ನಾನು ಯಾರಿಗೂ ಪ್ರಮಾಣ ಮಾಡ್ಬೇಕಾದ ಅವಶ್ಯಕತೆ ಇಲ್ಲ, ಕೆಲಸ ಮಾಡಿದ್ರೆ ಹಣ ಬಿಡುಗಡೆ ಆಗುತ್ತೆ, ಇಲ್ಲ ಅಂದ್ರೆ ಹಣ ಇಲ್ಲ: ಡಿಕೆಶಿ

Public TV
2 Min Read

ಬೆಂಗಳೂರು: ನಾನು ಯಾರಿಗೂ ಪ್ರಮಾಣ ಮಾಡಬೇಕಾದ ಅವಶ್ಯಕತೆ ಇಲ್ಲ. ಕೆಲಸ ಮಾಡಿದ್ರೆ ಹಣ ಬಿಡುಗಡೆ ಆಗುತ್ತೆ, ಇಲ್ಲ ಅಂದ್ರೆ ಹಣ ಇಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಖಡಕ್‌ ಹೇಳಿಕೆ ಕೊಟ್ಟಿದ್ದಾರೆ.

ಬೆಂಗಳೂರಿನ (Bengaluru) ಕಾಂಗ್ರೆಸ್ ಶಾಸಕರ (Congress MLA) ಸಭೆಯ ಬಳಿಕ ಮಾತನಾಡಿದ ಅವರು, ಬೆಂಗಳೂರು ಶಾಸಕರು ನಾಳೆ ಎಲ್ಲರೂ ಸಿಎಂನ ಭೇಟಿ ಮಾಡಲಿದ್ದಾರೆ. ಹಿಂದೆ ಆದ ತಾರತಮ್ಯ ಚರ್ಚೆ ಮಾಡ್ತೀವಿ. ಹಣಕಾಸು ವಿಚಾರದ ಬಗ್ಗೆ ಚರ್ಚೆಯಾಗಲಿದೆ. ಕ್ಷೇತ್ರದ ವಿಚಾರ ಚರ್ಚೆ ಮಾಡ್ತೀವಿ ಅಂತಾ ಹೇಳಿದ್ದಾರೆ. ಇದನ್ನೂ ಓದಿ: 5 ಕಿ.ಮೀ ದೂರದ ಬೆಟ್ಟದಿಂದ ಅಪರಿಚಿತ ವ್ಯಕ್ತಿಯ ಮೃತ ದೇಹ ಹೊತ್ತು ತಂದ ಸೈನಿಕರು, ಪಿಎಸ್ಐ

ಕಂಟ್ರ್ಯಾಕ್ಟರ್‌ಗಳು (Contractors) ಆಣೆ ಪ್ರಮಾಣಕ್ಕೆ ಬರಲಿ ಎಂದ ವಿಚಾರಕ್ಕೆ ಪ್ರತಿಕ್ರಿಯಿಸಿ, ನಾನು ಯಾವ ಗುತ್ತಿಗೆದಾರನಿಗೂ ಉತ್ತರ ಕೊಡಲ್ಲ. ಯಾವ ಬಿಲ್ ವಿಚಾರವೂ ಗೊತ್ತಿಲ್ಲ. ನನಗೂ ಪ್ರಜ್ಞೆ ಇದೆ, ರಾಜಕಾರಣ ಗೊತ್ತಿದೆ. ಯಾವ ಕಂಟ್ರ್ಯಾಕ್ಟರ್‌ ಹಿಂದೆ ಯಾರಿದ್ದಾರೆ ನನಗೂ ಗೊತ್ತಿದೆ. ಯಾವ ಬ್ಲಾಕ್‌ ಮೇಲ್‌ ನನ್ನ ಮುಂದೆ ನಡೆಯಲ್ಲ. ನಾವು ವಿಪಕ್ಷ ಇದ್ದಾಗ ನಮ್ಮ ಬಳಿ ಹುಡುಕಿಕೊಂಡು ಬರ್ತಿರಲಿಲ್ವಾ. ನಾನು ಯಾರಿಗೂ ಪ್ರಮಾಣ ಮಾಡಬೇಕಾದ ಅವಶ್ಯಕತೆ ಇಲ್ಲ. ಕೆಲಸ ಮಾಡಿದ್ರೆ ಹಣ ಬಿಡುಗಡೆ ಆಗುತ್ತೆ, ಇಲ್ಲ ಅಂದ್ರೆ ಹಣ ಇಲ್ಲ ಎಂದಿದ್ದಾರೆ. ಇದನ್ನೂ ಓದಿ: ಮಂತ್ರಿಗಳ ಮಾನಗೇಡಿ ಕೃತ್ಯಗಳನ್ನೂ ಸಮರ್ಥಿಸಿಕೊಳ್ಳೋ ಲಜ್ಜೆಗೇಡಿ ಸಿಎಂ ಈ ರಾಜ್ಯಕ್ಕೆ ವಕ್ಕರಿಸಿದ್ದಾರೆ: ಹೆಚ್‍ಡಿಕೆ

ಒಂದೇ ವಾರದಲ್ಲಿ ಹಣ ಬಿಡುಗಡೆ ಆಗುತ್ತಾ?
ಯಾವುದೇ ಒತ್ತಡ ಇದ್ದರೂ ತಡೆದುಕೊಳ್ಳಲು ರೆಡಿ. ಯಾರಿಗೋ ಬ್ಲಾಕ್ ಮೇಲ್ ಮಾಡುವಂತೆ ನನಗೆ ಮಾಡಲು ಬರಬೇಡಿ. ನನಗೆ ಥ್ರೆಟ್ ಮಾಡಿದ್ರೆ ಕೇಳ್ತೀನಾ? ಬಿಜೆಪಿ ವಿರುದ್ಧ ನಾವು ಆರೋಪ ಮಾಡಿದ್ದು ಸತ್ಯ. ಲೆಟರ್ ಕೊಟ್ಟಿದ್ದು ಸತ್ಯ. ಅಶ್ವಥ್ ನಾರಾಯಣ್, ಬೊಮ್ಮಾಯಿ ಸೇರಿದಂತೆ ಎಲ್ಲರೂ ತನಿಖೆ ಮಾಡಿ ಅಂತಾ ಸದನದಲ್ಲಿ ಅಂದಿದ್ದು ಸತ್ಯ. ಡಿಕೆಶಿ ಕಮಿಷನ್‌ ಕೇಳುತ್ತಿದ್ದಾರೆ ಅಂದ್ರೆ ಬಿಲ್ ಬಗ್ಗೆ ನೀವು ಯಾಕೆ ತಲೆ ಕೆಡಿಸ್ಕೊಳ್ತೀರಾ? ತಪ್ಪು ಇಲ್ಲದವರು ಯಾಕೆ ವಿರೋಧ ಮಾಡಬೇಕು? 25 ಸಾವಿರ ಕೋಟಿ ಬಿಲ್‌ ಇದೆ. ಇರಿಗೇಷನ್ ಡಿಪಾರ್ಟ್ಮೆಂಟ್ ನಲ್ಲಿ ಇರೋದು 600 ಕೋಟಿ, ಯಾರಿಗೆ ಹಣ ಕೊಡಲು ಸಾಧ್ಯ? ಎಂದು ಪ್ರಶ್ನಿಸಿದ್ದಾರೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್