ಗ್ಯಾರಂಟಿ ಯೋಜನೆಗಳಿಗೆ ಕತ್ತರಿ ಹಾಕಲ್ಲ: ಡಿಕೆಶಿ

Public TV
1 Min Read

ಬೆಂಗಳೂರು: ಗ್ಯಾರಂಟಿ ಯೋಜನೆಗಳನ್ನು (Guarantee Scheme) ನಮ್ಮ ಸರ್ಕಾರ ಬದಲಾವಣೆ ಮಾಡುವುದಿಲ್ಲ ಮತ್ತು ಕತ್ತರಿ ಹಾಕುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಹೇಳಿದ್ದಾರೆ.

ಪದ್ಮನಾಭನಗರದಲ್ಲಿ ಗ್ಯಾರಂಟಿ ಅನುಷ್ಠಾನ ಕೇಂದ್ರವನ್ನು ಉದ್ಘಾಟಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಗೆ ಕತ್ತರಿ ಹಾಕಲಾಗುತ್ತದೆ ಎಂಬ ಸುದ್ದಿ ಬರುತ್ತಿದೆ. ಆದರೆ ಇದು ಸುಳ್ಳು ಸುದ್ದಿಯಾಗಿದೆ. ನಾನು ಪಕ್ಷದ ಅಧ್ಯಕ್ಷನಾಗಿ ಹೇಳುತ್ತಿದ್ದೇನೆ. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ತಿಳಿಸಿದರು.

 

ಕೆಲವು ಕಡೆ ಆದಾಯ ಹೆಚ್ಚಳ ಇರುವವರು ಗ್ಯಾರಂಟಿ ಯೋಜನೆಯ ಲಾಭವನ್ನು ಪಡೆದುಕೊಳ್ಳುತ್ತಿದ್ದಾರೆ. ಅವುಗಳನ್ನು ನಾವು ಪರಿಶೀಲನೆ ಮಾಡುತ್ತೇವೆ. ಶಾಸಕರಿಗೆ, ಸಚಿವರಿಗೆ ಅನುದಾನ ಸಿಗುತ್ತಿಲ್ಲ ಎನ್ನುವುದು ಸುಳ್ಳು ಎಂದರು.

ಅಭಿವೃದ್ಧಿ ಯೋಜನೆಗಳಿಗೆ ಹಣ ಸಿಗುತ್ತಿಲ್ಲ ಎಂಬ ಮುನಿಯಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿ, ಮುನಿಯಪ್ಪನವರು ಹೇಳಿಲ್ಲ. ಏನು ಕೊಡಬೇಕೋ ಅದನ್ನು ಕೊಟ್ಟಿದ್ದೇವೆ ಎಂದು ಉತ್ತರಿಸಿದರು.

 

Share This Article