ಚಾಮರಾಜನಗರ: ಸಿಎಂ ಸಿದ್ದರಾಮಯ್ಯ ಅವರನ್ನು ಜೈಲಿಗೆ ಕಳುಹಿಸಲು ಯಡಿಯೂರಪ್ಪ ಅವರು ಜಡ್ಜ್ ಅಥವಾ ಪೊಲೀಸ್ ಇನ್ಸ್ ಪೆಕ್ಟರ್ ಹಾ ಎಂದು ಇಂಧನ ಸಚಿವ ಡಿಕೆ ಶಿವಕುಮಾರ್ ಪ್ರಶ್ನಿಸಿ ವಾಗ್ದಾಳಿ ನಡೆಸಿದ್ದಾರೆ.
ಇಂದು ಗುಂಡ್ಲುಪೇಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಗೀತಾಮಹದೇವಪ್ರಸಾದ್ ಅವರ ಪರ ಪ್ರಚಾರ ಮಾಡುವ ವೇಳೆ ಮಾತನಾಡಿದ ಅವರು, ಬಿಎಸ್‍ವೈ ಸಿಎಂ ಆದರೆ 24 ಗಂಟೆಯಲ್ಲಿ ಸಿದ್ದರಾಮಯ್ಯ ಅವರನ್ನು ಜೈಲಿಗೆ ಕಳುಹಿಸುತ್ತೇನೆ ಎನ್ನುವ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದರು.
ಸಿದ್ದರಾಮಯ್ಯ ಅವರನ್ನು 24 ಗಂಟೆಗೆ ಜೈಲಿಗೆ ಕಳುಹಿಸಲು ಸಿದ್ದರಾಮಯ್ಯ ಅವರ ಕೆಳಗೆ ಹಾಕಿದ ತಕ್ಷಣ ಒಡೆಯಲು ಮಡಿಕೆ ನಾ? ಯಡಿಯೂರಪ್ಪ ಅವರು ತಮ್ಮ ಆಡಳಿತ ಅವಧಿಯನ್ನು ಒಮ್ಮೆ ನೋಡಿಕೊಳ್ಳಬೇಕು ಎಂದು ಕಿಡಿಕಾರಿದರು.
ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ. ನಮ್ಮ ಸಮೀಕ್ಷೆ ಪ್ರಕಾರ 132 ಸೀಟ್ ಗೆಲ್ಲುತ್ತೆವೆ. ಗುಂಡ್ಲುಪೇಟೆ ಕ್ಷೇತ್ರದ ಉಪಚುನಾವಣೆಯಲ್ಲಿ ಸರ್ಕಾರ ಹಾಗೂ ಪಕ್ಷ ಇಲ್ಲಿಗೆ ಬಂದಿತ್ತು. ಆಗ ಉತ್ತಮ ಪ್ರತಿಕ್ರಿಯೆ ಇತ್ತು, ಈಗ ಅದಕ್ಕಿಂತಲೂ ಉತ್ತಮ ಪ್ರತಿಕ್ರಿಯೆ ಇದೆ. ಈ ಬಾರಿಯೂ ಇಲ್ಲಿ ಗೀತಾಮಹದೇವಪ್ರಸಾದ್ ಅವರು ಹೆಚ್ಚಿನ ಮತಗಳಿಂದ ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.