ಡಿಕೆಶಿ ಮೇಲಿನ ಐಟಿ ವಿಚಾರಣೆ ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಆರೋಪಿ ನಲಪಾಡ್ ಪ್ರತ್ಯಕ್ಷ!

Public TV
1 Min Read

ಬೆಂಗಳೂರು: ಕಾಂಗ್ರೆಸ್ಸಿನಿಂದ ಉಚ್ಚಾಟನೆಯಾದರೂ ಶಾಂತಿನಗರ ಶಾಸಕ ಹ್ಯಾರಿಸ್ ಪುತ್ರ ನಲಪಾಡ್ ಯೂತ್ ಕಾಂಗ್ರೆಸ್ ನಡೆಸಿದ ಪ್ರತಿಭಟನೆಯಲ್ಲಿ ಕಾಣಿಸಿಕೊಂಡಿದ್ದಾರೆ.

ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಮೇಲಿನ ಆದಾಯ ತೆರಿಗೆ ಇಲಾಖೆಯ ವಿಚಾರಣೆಯನ್ನು ವಿರೋಧಿಸಿ ನೂರಕ್ಕೂ ಹೆಚ್ಚು ಯೂತ್ ಕಾಂಗ್ರೆಸ್ ಕಾರ್ಯಕರ್ತರು ಇಂದು ಆದಾಯ ತೆರಿಗೆ ಕಚೇರಿ ಎದುರು ಪ್ರತಿಭಟನೆ ಮಾಡಿದ್ದಾರೆ. ಈ ಪ್ರತಿಭಟನೆಯಲ್ಲಿ ನಲಪಾಡ್ ಭಾಗಿಯಾಗಿದ್ದರು.

ಪ್ರತಿಭಟನೆಯಲ್ಲಿ ಭದ್ರತೆಗೆ ಹಾಕಲಾಗಿದ್ದ ಬ್ಯಾರಿಕೇಡ್ ಮೇಲೆ ಹತ್ತಿ ನಲಪಾಡ್ ಪ್ರತಿಭಟನೆ ಮಾಡಿದ್ದಾರೆ. ಪೊಲೀಸರು ಪ್ರತಿಭಟನೆಯನ್ನು ತಡೆದು ನಲಪಾಡ್ ಸೇರಿದಂತೆ ಕಾರ್ಯಕರ್ತರನ್ನು ವಶಕ್ಕೆ ಪಡೆದರು. ಇದನ್ನೂ ಓದಿ: ಕಾಂಗ್ರೆಸ್ ಕಾರ್ಯಕ್ರಮದ ಫ್ಲೆಕ್ಸ್ ನಲ್ಲಿ ಆರೋಪಿ ನಲಪಾಡ್ ಮಿಂಚಿಂಗ್!

ಮುಂಜಾಗೃತ ಕ್ರಮವಾಗಿ ಆದಾಯ ತೆರಿಗೆ ಕಚೇರಿಗೆ ಪೊಲೀಸ್ ಬಿಗಿ ಭದ್ರತೆ ಕೂಡ ಆಯೋಜನೆ ಮಾಡಲಾಗಿತ್ತು. ಸುಮಾರು 30ಕ್ಕೂ ಹೆಚ್ಚು ಪೊಲೀಸರು ಒಂದು ಕೆಎಸ್‍ಆರ್ ಪಿ ತುಕಡಿಯನ್ನು ನಿಯೋಜನೆ ಮಾಡಲಾಗಿತ್ತು.

ಬಿಜೆಪಿ ಐಟಿಯನ್ನ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಕಾಂಗ್ರೆಸ್ ವಿರುದ್ಧ ಐಟಿ ಅಸ್ತ್ರ ಉಪಯೋಗಿಸುತ್ತಿದೆ. ರಫೆಲ್ ಯುದ್ಧ ವಿಮಾನ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದೆ. ಇದು ತೆರಿಗೆದಾರರ ಹಣ, ಈ ಹಣವನ್ನ ಲೂಟಿ ಮಾಡಿದ್ದಾರೆ ಅಂತಾ ಬಿಜೆಪಿ ವಿರುದ್ಧ ವಾಗ್ದಾಳಿ ಮಾಡಿದ್ದು, ಈ ಪ್ರಕರಣದಲ್ಲಿ ಅನಿಲ್ ಅಂಬಾನಿ ಭಾಗಿಯಾಗಿದ್ದು, ಅವರ ಮೂಲಕ ಯುದ್ಧ ವಿಮಾನಗಳನ್ನು ಖರೀದಿ ಮಾಡಲಾಗುತ್ತದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ವಿದ್ವತ್ ಮೇಲಿನ ಹಲ್ಲೆ ಪ್ರಕರಣದ ಬಳಿಕ ನಲಪಾಡ್ ನನ್ನು ಬೆಂಗಳೂರು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ಮತ್ತು ಪಕ್ಷದ ಸದಸ್ಯತ್ವದಿಂದ 6 ವರ್ಷಗಳ ಕಾಲ ಉಚ್ಛಾಟಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷರಾಗಿದ್ದ ಡಾ. ಕೆ. ಪರಮೇಶ್ವರ್ ಈ ಕುರಿತು ನಿರ್ಣಯ ತೆಗೆದುಕೊಂಡಿದ್ದು, ಪಕ್ಷದ ನಿರ್ಧಾರವನ್ನು ಕರ್ನಾಟಕ ಕಾಂಗ್ರೆಸ್ ಫೆ.18ರಂದು ಟ್ವೀಟ್ ಮಾಡಿ ತಿಳಿಸಿತ್ತು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

https://www.youtube.com/watch?v=Yf6tfu3N7BY

Share This Article
Leave a Comment

Leave a Reply

Your email address will not be published. Required fields are marked *