ನಾಪತ್ತೆಯಾದ ಯುವಕನ ಪತ್ತೆ ಮಾಡಿದ ಸಾಕುನಾಯಿ- ಗ್ರಾಮಸ್ಥರಿಂದ ಇಬ್ಬರ ಮೆರವಣಿಗೆ

Public TV
1 Min Read

ಉಡುಪಿ: ನಿಗೂಢವಾಗಿ ಕಣ್ಮರೆಯಾಗಿ ಅಚ್ಚರಿಯ ರೀತಿಯಲ್ಲಿ ಮನೆಗೆ ವಾಪಸ್ ಆದ ಯುವಕನನ್ನು ಇಡೀ ಗ್ರಾಮಸ್ಥರು ಮೆರವಣಿಗೆ ಮಾಡಿದ್ದಾರೆ.

ಉಡುಪಿ (Udupi) ಜಿಲ್ಲೆಯ ಬೈಂದೂರು ತಾಲೂಕಿನ ಮಚ್ಚೆಟ್ಟು ವ್ಯಾಪ್ತಿಯ ವಿವೇಕಾನಂದ (Vivekananda Rescued By Dog) ವಾರದ ಹಿಂದೆ ಕಣ್ಮರೆಯಾಗಿದ್ದರು. ಊರು, ಕಾಡಿನ ಸುತ್ತಮುತ್ತ ಇಡೀ ಗ್ರಾಮಕ್ಕೆ ಗ್ರಾಮ ಆತನನ್ನು ಹುಡುಕಾಟ ಮಾಡಿತ್ತು. ಪೊಲೀಸರು ಅರಣ್ಯ ಇಲಾಖೆ ಕುಟುಂಬಸ್ಥರು ಎಷ್ಟೇ ಹುಡುಕಾಡಿದರೂ ಯುವಕನ ಪತ್ತೆ ಆಗಿರಲಿಲ್ಲ. ಮನೆಯ ಸಾಕು ನಾಯಿ ಯುವಕನನ್ನ 7 ದಿನದ ಬಳಿಕ ಕರೆದುಕೊಂಡು ಬಂದಿದೆ. ಇದರಿಂದ ಇಡೀ ಗ್ರಾಮಕ್ಕೆ ಅಚ್ಚರಿ ಮತ್ತು ಸಂತಸವಾಗಿದ್ದು, 50ಕ್ಕಿಂತ ಹೆಚ್ಚು ಬೈಕ್ ಟೆಂಪೋ ಆಟೋರಿಕ್ಷಾಗಳ ಮೆರವಣಿಗೆ ಮಾಡಲಾಯ್ತು.

ತೆರೆದ ವಾಹನದಲ್ಲಿ ಚಿಂಟು ಮತ್ತು ವಿವೇಕಾನಂದ ಕುಟುಂಬಸ್ಥರು ಆಪ್ತರನ್ನು ಗೆಳೆಯರ ಬಳಗ ಮೆರವಣಿಗೆ ಮಾಡಿದೆ. ನಂತರ ಮನೆಯಲ್ಲಿ ಕೇಕ್ ಕತ್ತರಿಸಿ ಹುಟ್ಟು ಹಬ್ಬದ ರೀತಿಯಲ್ಲೇ ವಿವೇಕಾನಂದ ವಾಪಾಸ್ ಬಂದ ಖುಷಿಯನ್ನು ಆಚರಿಸಲಾಯ್ತು. ಸುತ್ತಮುತ್ತಲ ಮನೆಯವರಿಗೆ ಗೆಳೆಯರ ಬಳಗಕ್ಕೆ ಹುಡುಕಾಡಲು ಸಹಾಯ ಮಾಡಿದ ಎಲ್ಲರಿಗೆ ಶೀನಾ ನಾಯ್ಕ ಕುಟುಂಬ ಸಿಹಿಯೂಟ ಹಾಕಿಸಿದೆ. ಇದನ್ನೂ ಓದಿ: ನಾಪತ್ತೆಯಾದ ಯುವಕನನ್ನು ಪತ್ತೆ ಮಾಡಿದ ಸಾಕುನಾಯಿ- ಘಟನೆ ಹಿಂದಿದೆ ರೋಚಕ ಕಥೆ

ಯುವಕ ವಿವೇಕಾನಂದ ಕಣ್ಮರೆಯಾದ ನಂತರ ಜ್ಯೋತಿಷಿಗಳಲ್ಲಿ ಪ್ರಶ್ನಾ ಚಿಂತನೆ ಮಾಡಲಾಗಿತ್ತು. ದೇವಸ್ಥಾನ, ದೈವಸ್ಥಾನದ ಮೊರೆ ಹೋಗಲಾಗಿತ್ತು. ಕುಟುಂಬಸ್ಥರು ಹರಕೆಯನ್ನು ಹೊತ್ತಿದ್ದರು. ತಮ್ಮ ಜಮೀನಿನಲ್ಲಿದ್ದ ಒಂದು ವಿಶೇಷ ಕಲ್ಲಿಗೆ ಪೂಜೆ ಪುನಸ್ಕಾರವನ್ನು ಕೂಡ ಕುಟುಂಬಸ್ಥರು ನೆರವೇರಿಸಿದ್ದಾರೆ. ಕಣ್ಮರೆಯಾಗುವ ಮೊದಲು ಆ ಯುವಕ ಕಲ್ಲಿನ ಮೇಲೆ ಕುಳಿತುಕೊಳ್ಳುತ್ತಿದ್ದ ಎಂದು ಕುಟುಂಬಸ್ಥರು ಹೇಳಿದ್ದು, ಆ ಕಲ್ಲಿನಲ್ಲಿ ದೈವೀಶಕ್ತಿ ಇರಬಹುದು ಎಂದು ಪೋಷಕರು ನಂಬಿದ್ದಾರೆ. ಈ ಘಟನೆಯ ಸತ್ಯಾಸತ್ಯತೆ ಕುರಿತಂತೆ ಚರ್ಚೆ ಕೂಡಾ ನಡೆಯುತ್ತಿದೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್