ವಂಶಿಕಾ ಹೆಸರಲ್ಲಿ ದೋಖಾ : ಬಗೆದಷ್ಟು ಬಯಲಾಗ್ತಿದೆ ನಿಶಾ ಕರ್ಮಕಾಂಡ

By
2 Min Read

ಟ ಮಾಸ್ಟರ್ ಆನಂದ್ (Master Anand) ಪುತ್ರಿ, ಬಾಲನಟಿ ವಂಶಿಕಾ (Vamshika) ಹೆಸರಿನಲ್ಲಿ ವಂಚನೆ ಮಾಡಿದ್ದ ಆರೋಪಿ ನಿಶಾ ನರಸಪ್ಪ (Nisha Narsappa) 14 ದಿನಗಳ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇತ್ತ ನಿಶಾ ಕುರಿತು ಬಗೆದಷ್ಟು ಕರ್ಮಕಾಂಡ ಬಯಲಾಗುತ್ತಿದೆ. ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು (Complaint) ಬಳಿಕ ಒಂದೊಂದು ಕೇಸ್ ಬೆಳಕಿಗೆ ಬರುತ್ತಿವೆ. ನಿಶಾ ನರಸಪ್ಪ ವಿರುದ್ದ ಈ ಹಿಂದೆಯೂ ಒಂದು ಕೇಸ್ ದಾಖಲಾಗಿದ್ದು ಗೊತ್ತಾಗಿದೆ.

ಕಳೆದ ತಿಂಗಳು ದಾಖಲಾದ ದೂರುಗಳ ಬೆನ್ನಲ್ಲೇ ಇದೀಗ ಸಾಕಷ್ಟು ಮಂದಿಯಿಂದ ದೂರುಗಳು ದಾಖಲೆಯಾಗುತ್ತಿವೆ. ಈ ಹಿಂದೆ ತಾರಾ ಎಂಬುವರಿಗೆ ನಿಶಾ ಇಪ್ಪತ್ತು ಲಕ್ಷ ರೂಪಾಯಿ ವಂಚನೆ (Fraud)ಮಾಡಿದ್ದರು ಎನ್ನುವ ಆರೋಪ ಕೂಡ ಇದೆ. ಈವೆಂಟ್ ಮ್ಯಾನೇಜ್ಮೆಂಟ್ ಹೆಸರಲ್ಲಿ ನಿಶಾ ಲಕ್ಷಾಂತರ ರೂಪಾಯಿ ಹಣ ವಂಚನೆ ಮಾಡಿದ್ದಾರಂತೆ. ಈ ಬಗ್ಗೆ ಕಳೆದ ತಿಂಗಳು ಯಲಹಂಕ ನ್ಯೂ ಟೌನ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇದನ್ನೂ ಓದಿ:ಮಳೆ, ಕೊರೆವ ಚಳಿ ನಡುವೆ ಕಾಶ್ಮೀರದಲ್ಲಿ ಸಾನ್ಯ ಟ್ರೆಕ್ಕಿಂಗ್

ಅಲ್ಲದೇ, ಕೋಣನಕುಂಟೆ ಹಾಗೂ ಜ್ಞಾನಭಾರತಿ ಠಾಣೆಯಲ್ಲಿ ನಿಶಾ ವಿರುದ್ದ ವಂಚನೆ ದೂರುಗಳು ದಾಖಲಾಗಿವೆ. ಸದಾಶಿವನಗರ ಠಾಣೆಯಲ್ಲಿ ದಾಖಲಾದ ಕೇಸ್ ನಲ್ಲಿ ಬರೋಬ್ಬರಿ 35 ಲಕ್ಷ ವಂಚನೆ ಮಾಡಿರೋದು ಬೆಳಕಿಗೆ ಬಂದಿದೆ. ಸಾಲದ ರೂಪದಲ್ಲಿ ಹಾಗೂ ಇನ್ವೆಸ್ಟ್ ಮಾಡಿದ್ರೆ ಲಾಭಾಂಶ ನೀಡುವುದಾಗಿ ನಿಶಾ ವಂಚನೆ ಮಾಡಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.

 

ಮೊದ ಮೊದಲು ಲಾಭಾಂಶದ ಹಣ ಕೊಟ್ಟು ಎರಡರಷ್ಟು ಹಣ ಪಡೆದು ವಂಚನೆ ಮಾಡಿದ್ದಾರಂತೆ ನಿಶಾ. ಬೆಂಗಳೂರು ದೊಡ್ಡ ಮಾಲ್ ಗಳಲ್ಲಿ ಈವೆಂಟ್ ಮ್ಯಾನೇಜ್ಮೆಂಟ್ ಮಾಡ್ತಿದ್ದ ರಾಮನಗರ ಮೂಲದ ನಿಶಾ, ಬೆಂಗಳೂರು ಹೊರಹೊಲಯದಲ್ಲಿನ ರೆಸಾರ್ಟ್ ಗಳಲ್ಲಿ ಶೂಟಿಂಗ್ ಮಾಡುವ ಮೂಲಕ ಪೋಷಕರಿಗೆ ಮಕ್ಮಲ್ ಟೋಪಿ ಹಾಕಿದ್ದಾರೆ ಎಂದು ಹೇಳಲಾಗುತ್ತಿದೆ. ಸದ್ಯ ಸದಾಶಿವನಗರ ಠಾಣೆಗೆ ಬರುತ್ತಿರುವ ದೂರುಗಳನ್ನು ತಮ್ಮ ಮನೆ ವ್ಯಾಪ್ತಿಯ ಠಾಣೆಯಲ್ಲಿ ನೀಡಲು ಅಧಿಕಾರಿಗಳು ಸೂಚನೆ ನೀಡಿದ್ದಾರೆ.

Web Stories

Share This Article
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್