯುತ್ತಿದೆ ಎಂದು ಗದ್ಗದಿತರಾದ ಡಿಸಿಎಂ

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತದಿಂದ (Stampede) ಉಂಟಾದ ಸಾವು-ನೋವು ನೆನೆದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ (DK Shivakumar) ಕಣ್ಣೀರಿಟ್ಟಿದ್ದಾರೆ. ಮಕ್ಕಳ ಸಾವು ನೆನೆದು ಗದ್ಗದಿತರಾಗಿದ್ದಾರೆ.

ಬೆಂಗಳೂರಿನಲ್ಲಿ (Bengaluru) ಮಾಧ್ಯಮಗಳೊಂದಿಗೆ ಈ ಕುರಿತು ಮಾತನಾಡಿದ ಅವರು, ನನಗೆ ಹೊಟ್ಟೆ ಉರಿಯುತ್ತಿದೆ, ಆ ಮಕ್ಕಳ ತಾಯಿ ಮಾತನಾಡೋದನ್ನ ಸಹಿಸೋಕೆ ಆಗ್ತಾ ಇಲ್ಲ ಅಂತ ಕಣ್ಣೀರು ಹಾಕಿದ್ರು. ಇದನ್ನೂ ಓದಿ: Stampede Case | ಕಾಲ್ತುಳಿತ ಬಗ್ಗೆ ʻಪಬ್ಲಿಕ್‌ ಟಿವಿʼ ಪ್ರಶ್ನೆಗೆ ಉತ್ತರ ನೀಡದೇ ನುಣುಚಿದ KSCA

ಇದನ್ನ ಯಾವ ಫ್ಯಾಮಿಲಿ ಕೂಡ ತಡೆದುಕೊಳ್ಳಲ್ಲ. ಪೊಲೀಸ್ ಇಲಾಖೆ (Police Department) ಕೂಡಲೇ ಹೇಳ್ತು ಇದನ್ನ ತಡೆಯಿರಿ ಅಂತ. ನಾನೂ ಕೂಡಲೇ ಮ್ಯಾನೇಜ್ಮೆಂಟ್‌ಗೆ ಹೇಳಿದೆ, ಅವರು ಹೋಗೋದಕ್ಕೂ ಕೂಡ ಜಾಗ ಇರಲಿಲ್ಲ. ಕೂಡಲೇ ಅವರನ್ನ ನಾನು ಕಾರ್‌ನಲ್ಲಿ ಕೂರಿಸಿಕೊಂಡು ಹೋದೆ, ಮಾಧ್ಯದವರು ಹೇಳಿದ ಬಳಿಕವೇ ನಮಗೆ ಗೊತ್ತಾಯ್ತು ಎಂದು ತಿಳಿಸಿದ್ರು. ಇದನ್ನೂ ಓದಿ: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಕೇಸ್‌ – ಪೊಲೀಸರನ್ನ ಸಂಪರ್ಕಿಸದೇ ವಿಕ್ಟರಿ ಪೆರೇಡ್‌ ಘೋಷಿಸಿದ್ದ RCB ಫ್ರಾಂಚೈಸಿ

ಯಾರು ಏನೇ ಹೇಳಿದರೂ ಟೀಕೆ ಮಾಡಲಿ, ಸದನದಲ್ಲಿ ಎಲ್ಲವೂ ಬರಲಿದೆ. ಅವರವರ ಕಾಲದಲ್ಲಿ ಏನಾಯ್ತು ಅಂತ ಗೊತ್ತಿದೆ. ರಾಜ್ ಕುಮಾರ್ ಸತ್ತಾಗ ಏನಾಯ್ತು ಅಂತ ಗೊತ್ತಿದೆ. ನಾನು ಆಗ ದೆಹಲಿಯಲ್ಲಿ ಇದ್ದೆ, ಕುಮಾರಸ್ವಾಮಿ ಟೀಕೆ ಮಾಡುತ್ತಲೇ ಇರಲಿ. ಡರ್ಟಿ ಪಾಲಿಟಿಕ್ಸ್ ನಾನು ಮಾತಾಡಲ್ಲ. ಹೌದು ಯಾರೇ ಮಾಡಿದರೂ ಕೂಡ ಸರ್ಕಾರ ಜವಬ್ದಾರಿ ತೆಗೆದುಕೊಳ್ಳುತ್ತದೆ. ಇದು ಕರ್ನಾಟಕದ ಇಮೇಜ್‌, ನಮ್ಮ ಮನಸ್ಸಿಗೆ, ನಮ್ಮ ಕುಟುಂಬಕ್ಕೂ ನೋವಾಗಿದೆ. ಒಬ್ಬರು ತಾಯಿ ಹೇಳ್ತಾರೆ ಪೋಸ್ಟ್ ಮಾರ್ಟಮ್ ಮಾಡಬೇಡಿ ಅಂತ, ಎಷ್ಟು ಹೊಟ್ಟೆ ಉರಿಯಬೇಕು ಅಲ್ವ? ಈ ವಿಚಾರದಲ್ಲಿ ರಾಜಕೀಯ ಮಾಡೋದು ಬೇಡ ಅಂತ ಕಣ್ಣೀರಿಟ್ಟಿದ್ದಾರೆ.

ಮುಂದುವರಿದು.. ಇವರು ಸಾವಿನ ಮೇಲೆಯೇ ರಾಜಕೀಯ ಮಾಡೋದು. ಬಿಜೆಪಿ, ಜೆಡಿಎಸ್‌ನ ಪೊಲಿಟಿಕಲ್ ಅಜೆಂಡಾನೇ ಅದು, 18 ವರ್ಷದ ಬಳಿಕ ಕಪ್ ಬಂದಿದೆ ಅಂದಾಗ ಸಹಜವಾಗಿ ಅಭಿಮಾನ ಇರುತ್ತದೆ. ಸಿಎಂ, ಗೃಹ ಸಚಿವರು, ಸರ್ಕಾರ ಶಾಕ್ ನಲ್ಲಿ ಇದೆ. ಇಷ್ಟು ದೊಡ್ಡ ಘಟನೆ ಆಗುತ್ತೆ ಅಂತ ಅಂದುಕೊಂಡೇ ಇರಲಿಲ್ಲ. ಈ ಪ್ರಕರಣ ಗಂಭೀರವಾಗಿ ತೆಗೆದುಕೊಂಡಿದ್ದೇವೆ. ನಾನು ಪೊಲಿಟಿಕಲ್ ಬಗ್ಗೆ, ವಿಪಕ್ಷದ ಟೀಕೆಗೆ ಮಾತನಾಡಲ್ಲ. ನಾನು ಜನರಿಗೆ ಮಾತ್ರ ಉತ್ತರ ಕೊಡ್ತೀನಿ. ಇವರೆಲ್ಲಾ ಪಾಲಿಟಿಕ್ಸ್ ಮಾಡೋ ಮಾಸ್ಟರ್ ಮೈಂಡ್ಸ್ ಅಷ್ಟೆ ಅಂತ ವಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಟೀಂ ಇಂಡಿಯಾದ್ದು 5 ದಿನ, ಸಿಎಸ್‌ಕೆ 3 ದಿನದ ನಂತರ ಆಚರಣೆ ಮಾಡಿದ್ರೆ ಒಂದೇ ದಿನದಲ್ಲಿ ವಿಜಯೋತ್ಸವ ಆಚರಿಸಿದ್ದು ಯಾಕೆ? – ಜೆಡಿಎಸ್‌ ಆಕ್ರೋಶ

ಏನಿದು ಪ್ರಕರಣ?
ರಾಯಲ್ ಚಾಲೆಂಜರ್ಸ್ ಬೆಂಗಳೂರು 18 ವರ್ಷಗಳ ಬಳಿಕ ಐಪಿಎಲ್ ಚಾಂಪಿಯನ್ ಪಟ್ಟವನ್ನೇನೋ ಅಲಂಕರಿಸಿದೆ. ಆದರೆ, ಆರ್‌ಸಿಬಿ ಫ್ಯಾನ್ಸ್ ಐತಿಹಾಸಿಕ ಕ್ಷಣದ ಸಂಭ್ರಮದಲ್ಲಿ ದುರಂತ ಸಂಭವಿಸಿದೆ. 10ಕ್ಕೂ ಹೆಚ್ಚು ಅಭಿಮಾನಿಗಳು ಸಾವನ್ನಪ್ಪಿ ಸೂತಕವಾಗಿ ಆಗಿಬಿಟ್ಟಿದೆ. ಪಂಜಾಬ್ ವಿರುದ್ಧ ಬೆಂಗಳೂರು 6 ರನ್‌ಗಳ ಭರ್ಜರಿ ಜಯ ಸಾಧಿಸ್ತಿದ್ದಂತೆಯೇ ಸಿಲಿಕಾನ್ ಸಿಟಿಯಲ್ಲಿ ನಿನ್ನೆ ರಾತ್ರಿಯೇ ದೀಪಾವಳಿಯಂಥಹ ಸಂಭ್ರಮ ಇತ್ತು. ಇವತ್ತು ಇಡೀ ದಿನ ಹೆಚ್‌ಎಎಲ್ ಏರ್‌ಪೋರ್ಟ್ ರೋಡ್, ತಾಜ್ ವೆಸ್ಟ್ ಎಂಡ್ ಹೊಟೇಲ್ ರೋಡ್, ವಿಧಾನಸೌಧ, ಚಿನ್ನಸ್ವಾಮಿ ಸ್ಟೇಡಿಯಂ ರಸ್ತೆ ಸುತ್ತ ಮುತ್ತ ರೆಡ್ ಆರ್ಮಿ ಎಲ್ಲಾ ಕಡೆ ಆರ್‌ಸಿಬಿ ತಂಡಕ್ಕೆ ತಮ್ಮ ಅಭಿಮಾನ ತೋರಿದರು.

ಇವತ್ತು ದಿಢೀರನೆ ವಿಜಯೋತ್ಸವ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದರಿಂದ ಅಭಿಮಾನಿಗಳ ಸುನಾಮಿಯೇ ಸೃಷ್ಟಿ ಆಯ್ತು… ಉಚಿತ ಪ್ರವೇಶ ಆಗಿದ್ದರಿಂದ ಕ್ರೀಡಾಂಗಣಕ್ಕೆ ಫ್ಯಾನ್ಸ್ ಹರಿದುಬಂದಿತ್ತು. ಗೇಟ್ ನಂಬರ್ 18, 19, 20ರ ಬಳಿ ಅಭಿಮಾನಿ ಸಾಗರ ತಡೆಯಲು ಪೊಲೀಸರು ಹೈರಾಣಾಗಿ ಹೋದರು. ಒಂದು ಹಂತದಲ್ಲಿ ಲಾಠಿಯನ್ನೂ ಬೀಸಿದರು. ಕ್ಷಣ ಕ್ಷಣಕ್ಕೂ ಆರ್‌ಸಿಬಿ ಅಭಿಮಾನಿಗಳ ಸುನಾಮಿ ಹೆಚ್ಚುತ್ತಲೇ ಇತ್ತು. ಆದರೆ, ಗೇಟ್ ನಂ.12ರ ಬಳಿ ಗೇಟ್ ತೆಗೆಯುತ್ತಿದ್ದಂತೆಯೇ ಭಾರೀ ಪ್ರಮಾಣದಲ್ಲಿ ನೂಕು ನುಗ್ಗಲು ನಡೀತು. ಒಬ್ಬರ ಮೇಲೋಬ್ಬರು ಬಿದ್ದರು, ಉಸಿರಾಡೋಕೂ ಕೂಡ ಸಾಧ್ಯವಾಗಲಿಲ್ಲ. ತಕ್ಷಣವೇ ಹತ್ತಿರದ ಬೌರಿಂಗ್ ಆಸ್ಪತ್ರೆ, ವೈದೇಹಿ ಆಸ್ಪತ್ರೆ (ಮಲ್ಯ ರಸ್ತ್ರೆ), ಮಣಿಪಾಲ್‌ಗೆ ದಾಖಲಿಸಲಾಯಿತು. ಆದರೆ, ಬೌರಿಂಗ್ ಆಸ್ಪತ್ರೆಯಲ್ಲಿ 6, ವೈದೇಹಿ ಆಸ್ಪತ್ರೆಯಲ್ಲಿ 4 ಹಾಗೂ ಮಣಿಪಾಲ ಆಸ್ಪತ್ರೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ.

Share This Article