ಮೋದಿ ಪ್ರಧಾನಿಯಾಗಿ ಇರುವವರೆಗೂ ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರಲು ಬಿಡಲ್ಲ, ಇದು ನಮ್ಮ ಶಪಥ – ಬಿಎಸ್‌ವೈ

Public TV
1 Min Read

ದೊಡ್ಡಬಳ್ಳಾಪುರ: ಪ್ರಧಾನಿಯಾಗಿ ನರೇಂದ್ರ ಮೋದಿ(Narendra Modi) ಎಲ್ಲಿಯವರೆಗೆ ಇರುತ್ತಾರೋ ಅಲ್ಲಿಯವರೆಗೆ ಕರ್ನಾಟಕದಲ್ಲಿ ಕಾಂಗ್ರೆಸ್(Congress) ಪಕ್ಷವನ್ನು ಅಧಿಕಾರಕ್ಕೆ ಬರಲು ಬಿಡುವುದಿಲ್ಲ. ಇದು ನಮ್ಮ ಶಪಥ ಎಂದು ಮಾಜಿ ಸಿಎಂ ಯಡಿಯೂರಪ್ಪ(Yediyurappa) ಹೇಳಿದ್ದಾರೆ.

ಜನಸ್ಪಂದನ ಕಾರ್ಯಕ್ರಮದಲ್ಲಿ(Janaspandana Program) ಮಾತನಾಡಿದ ಅವರು, ಈ ಭಾಗದಲ್ಲಿ ನಮ್ಮ ಶಕ್ತಿ ಬೆಳೆದಿರಲಿಲ್ಲ. ಇಂಥ ಕಡೆ ಸುಧಾಕರ್(Sudhakar) ದೊಡ್ಡ ಸಮಾವೇಶ ಮಾಡಿ ನಮ್ಮ ಶಕ್ತಿಯನ್ನು ತೋರಿಸಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯದ ಹಲವೆಡೆ ಈ ರೀತಿಯ ಸಮಾವೇಶ ಮಾಡಿ ಪಕ್ಷದ ಶಕ್ತಿಯನ್ನು ತೋರಿಸುತ್ತೇವೆ ಎಂದರು. ಇದನ್ನೂ ಓದಿ: ಡಬಲ್ ಸ್ಟೇರಿಂಗ್, ಡಬಲ್ ಡೋರ್ ಸರ್ಕಾರ ಆಗುತ್ತೆ – ಡಿಕೆಶಿ, ಸಿದ್ದು ಕಾಲೆಳೆದ ಸುಧಾಕರ್

ಮುಂದಿನ ಸಲ ರಾಜ್ಯದಲ್ಲಿ 150ಕ್ಕೂ ಹೆಚ್ಚು ಸ್ಥಾನವನ್ನು ಗೆಲ್ಲುತ್ತೇವೆ. ದೇಶದಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ ಕ್ರಾಂತಿಕಾರಕ ಬದಲಾವಣೆ ಆಗುತ್ತಿದೆ. ಬೆಂಗಳೂರಿನಲ್ಲಿ ಬೋಟ್‌ನಲ್ಲಿ ಓಡಾಡುವ ಪರಿಸ್ಥಿತಿ ಇದೆ ಎಂದು ಸಿದ್ದರಾಮಯ್ಯ ಹೇಳುತ್ತಾರೆ. ಬೋಟ್‌ನಲ್ಲಿ ಓಡಾಡೋವ ಸ್ಥಿತಿ ಇದೆ ಅಂದರೆ ಎಷ್ಟು ಮಳೆ ಬಂದಿದೆ ಅಂತ ನಿಮಗೆ ಗೊತ್ತಾಗಿರಬಹುದು. ನಿಮ್ಮ ಟೀಕೆಗಳಿಗೆ ಸದನದಲ್ಲಿ ತಕ್ಕ ಉತ್ತರ ಕೊಡುತ್ತೇವೆ ಎಂದು ಹೇಳಿದರು.

ಸಮಾವೇಶದಲ್ಲಿ ಮೂರು, ನಾಲ್ಕು ಲಕ್ಷ ಜನ ಬಂದಿದ್ದಾರೆ. ಹೊರಗಡೆ ಭಾರೀ ಸಂಖ್ಯೆಯಲ್ಲಿ ವಾಹನಗಳು ಇರುವುದನ್ನು ನಾನು ನೋಡಿದೆ. ಈ ಭಾಗದಲ್ಲಿ ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *