ಮೋದಿ ನನ್ನ ಒಳ್ಳೆಯ ಸ್ನೇಹಿತ: ಮತ್ತೆ ಯೂಟರ್ನ್‌ ಹೊಡೆದ ಟ್ರಂಪ್‌

By
2 Min Read

ವಾಷಿಂಗ್ಟನ್‌: ನಾವು ಭಾರತ ಮತ್ತು ರಷ್ಯಾವನ್ನು ಚೀನಾಗೆ ಬಿಟ್ಟುಕೊಟ್ಟಿದ್ದೇವೆ ಎಂದು ಹೇಳಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಮತ್ತೆ ಯೂಟರ್ನ್‌ ಹೊಡೆದಿದ್ದಾರೆ. ಪ್ರಧಾನಿ ಮೋದಿ (PM Modi) ಅವರನ್ನು ಒಳ್ಳೆಯ ಸ್ನೇಹಿತ ಎಂದು ಟ್ರಂಪ್‌ ಬಣ್ಣಿಸಿದ್ದಾರೆ.

ಚೀನಾ ವಿಚಾರವಾಗಿ ಪೋಸ್ಟ್‌ ಮಾಡಿದ ಒಂದು ದಿನದ ನಂತರ ಟ್ರಂಪ್ ಈ ಪ್ರತಿಕ್ರಿಯೆ ನೀಡಿದ್ದಾರೆ. ಭಾರತ-ಅಮೆರಿಕ ಸಂಬಂಧವು ವಿಶೇಷವಾಗಿ ಉಳಿದಿದೆ. ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಬಲವಾದ ವೈಯಕ್ತಿಕ ಬಾಂಧವ್ಯವನ್ನು ಹಂಚಿಕೊಳ್ಳುವುದನ್ನು ಮುಂದುವರೆಸಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಭಾರತ ಇನ್ನೆರಡು ತಿಂಗಳಲ್ಲಿ ಟ್ರಂಪ್‌ ಕ್ಷಮೆಯಾಚಿಸುತ್ತೆ: ಅಮೆರಿಕ ವಾಣಿಜ್ಯ ಕಾರ್ಯದರ್ಶಿ

ಭಾರತ-ಅಮೆರಿಕ ನಡುವೆ ವಿಶೇಷ ಬಾಂಧವ್ಯ
ರಷ್ಯಾದ ತೈಲದ ಮೇಲಿನ ಸುಂಕಗಳು ಮತ್ತು ಖರೀದಿಗೆ ಸಂಬಂಧಿಸಿದಂತೆ ಅಮೆರಿಕ ಮತ್ತು ಭಾರತದ ನಡುವಿನ ಪ್ರಸ್ತುತ ಉದ್ವಿಗ್ನತೆಯ ಮಧ್ಯೆಯೂ ಈ ಹೇಳಿಕೆಗಳು ಬಂದಿವೆ. ನಾನು ಮೋದಿ ಅವರೊಂದಿಗೆ ಯಾವಾಗಲೂ ಸ್ನೇಹಿತನಾಗಿರುತ್ತೇನೆ. ಅವರು ಒಬ್ಬ ಮಹಾನ್ ಪ್ರಧಾನಿ. ಅವರು ಅದ್ಭುತ ವ್ಯಕ್ತಿ. ಆದರೆ, ಈ ನಿರ್ದಿಷ್ಟ ಸಂದರ್ಭದಲ್ಲಿ ಅವರು ಇಟ್ಟಿರುವ ಹೆಜ್ಜೆ ನನಗೆ ಇಷ್ಟವಿಲ್ಲ. ಆದರೆ, ಭಾರತ ಮತ್ತು ಅಮೆರಿಕ ನಡುವೆ ವಿಶೇಷ ಸಂಬಂಧವಿದೆ. ಚಿಂತಿಸುವ ಅಗತ್ಯವಿಲ್ಲ ಎಂದು ಟ್ರಂಪ್‌ ಓವಲ್ ಕಚೇರಿಯಲ್ಲಿ ಹೇಳಿದ್ದಾರೆ.

ಮೋದಿ-ಪುಟಿನ್-ಜಿನ್‌ಪಿಂಗ್‌ ಭೇಟಿಗೆ ಟ್ರಂಪ್‌ ಬೇಸರ
ಕಳೆದ ವಾರ ಟಿಯಾಂಜಿನ್‌ನಲ್ಲಿ ನಡೆದ ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆಯಲ್ಲಿ ಪ್ರಧಾನಿ ಮೋದಿ, ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ನಡುವಿನ ಸ್ಪಷ್ಟ ಸ್ನೇಹಪರತೆಯ ಬಗ್ಗೆ ಟ್ರಂಪ್‌ ಟೀಕಾತ್ಮಕ ಮಾತುಗಳನ್ನಾಡಿದ್ದರು. ನಾವು ಭಾರತ ಮತ್ತು ರಷ್ಯಾವನ್ನು ಚೀನಾಗೆ ಬಿಟ್ಟುಕೊಟ್ಟಿದ್ದೇವೆ ಎಂದೂ ಕೂಡ ಹೇಳಿದ್ದರು. ಅವರು ಒಟ್ಟಿಗೆ ದೀರ್ಘ ಮತ್ತು ಸಮೃದ್ಧ ಭವಿಷ್ಯವನ್ನು ಹೊಂದಿರಲಿ ಎಂದು ಟ್ರಂಪ್‌ ಪೋಸ್ಟ್‌ ಮಾಡಿದ್ದರು. ಇದನ್ನೂ ಓದಿ: ನಾವು ಭಾರತ, ರಷ್ಯಾವನ್ನು ಚೀನಾಗೆ ಬಿಟ್ಟು ಕೊಟ್ಟಿದ್ದೇವೆ: ಟ್ರಂಪ್‌

ಭಾರತ ಮತ್ತು ಇತರ ದೇಶಗಳೊಂದಿಗೆ ವ್ಯಾಪಾರ ಮಾತುಕತೆಗಳು ಹೇಗೆ ನಡೆಯುತ್ತಿವೆ ಎಂಬ ಪ್ರಶ್ನೆಗೆ ಟ್ರಂಪ್, ಅವರು ಉತ್ತಮವಾಗಿ ನಡೆಯುತ್ತಿದ್ದಾರೆ. ಇತರ ದೇಶಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ. ನಾವು ಅವರೆಲ್ಲರೊಂದಿಗೂ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದೇವೆ ಎಂದು ಪ್ರತಿಕ್ರಿಯಿಸಿದ್ದರು.

Share This Article