ಗೃಹಲಕ್ಷ್ಮಿ ಹಣವನ್ನು ನಿಮ್ಮ ಗಂಡಂದಿರಿಗೆ ಕೊಡಬೇಡಿ – ಮಹಿಳೆಯರಿಗೆ ಡಿಕೆಶಿ ಕರೆ

Public TV
2 Min Read

ರಾಮನಗರ: ಮಹಿಳೆಯರೇ ಗೃಹಲಕ್ಷ್ಮಿ ಯೋಜನೆಯ (Gruhalakshmi Yojana) ಹಣ 2,000 ರೂ.ಗಳನ್ನು ನಿಮ್ಮ ಗಂಡಂದಿರಿಗೆ ಕೊಡಬೇಡಿ ಎಂದು ಡಿಸಿಎಂ ಡಿ.ಕೆ ಶಿವಕುಮಾರ್‌ (DK Shivakumar) ಕರೆ ನೀಡಿದ್ದಾರೆ.

ರಾಜ್ಯದಲ್ಲಿ 2,000 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು (Karnataka Public School) ನಿರ್ಮಾಣ ಮಾಡುವ ಶಿಕ್ಷಣ ಕ್ರಾಂತಿಗೆ ಕೆಂಪೇಗೌಡರ ತವರು ಮಾಗಡಿಯಲ್ಲಿ ಚಾಲನೆ ದೊರೆತಿದೆ. ಮಾಗಡಿಯ ಕುದೂರಿನಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲಾ ಕಟ್ಟಡಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್‌ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ್ದಾರೆ. ಮಹಿಳೆಯರೇ ಗೃಹಲಕ್ಷ್ಮಿ ಯೋಜನೆಯ ಹಣವನ್ನು ನಿಮ್ಮ ಗಂಡಂದಿರಿಗೆ ನೀಡಬೇಡಿ, ಉಳಿತಾಯ ಮಾಡಿ, ಮಕ್ಕಳ ಭವಿಷ್ಯಕ್ಕೆ ಬಳಸಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ವೀಲಿಂಗ್‌ ಮಾಡಿದ ಬೈಕ್‌ ಸುಟ್ಟು ಹಾಕಿ, 45 ಲಕ್ಷ ಸಬ್‌ಸ್ಕ್ರೈಬ್‌ ಇರೋ ಯೂಟ್ಯೂಬ್‌ ಚಾನೆಲನ್ನು ಕಿತ್ತಾಕಿ: ಹೈಕೋರ್ಟ್‌ ಚಾಟಿ

ಇದಕ್ಕೂ ಮುನ್ನ ಮಕ್ಕಳ ಶಿಕ್ಷಣದ ಬಗ್ಗೆ ಮಾತನಾಡಿದ ಡಿಕೆಶಿ, ಗ್ರಾಮೀಣ ಪ್ರದೇಶದ ಮಕ್ಕಳು ನಗರ ಪ್ರದೇಶಗಳಿಗೆ ಶಿಕ್ಷಣಕ್ಕೆ ವಲಸೆ ಹೋಗುವುದು ತಪ್ಪಬೇಕು. ಅದಕ್ಕಾಗಿ ಪ್ರತಿ ಪಂಚಾಯಿತಿ ವ್ಯಾಪ್ತಿಯಲ್ಲಿ ಅಂತರರಾಷ್ಟ್ರೀಯ ಗುಣಮಟ್ಟದ ಶಿಕ್ಷಣ ಕಲ್ಪಿಸುವ ಕರ್ನಾಟಕ ಪಬ್ಲಿಕ್‌ ಶಾಲೆಗಳನ್ನ ನಿರ್ಮಾಣ ಮಾಡಬೇಕೆಂಬುದು ಸರ್ಕಾರದ ಕನಸಾಗಿದೆ. ಆದಷ್ಟು ಬೇಗ ಇದನ್ನು ಕಾರ್ಯಗತ ಮಾಡಲಿದ್ದೇವೆ. ಗ್ರಾಮೀಣ ಭಾಗದಲ್ಲಿ ಸುಮಾರು 16 ಕೋಟಿ ರೂ. ವೆಚ್ಚದಲ್ಲಿ ಸರ್ಕಾರಿ ಶಾಲೆ ನಿರ್ಮಾಣ ಮಾಡಲು ಹೊರಟಿರುವುದು ಕ್ರಾಂತಿಕಾರಿ ಆಲೋಚನೆ. ಇಂತಹ ಸುಸಜ್ಜಿತ ಶಾಲೆ ನಿರ್ಮಾಣ ಮಾಡಲು ಹೊರಟಿರುವ ಟೊಯೋಟೊ ಕಿರ್ಲೋಸ್ಕರ್ ಸಂಸ್ಥೆಗೆ ನಾವೆಲ್ಲಾ ಅಭಾರಿಯಾಗಿರುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕ್ಲಾಸ್‍ಮೇಟ್ ಜೊತೆ ಪ್ರೀತಿ – ಕುಟುಂಬಸ್ಥರಿಗೆ ಮಾಹಿತಿ ನೀಡಿದ ಶಿಕ್ಷಕನಿಗೆ ಗುಂಡೇಟು ನೀಡಿದ ವಿದ್ಯಾರ್ಥಿ

ಟೊಯೋಟೊ ಕಿರ್ಲೋಸ್ಕರ್ ಸಂಸ್ಥೆಯವರು ರಾಮನಗರ ಜಿಲ್ಲೆಯ 4 ತಾಲ್ಲೂಕುಗಳಲ್ಲಿ ಒಂದೊಂದು ಶಾಲೆ ನಿರ್ಮಾಣ ಮಾಡುವುದಾಗಿ ಮಾತುಕೊಟ್ಟಿದ್ದಾರೆ. ರಾಮನಗರ ಜಿಲ್ಲೆಯಲ್ಲಿ ಇರುವ ಎಲ್ಲಾ ಕೈಗಾರಿಕೆಗಳ ಸಿಎಸ್ಆರ್ ಹಣವನ್ನು ಶಿಕ್ಷಣಕ್ಕೆ ಮಾತ್ರ ಬಳಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: P-8I Poseidon: ಹಿಂದೂ ಮಹಾಸಾಗರದ ಕಾವಲುಗಾರ – ಬೋಯಿಂಗ್ P-8I ವಿಮಾನ

ಇದೇ ವೇಳೆ ಗೃಹಲಕ್ಷ್ಮಿ ಯೋಜನೆಯ ಗ್ಯಾರಂಟಿ ಬಗ್ಗೆ ಮಾತನಾಡಿ, ಜಿಲ್ಲೆಯಲ್ಲಿ 88% ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ತಲುಪಿದೆ. ಮಿಕ್ಕ ಅರ್ಜಿದಾರರಿಗೆ ಬ್ಯಾಂಕ್ ಖಾತೆ ಸಮಸ್ಯೆಯಿಂದ ಹಣ ತಲುಪಿಲ್ಲ ಈ ಸಮಸ್ಯೆಯನ್ನು ಬೇಗ ಬಗೆಹರಿಸಲಾಗುವುದು. ಬೆಲೆ ಏರಿಕೆಯಿಂದ ನಮ್ಮ ಗ್ರಾಮೀಣ ಪ್ರದೇಶದ ಜನರು ತತ್ತರಿಸಿ ಹೋಗಿದ್ದರು. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಸ್ವಲ್ಪ ಉಸಿರಾಡುವಂತೆ ಮಾಡಿವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 2,58,000 ಕುಟುಂಬಗಳಿಗೆ ಅನ್ನಭಾಗ್ಯ ಯೋಜನೆಯ ಹಣ ತಲುಪಿಸಿದ್ದೇವೆ ಎಂದು ಹೇಳಿದ್ದಾರೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್