ಮನೆಯಲ್ಲಿ ಕೈ, ಕಾಲು ಕಟ್ಟಿಹಾಕಿದ ಸ್ಥಿತಿಯಲ್ಲಿ ವೈದ್ಯನ ಮೃತದೇಹ ಪತ್ತೆ

Public TV
1 Min Read

ನವದೆಹಲಿ: ಮನೆಯಲ್ಲಿ ಕೈ, ಕಾಲು ಕಟ್ಟಿಹಾಕಿದ ಸ್ಥಿತಿಯಲ್ಲಿ ವೈದ್ಯನ ಮೃತದೇಹ ಪತ್ತೆಯಾಗಿರುವ ಘಟನೆ ದೆಹಲಿಯ (New Delhi) ಜಂಗ್‌ಪುರದಲ್ಲಿ ನಡೆದಿದೆ.

ವೈದ್ಯ ಡಾ.ಯೋಗೇಶ್ ಚಂದ್ರ ಪಾಲ್ (63) ಅವರ ದೇಹವು ಕೈಕಾಲುಗಳನ್ನು ಕಟ್ಟಿಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ ಸಂಜೆ 6:50ಕ್ಕೆ ಶವದ ಕುರಿತು ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಬಂದಿತ್ತು. ಬಳಿಕ ತಂಡವೊಂದು ಮನೆಗೆ ಧಾವಿಸಿತ್ತು. ಇದನ್ನೂ ಓದಿ: ಜೈಲಿನಿಂದ ಹೊರ ಬರುತ್ತಿದ್ದಂತೆ ಟೆಂಪಲ್ ರನ್ – ಹನುಮಾನ್ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಕೇಜ್ರಿವಾಲ್!

ಜಂಗ್‌ಪುರ ಸಿ ಬ್ಲಾಕ್‌ನಲ್ಲಿರುವ ವಸತಿ ಕಟ್ಟಡದ ಮೊದಲ ಮಹಡಿಯಲ್ಲಿ ವೈದ್ಯ ಚಂದ್ರ ಪಾಲ್ ವಾಸವಾಗಿದ್ದರು. ಅವರ ಮನೆಯಲ್ಲಿ ದರೋಡೆಯಾಗಿರುವ ಬಗ್ಗೆ ಪೊಲೀಸರಿಗೆ ಕುರುಹು ಸಿಕ್ಕಿದೆ. ಆದರೆ ಸಂಪೂರ್ಣ ತನಿಖೆಯ ನಂತರ ಹೆಚ್ಚಿನ ಮಾಹಿತಿ ತಿಳಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

ಕೊಲೆ ಮತ್ತು ದರೋಡೆಯಲ್ಲಿ ಮೂರ್ನಾಲ್ಕು ಜನರು ಭಾಗಿಯಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಪಾಲ್ ಅವರ ಪತ್ನಿ ನೀನಾ ಕೂಡ ದೆಹಲಿ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯೆಯಾಗಿದ್ದಾರೆ. ವೈದ್ಯ ದಂಪತಿಯ ಸಾಕುನಾಯಿಗಳನ್ನು ಮತ್ತೊಂದು ಕೋಣೆಯಲ್ಲಿ ಬೀಗ ಹಾಕಿ ಕೂಡಿಹಾಕಿರುವುದು ಕಂಡುಬಂದಿದೆ. ಇದನ್ನೂ ಓದಿ: ದೇಶವನ್ನು ಸರ್ವಾಧಿಕಾರದಿಂದ ರಕ್ಷಿಸಬೇಕಿದೆ: 50 ದಿನಗಳ ಬಳಿಕ ಜೈಲಿನಿಂದ ಹೊರಬಂದ ಕೇಜ್ರಿವಾಲ್‌ ಪ್ರತಿಕ್ರಿಯೆ

Share This Article