ವೈದ್ಯರ ನಿರ್ಲಕ್ಷ್ಯ ಆರೋಪ – ಸಂತಾನಹರಣ ಶಸ್ತ್ರಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಬಾಣಂತಿ ಸಾವು

1 Min Read

– ಆಸ್ಪತ್ರೆ ಮುಂದೆ ಶವವಿಟ್ಟು ಕುಟುಂಬಸ್ಥರ ಪ್ರತಿಭಟನೆ

ಬೀದರ್: ಸಂತಾನಹರಣ ಶಸ್ತ್ರಚಿಕಿತ್ಸೆಗೆಂದು ದಾಖಲಾಗಿದ್ದ ಬಾಣಂತಿ ಸಾವನ್ನಪ್ಪಿದ ಘಟನೆ ಬೀದರ್‌ನ (Bidar) ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ವೈದ್ಯರ ನಿರ್ಲಕ್ಷ್ಯದಿಂದಾಗಿ ಮಗಳು ಮೃತಪಟ್ಟಿರುವುದಾಗಿ ಮೃತಳ ಕುಟುಂಬಸ್ಥರು ಆರೋಪಿಸಿದ್ದಾರೆ.

ಚಿಮಕೋಡ್ ಗ್ರಾಮದ 26 ವರ್ಷದ ಮೀನಾಕ್ಷಿ ಮೃತ ಬಾಣಂತಿ. ಇದನ್ನೂ ಓದಿ: ಲೇಡಿ ಫಿಟ್ನೆಸ್ ಇನ್‌ಫ್ಲೂಯೆನ್ಸರ್‌ಗೆ ಅಶ್ಲೀಲ ಮೆಸೇಜ್ – ಯುವತಿಗಾಗಿ ಹರಿಯಾಣದಿಂದ ಕರ್ನಾಟಕಕ್ಕೆ ಬಂದಿದ್ದ ಆರೋಪಿ ಅರೆಸ್ಟ್

ಮಂಗಳವಾರ (ಜ.20) ಸಂತಾನಹರಣ ಶಸ್ತ್ರಚಿಕಿತ್ಸೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಶಸ್ತ್ರಚಿಕಿತ್ಸೆ ಬಳಿಕ ಬಾಣಂತಿ ಶೌಚಾಲಯಕ್ಕೆ ತೆರಳುವಾಗ ಕುಸಿದು ಬಿದ್ದಿದ್ದು, ಈ ವೇಳೆ ವೈದ್ಯರು ಇಂಜೆಕ್ಷನ್ ನೀಡಿದ್ದರು. ಅದಾದ ಬಳಿಕ ಬಾಣಂತಿ ಆರೋಗ್ಯದಲ್ಲಿ ಮತ್ತಷ್ಟು ಏರುಪೇರಾಗಿದ್ದು, ಬ್ರಿಮ್ಸ್ ಆಸ್ಪತ್ರೆಗೆ ಕರೆದೊಯ್ಯುವಂತೆ ತಿಳಿಸಿದ್ದರು. ಬ್ರಿಮ್ಸ್ ವೈದ್ಯರು ಪರೀಕ್ಷಿಸಿದಾಗ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ.

ಮೃತಳ ಕುಟುಂಬಸ್ಥರು ಖಾಸಗಿ ಆಸ್ಪತ್ರೆಯ ಎದುರು ಶವವಿಟ್ಟು ಪ್ರತಿಭಟನೆ ಮಾಡುತ್ತಿದ್ದಾರೆ. ವೈದ್ಯರ ನಿರ್ಲಕ್ಷ್ಯವೇ ಬಾಣಂತಿ ಸಾವಿಗೆ ಕಾರಣವೆಂದು ಆರೋಪ ಮಾಡಿದ್ದು, ಸಾವಿಗೆ ನ್ಯಾಯ ಒದಗಿಸಿಕೊಡುವಂತೆ ಒತ್ತಾಯ ಮಾಡಿದ್ದಾರೆ.ಇದನ್ನೂ ಓದಿ: ಬೆಂಗಳೂರು | ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ವಿಕೃತ ಕಾಮಿ ಅರೆಸ್ಟ್! 

Share This Article