ಸೆ.26ರಿಂದ 5 ದಿನ ಕಾವೇರಿ ಆರತಿ – ಕೆಆರ್‌ಎಸ್‌ಗೆ ಭೇಟಿ ನೀಡಿ, ಸಿದ್ಧತೆ ವೀಕ್ಷಿಸಿದ ಡಿಕೆಶಿ

Public TV
1 Min Read

ಮಂಡ್ಯ: ಸೆ.26ರಿಂದ 5 ದಿನಗಳ ಕಾಲ ಕಾವೇರಿ ಆರತಿ ನಡೆಯಲಿರುವ ಹಿನ್ನೆಲೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ಮಂಡ್ಯದ (Mandya) ಕೆಆರ್‌ಎಸ್‌ಗೆ (KRS) ಭೇಟಿ ನೀಡಿ, ಸಿದ್ಧತೆ ವೀಕ್ಷಿಸಿದರು.

ಇದೇ ಶುಕ್ರವಾರದಿಂದ (ಸೆ.26) ಐದು ದಿನಗಳ ಕಾಲ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ನಡೆಯಲಿದ್ದು, ಈ ಹಿನ್ನೆಲೆ ಸಿದ್ಧತೆ ವೀಕ್ಷಣೆ ಮಾಡಿದರು.ಇದನ್ನೂ ಓದಿ: ಸೆ.26ರಿಂದ 5 ದಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ – ಚಲುವರಾಯಸ್ವಾಮಿ

ಕಾವೇರಿ ಆರತಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಚಾಲನೆ ನೀಡಲಿದ್ದು, ಸ್ಥಳಿಯ ಪುರೋಹಿತರಿಂದ ಆರತಿ ನಡೆಯಲಿದೆ. ಇನ್ನು ಕೆಆರ್‌ಎಸ್ ಬೋಟಿಂಗ್ ಪಾಯಿಂಟ್‌ನಲ್ಲಿ ಕಾವೇರಿ ಆರತಿ ನಡೆಸಲು ತೀರ್ಮಾನಿಸಲಾಗಿದ್ದು, ಈಗಾಗಲೇ ವೈದಿಕರು ಕಾವೇರಿ ಆರತಿ ತರಬೇತಿ ಪಡೆದುಕೊಂಡಿದ್ದಾರೆ. ವೇದಿಕೆ, ಕಾವೇರಿ ಆರತಿ ನಡೆಯುವ ಸ್ಥಳ ಮತ್ತು ವೀಕ್ಷಕರಿಗೆ ಆಸನ ವ್ಯವಸ್ಥೆ ಕುರಿತಂತೆ ಪರಿಶೀಲನೆ ನಡೆಸಿ, ಕಾರ್ಯಕ್ರಮವು ಯಾವುದೇ ಲೋಪವಿಲ್ಲದೆ ನಡೆಸಲು ಸೂಚನೆ ನೀಡಿದರು.

ಕಾವೇರಿ ಆರತಿ ಸಮಿತಿ ಅಧ್ಯಕ್ಷರೂ ಆದ ಬೆಂಗಳೂರು ನಗರ ನೀರು ಸರಬರಾಜು ಹಾಗೂ ಒಳಚರಂಡಿ‌ ಮಂಡಳಿ ಆಯುಕ್ತರಾದ ರಾಮ್ ಪ್ರಸಾತ್ ಮನೋಹರ್ ಅವರು‌ ಕಾವೇರಿ ಆರತಿಯ ರೂಪುರೇಷು ಕುರಿತು ಡಿಸಿಎಂ ಅವರಿಗೆ ವಿವರಿಸಿದರು. ಬಳಿಕ ಉಪಮುಖ್ಯಮಂತ್ರಿಗಳು ಕಾವೇರಿ ಆರತಿ ಪೂರ್ವ ತಾಲೀಮು ವೀಕ್ಷಣೆ ಮಾಡಿದರು.

ಪರಿಶೀಲನೆ ವೇಳೆ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಚೆಸ್ಕಾಂ ಅಧ್ಯಕ್ಷರಾದ ರಮೇಶ ಬಂಡಿಸಿದ್ದೇಗೌಡ, ಮಂಡ್ಯ ಶಾಸಕ ಪಿ. ರವಿಕುಮಾರ್, ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಜಿಲ್ಲಾಧಿಕಾರಿ ಡಾ. ಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ. ಆರ್ ನಂದಿನಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಜೊತೆಗಿದ್ದರು.ಇದನ್ನೂ ಓದಿ: ಕೆಆರ್‌ಎಸ್‌ನಲ್ಲಿ ಪ್ರಾಯೋಗಿಕವಾಗಿ ನಡೆದ ಕಾವೇರಿ ಆರತಿ

Share This Article