ಬೀದರ್: ರೈತರ ವಿಚಾರದಲ್ಲಿ ತಾತ್ಸಾರ ಬೇಡ, ಸಿಎಂ ಸಿದ್ದರಾಮಯ್ಯ (CM Siddaramaiah) ಬೆಂಗಳೂರಿಗೆ (Bengaluru) ಮಾತ್ರ ಸೀಮಿತರಾಗಿದ್ದಾರೆ ಎಂದು ಬಿಜೆಪಿ ರಾಜಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಕಿಡಿಕಾರಿದ್ದಾರೆ.
“ನೆರೆ ಸಂಕಷ್ಠಿತ ರೈತರ ನೆರವಿಗೆ ರಾಜ್ಯ ಸರ್ಕಾರ ಕೂಡಲೇ ಧಾವಿಸಲಿ-ಸೂಕ್ತ ತುರ್ತು ಪರಿಹಾರ ತಕ್ಷಣ ಘೋಷಿಸಲಿ”
ನೆರೆ ಪ್ರದೇಶಗಳ ಪ್ರವಾಸದ ಹಿನ್ನಲೆಯಲ್ಲಿಂದು ಬೀದರ್ ದಕ್ಷಿಣ ಹಾಗೂ ಬೀದರ್ ವಿಧಾನಸಭಾ ಕ್ಷೇತ್ರಗಳ ಮಳೆ ಹಾನಿಗೊಳಗಾದ ವಿವಿಧ ಭಾಗಗಳ ರೈತರ ಜಮೀನುಗಳಿಗೆ ಭೇಟಿ ನೀಡಿ ಬೇಳೆ ಹಾನಿ ಪರಿಶೀಲನೆ ನಡೆಸಿ ಸರ್ಕಾರ ಶೀಘ್ರ ಪರಿಹಾರ ಬಿಡುಗಡೆ… pic.twitter.com/IzdoBHOcod
— Vijayendra Yediyurappa (@BYVijayendra) September 29, 2025
ಬೀದರ್ (Bidar) ಸೇರಿದಂತೆ ಕಲ್ಯಾಣ ಕರ್ನಾಟಕದಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾದ ಹಿನ್ನೆಲೆ ಬಿವೈ ವಿಜಯೇಂದ್ರ ಸೇರಿದಂತೆ ಬಿಜೆಪಿ ತಂಡ ನೆರೆ ವೀಕ್ಷಣೆ ಮಾಡಿದರು. ಈ ವೇಳೆ ಮಾತನಾಡಿದ ಅವರು, ಸಿಎಂಗೆ ಕಲ್ಯಾಣ ಕರ್ನಾಟಕದ ಬಗ್ಗೆ ಕಾಳಜಿ ಇಲ್ಲ, ಈ ಭಾಗದಲ್ಲಿ ರೈತರ ಬೆಳೆಗಳು ಸಂಪೂರ್ಣವಾಗಿ ಸರ್ವನಾಶವಾಗಿದೆ. ಕಳೆದ ಒಂದು ತಿಂಗಳಿಂದ ಮಳೆಯಾಗಿ ಎಲ್ಲಾ ಬೆಳೆಗಳು ನಾಶವಾಗಿದೆ. ರೈತರ ವಿಚಾರದಲ್ಲಿ ಸಿಎಂ ತಾತ್ಸಾರ ಬೇಡ, ಸಿಎಂ ಸಿದ್ದರಾಮಯ್ಯ ಬೆಂಗಳೂರಿಗೆ ಸೀಮಿತರಾಗಿದ್ದಾರೆ. ಇಂತಹ ಸಮಯದಲ್ಲಿ ಸಿಎಂ ಹಾಗೂ ಸಚಿವರ ಹುಡುಗಾಟ ಬೇಡ ಎಂದು ವಾಗ್ದಾಳಿ ನಡೆಸಿದ್ದಾರೆ.ಇದನ್ನೂ ಓದಿ: ಸರ್ಕಾರದಿಂದ ಉತ್ತರ ಕರ್ನಾಟಕಕ್ಕೆ 3,000 ಕೋಟಿ ಪ್ರವಾಹ ಪರಿಹಾರ ನೀಡಬೇಕು – ಅಶೋಕ್ ಆಗ್ರಹ
“ನೆರೆ ಸಂಕಷ್ಠಿತ ಅನ್ನದಾತರನ್ನು ಸಂಪೂರ್ಣ ನಿರ್ಲಕ್ಷಿಸಿರುವ ರೈತ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ”
ನೆರೆ ಪೀಡಿತ ಪ್ರದೇಶಗಳ ಪ್ರವಾಸದ ಹಿನ್ನಲೆಯಲ್ಲಿಂದು ಬೀದರ್ ಜಿಲ್ಲೆಯ ಭಾಲ್ಕಿ ವಿಧಾನಸಭಾ ಕ್ಷೇತ್ರದ ನಿಟ್ಟೂರು ಹಾಗೂ ಔರಾದ್ ವಿಧಾನಸಭಾ ಕ್ಷೇತ್ರದ ಸವಳಿಸಂಗಮದಲ್ಲಿ ಮಳೆ ಹಾನಿಗೊಳಗಾದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಬೆಳೆ ಹಾನಿ… pic.twitter.com/pH8jZ1FqNZ
— Vijayendra Yediyurappa (@BYVijayendra) September 29, 2025
ರಾಜ್ಯ ಸರ್ಕಾರ ತಮ್ಮ ಜವಾಬ್ದಾರಿ ನಿರ್ವಹಿಸುತ್ತಿಲ್ಲ. ಬಿಎಸ್‌ವೈ ಮನೆ ಕಳೆದುಕೊಂಡವರಿಗೆ ಕೇಂದ್ರದ ಕಡೆ ನೋಡದೆ ಪರಿಹಾರ ಕೊಟ್ಟಿದ್ದರು. ಇನ್ನು ತಡಮಾಡದೇ ನೀವು, ನಿಮ್ಮ ಸಚಿವರು ಇಲ್ಲಿಗೆ ಧಾವಿಸಿ ಎಂದು ಆಕ್ರೋಶ ಹೊರಹಾಕಿದ್ದಾರೆ.