ಕೊಪ್ಪಳ: ಶಾಲಾ ಆವರಣಕ್ಕೆ ಏಕಾಏಕಿ ನುಗ್ಗಿದ ನಾಯಿ (Dog), ವಿದ್ಯಾರ್ಥಿ ಹಾಗೂ ಶಿಕ್ಷಕನ ಮೇಲೆ ದಾಳಿ ಮಾಡಿರುವ ಘಟನೆ ಕೊಪ್ಪಳ (Koppala) ಜಿಲ್ಲೆಯ ಕುಕನೂರು ತಾಲೂಕಿನ ತಳಕಲ್ ಗ್ರಾಮದಲ್ಲಿ ನಡೆದಿದೆ.
ಶಾಲಾ ಆವರಣದಲ್ಲಿ ಮಕ್ಕಳು ಆಟವಾಡುತ್ತಿದ್ದಾಗ ನಾಯಿಯೊಂದು ಏಕಾಏಕಿ ದಾಳಿ ನಡೆಸಿದೆ. ಈ ವೇಳೆ ಅಲ್ಲೇ ಆಟವಾಡುತ್ತಿದ್ದ ವಿದ್ಯಾರ್ಥಿಯ ಮೇಲೆ ದಾಳಿ ಮಾಡಿ ನಂತರ ಶಿಕ್ಷಕನ ಮೇಲೂ ದಾಳಿ ಮಾಡಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ – ಒಂದೇ ಕುಟುಂಬದ ನಾಲ್ವರು ಸೇರಿ ಐವರು ಸಜೀವ ದಹನ
ನಾಯಿಯು ನಿನ್ನೆಯಿಂದ ಸಿಕ್ಕಸಿಕ್ಕವರ ಮೇಲೆ ದಾಳಿ ನಡೆಸುತ್ತಿದ್ದು, ಈಗಾಗಲೇ 10ಕ್ಕೂ ಹೆಚ್ಚು ಜನರ ಮೇಲೆ ದಾಳಿ ನಡೆಸಿದೆ. ಇದೀಗ ಗಾಯಾಳುಗಳನ್ನು ಸ್ಥಳೀಯ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಕ್ರಮ ಕೈಗೊಳ್ಳದ ಗ್ರಾಮ ಪಂಚಾಯತಿ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.